News Karnataka Kannada
Thursday, April 25 2024
Cricket
ದೇಶ

ಬಡವರು, ಮಹಿಳೆಯರು, ಯುವಕರು, ರೈತರ ಏಳಿಗೆಯೇ ನಮ್ಮ ಆದ್ಯತೆ: ಸೀತಾರಾಮನ್

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2024-25ನೇ ಸಾಲಿನ ಮಧ್ಯಂತರ ಬಜೆಟ್ ಅನ್ನು ಇಂದು (ಫೆ.01) ಸಂಸತ್ತಿನಲ್ಲಿ ಮಂಡಿಸಿದರು. ಹಣಕಾಸು ಸಚಿವರು 58 ನಿಮಿಷಗಳ ಸುದೀರ್ಘ ಭಾಷಣ ಮಾಡಿದರು.
Photo Credit : News Kannada

ದೆಹಲಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಅವರು ಸಂಸತ್​ನಲ್ಲಿ 2024ನೇ ಸಾಲಿನ ಬಜೆಟ್ ಮಂಡಿಸುತ್ತಿದ್ದಾರೆ. ಸತತ ಆರನೇ ಬಾರಿಗೆ ಸೀತಾರಾಮನ್ ಬಜೆಟ್ ಮಂಡನೆ ಮಾಡ್ತಿದ್ದು ನಿರೀಕ್ಷೆಗಳು ಹೆಚ್ಚಾಗಿವೆ. ಯಾಕಂದರೆ ಚುನಾವಣೆ ವರ್ಷ ಹಿನ್ನೆಲೆಯಲ್ಲಿ ಮೋದಿ ನೇತೃತ್ವದ ಎನ್​ಡಿಎ ಒಕ್ಕೂಟ ಹ್ಯಾಟ್ರಿಕ್ ಗೆಲುವಿನ ತಂತ್ರದಲ್ಲಿದೆ. ಹೀಗಾಗಿ ಬಂಪರ್ ಯೋಜನೆಗಳನ್ನು ಬಜೆಟ್​ನಲ್ಲಿ ಘೋಷಣೆ ಮಾಡಲಿದ್ದಾರೆ.

ಬಡವರು, ಮಹಿಳೆಯರು, ಯುವಕರು, ರೈತರ ಏಳಿಗೆಯೇ ನಮ್ಮ ಆದ್ಯತೆ ಎಂದಿದ್ದಾರೆ.  ಕ್ರೀಡೆಯಲ್ಲಿ ಹೊಸ ಎತ್ತರಕ್ಕೆ ಏರುತ್ತಿರುವ ನಮ್ಮ ಯುವಕರ ಬಗ್ಗೆ ದೇಶಕ್ಕೆ ಹೆಮ್ಮೆ ಇದೆ. 2023 ರಲ್ಲಿ ಏಷ್ಯನ್ ಗೇಮ್ಸ್ ಮತ್ತು ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಅತ್ಯಧಿಕ ಪದಕಗಳ ಸಂಖ್ಯೆಯು ಹೆಚ್ಚಿನ ಆತ್ಮವಿಶ್ವಾಸವನ್ನು ತೋರಿಸುತ್ತದೆ. ಮುಂದಿನ ದಿನಗಳಲ್ಲಿ ಯವಕರ ಏಳಿಗೆಗೆ ಆದ್ಯತೆ ಮತ್ತಷಟು ನೀಡಲಾಗುವುದು ಎಂದರು.  ಯಾವುದೇ ತಾರತಮ್ಯವಿಲ್ಲದೆ ಎಲ್ಲಾ ಅರ್ಹ ಜನರಿಗೂ ಸರ್ಕಾರದ ಯೋಜನಗಳು ಲಭ್ಯವಿವೆ. ಎಲ್ಲಾ ಅರ್ಹರಿಗೂ ಸಂಪನ್ಮೂಲಗಳನ್ನು ಪಾರದರ್ಶಕವಾಗಿ ವಿತರಿಸಲಾಗುವುದು ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.

ಅಲ್ಲದೇ  ದೇಶದಲ್ಲಿ ಹೆಚ್ಚಿನ ವೈದ್ಯಕೀಯ ಕಾಲೇಜುಗಳನ್ನು ತೆರೆಯಲು ಒತ್ತು ನೀಡಲಾಗುವುದು, ಅಂಗನವಾಡಿ ಕೇಂದ್ರವನ್ನು ಮೇಲ್ದರ್ಜೆಗೇರಿಸಲಾಗುವುದು.  ಆಶಾ ಕಾರ್ಯಕರ್ತೆಯರಿಗೆ, ಅಂಗನವಾಡಿ ಕಾರ್ಯಕರ್ತೆಯರಿಗೆ, ಸಿಬ್ಬಂದಿಗ ಆಯುಷ್ಮಾನ್ ಭಾರತ್ ಯೋಜನೆ ವಿಸ್ತರಣೆ ಮಾಡಲಾಗುವುದು.  ಮುಂದಿನ 5 ವರ್ಷದಲ್ಲಿ 5 ಕೋಟಿ ಹೊಸ ಮನೆಗಳ ನಿರ್ಮಾಣಕ್ಕೆ ಒತ್ತು ನೀಡಿ ಸೋಲಾರ್ ಮೂಲಕ ಪ್ರತಿಮನೆಗೂ ವಿದ್ಯುತ್ ನೀಡಲಾಗುವುದು

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು