News Karnataka Kannada
Friday, April 12 2024
Cricket
ಉತ್ತರ ಪ್ರದೇಶ

ಅಸಾರಾಂ ಬಾಪು ಆಶ್ರಮದಲ್ಲಿ ನಿಲ್ಲಿಸಿದ್ದ ಕಾರಿನ ಡಿಕ್ಕಿಯಲ್ಲಿ ಬಾಲಕಿಯ ಮೃತದೇಹ ಪತ್ತೆ

Ashram
Photo Credit :

ವಿವಾದಾತ್ಮಕ ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಆಶ್ರಮದಲ್ಲಿ ನಿಲ್ಲಿಸಿದ್ದ ಕಾರಿನ ಡಿಕ್ಕಿಯಲ್ಲಿ 13 ವರ್ಷದ ಬಾಲಕಿಯ ಮೃತದೇಹ ಪತ್ತೆಯಾಗಿದೆ.

ಉತ್ತರ ಪ್ರದೇಶದ ಗೊಂಡಾದಲ್ಲಿ ಹಲವು ದಿನಗಳ ಹಿಂದೆ ಕಣ್ಮರೆಯಾಗಿದ್ದ ಬಾಲಕಿಯ ದೇಹ ಕಾರಿನ ಡಿಕ್ಕಿಯಲ್ಲಿ 1 ಶುಕ್ರವಾರ ನಸುಕಿನಲ್ಲಿ ಸಿಕ್ಕಿದೆ.

ಬಾಲಕಿಯ ಮೃತದೇಹವನ್ನು ಪೋಸ್ಟ್‌ ಮಾರ್ಟನ್‌ಗೆ ಕಳುಹಿಸಲಾಗಿದೆ. ಕೊಟ್ವಾಲಿ ಪ್ರದೇಶದ ಬೆಮೌರ್ ಗ್ರಾಮದ ಸಮೀಪ ಇರುವ ಅಸಾರಾಂ ಬಾಪು ಆಶ್ರಮದ ನೌಕರರನ್ನು ಪೊಲೀಸರು ಈಗಾಗಲೇ ವಿಚಾರಣೆಗೆ ಒಳಪಡಿಸುತ್ತಿದ್ದಾರೆಎಂದು ಅವರು ಹೇಳಿದ್ದಾರೆ.

ಆಶ್ರಮದ ಆವರಣದ ಭಾಗದಲ್ಲಿ ನಿಲ್ಲಿಸಿದ್ದ ಕಾರಿನಿಂದ ಕೆಟ್ಟ ವಾಸನೆ ಬರುತ್ತಿರುವುದನ್ನು ಗ್ರಹಿಸಿದ ವಾಚ್ ಮ್ಯಾನ್ ಸುಮನ್ ಪಾಂಡೆ, ಅದರ ಒಳಗೆ ಮೃತದೇಹ ಇರುವುದನ್ನು ಪತ್ತೆ ಹಚ್ಚಿದ್ದಾನೆ. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ಪೊಲೀಸರು ಆಶ್ರಮವನ್ನು ಸಂಪೂರ್ಣವಾಗಿ ಸೀಲ್ ಮಾಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು