ದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಮಧ್ಯಂತರ ಬಜೆಟ್ ಮಂಡಿಸಲಿದ್ದಾರೆ. ಹಣಕಾಸು ಸಚಿವರಾಗಿ ಸೀತಾರಾಮನ್ ಮಂಡಿಸಲಿರುವ 6ನೇ ಬಜೆಟ್ ಇದಾಗಿದೆ. ಹಾಗೆಯೇ ಪ್ರಧಾನಿ ಮೋದಿ ಸರ್ಕಾರದ 2ನೇ ಅವಧಿಯ ಕೊನೆಯ ಬಜೆಟ್ ಕೂಡ ಇದಾಗಿರಲಿದೆ. ಬಜೆಟ್ ಮಂಡನೆ ಬೆಳಗ್ಗೆ 11 ಗಂಟೆಗೆ ಶುರುವಾಗಲಿದೆ.
ಇನ್ನು ನೂತನ ಸಂಸತ್ತಿನಲ್ಲಿ ಮೊದಲ ಬಜೆಟ್ ಮಂಡನೆಯಾಗುತ್ತಿದ್ದು, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ರಾಷ್ಟ್ರಪತಿ ಭವನ ತಲುಪಿದ್ದಾರೆ. ಹಾಗೆಯೇ ಮಧ್ಯಂತರ ಬಜೆಟ್ ಪ್ರತಿಗಳು ಪಾರ್ಲಿಮೆಂಟ್ ತಲುಪಿದೆ. ಬಜೆಟ್ ಮಂಡನೆಗೂ ಮುನ್ನ ಸಚಿವ ಸಂಪುಟ ಸಭೆ ನಡೆಯುತ್ತಿದೆ. ಸಭೆಯಲ್ಲಿ ಬಜೆಟ್ಗೆ ಸಂಪುಟದ ಒಪ್ಪಿಗೆ ಸಿಗಲಿದೆ. ಸಭೆಯಲ್ಲಿ ಪ್ರಧಾನಿ ಮೋದಿ ಸೇರಿದಂತೆ ಪ್ರಮುಖರಿದ್ದಾರೆ.
ಬಜೆಟ್ಗೆ ಮೋದಿ ಸಂಪುಟದ ಒಪ್ಪಿಗೆ ಸಿಕ್ಕಿದೆ. ಈ ಸಂದರ್ಭದಲ್ಲಿ ರಾಷ್ಟ್ರಪತಿ ಮುರ್ಮು ಅವರು ನಿರ್ಮಲಾ ಸೀತಾರಾಮನ್ಗೆ ಸಿಹಿ ತಿನ್ನಿಸಿದರು.
Union Minister of Finance and Corporate Affairs Smt Nirmala Sitharaman along with Ministers of State Dr Bhagwat Kishanrao Karad and Shri Pankaj Chaudhary and senior officials of the Ministry of Finance called on President Droupadi Murmu at Rashtrapati Bhavan before presenting the… pic.twitter.com/miwSv8r4dE
— President of India (@rashtrapatibhvn) February 1, 2024
ಬಜೆಟ್ ಮಂಡನೆ ಬೆಳಗ್ಗೆ 11 ಗಂಟೆಗೆ ಶುರುವಾಗಲಿದೆ. ನಿರ್ಮಲಾ ಸೀತಾರಾಮನ್ ಅವರ ಬಜೆಟ್ ಭಾಷಣದ ನೇರ ಪ್ರಸಾರವನ್ನು ಡಿಡಿ ನ್ಯೂಸ್ನಲ್ಲಿ ವೀಕ್ಷಿಸಬಹುದಾಗಿದೆ.
ಲೋಕಸಭೆ ಚುನಾವಣೆಯ ನಂತರ ಸರ್ಕಾರ ರಚನೆಯಾಗುವವರೆಗೆ ಮಧ್ಯಂತರ ಬಜೆಟ್ ಮಧ್ಯಂತರ ಅವಧಿಯ ಹಣಕಾಸಿನ ಅಗತ್ಯಗಳನ್ನು ನೋಡಿಕೊಳ್ಳುತ್ತದೆ. ಹೊಸ ಸರ್ಕಾರದಿಂದ ಪೂರ್ಣ ಪ್ರಮಾಣದ ಬಜೆಟ್ ಮಂಡಿಸಲಾಗುವುದು.
Read More:
1.
2.