News Karnataka Kannada
Thursday, May 09 2024
ದೇಶ

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: ಅಪರಿಚಿತರಿಂದ ಗುಂಡಿನ ದಾಳಿ

violence in Manipur
Photo Credit : By Author

ಇಂಫಾಲ: ಮಣಿಪುರದ ಬಿಷ್ಣುಪುರ್ ಜಿಲ್ಲೆಯಲ್ಲಿ ಅಪರಿಚಿತ ಬಂದೂಕುಧಾರಿಗಳು ನಡೆಸಿದೆ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಇಬ್ಬರು ಸ್ವಯಂಸೇವಕರು ಸಾವನ್ನಪ್ಪಿದ್ದಾರೆಂದು ಪೊಲೀಸರು ಇಂದು (ಜು.02) ಮಾಹಿತಿ ನೀಡಿದ್ದಾರೆ.

ತಡರಾತ್ರಿ ಖೋಯಿಜುಮಂತಬಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ‘ಗ್ರಾಮದ ಸ್ವಯಂಸೇವಕರು’ ತಾತ್ಕಾಲಿಕ ಬಂಕರ್ನಲ್ಲಿ ಕಾವಲು ಕಾಯುತ್ತಿದ್ದರು. ಈ ವೇಳೆ ಗುಂಡಿನ ದಾಳಿ ನಡೆದಿದೆ ಎಂದು ಹೇಳಿದ್ದಾರೆ. ಭದ್ರತಾ ಪಡೆಗಳು ಸ್ಥಳಕ್ಕೆ ತೆರಳುವವರೆಗೂ ಸ್ಥಳದಲ್ಲಿ ಭಾರೀ ಗುಂಡಿನ ಚಕಮಕಿ ನಡೆದಿದ್ದು, ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ ಏರಿಕೆಯಾಗುವ ಸಾಧ್ಯತೆಗಳಿವೆ ಎಂದು ತಿಳಿಸಿದ್ದಾರೆ.
ಈಶಾನ್ಯ ರಾಜ್ಯದಲ್ಲಿ ಇದುವರೆಗೆ ಮೈಟೆಯಿ ಮತ್ತು ಕುಕಿ ಸಮುದಾಯಗಳ ನಡುವಿನ ಜನಾಂಗೀಯ ಹಿಂಸಾಚಾರದಲ್ಲಿ 100 ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು