News Karnataka Kannada
Friday, April 19 2024
Cricket
ಉತ್ತರ ಪ್ರದೇಶ

ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಐವರ ದಾರುಣ ಹತ್ಯೆ!

Crime.
Photo Credit :

ಪ್ರಯಾಗ್‌ರಾಜ್: ಉತ್ತರ ಪ್ರದೇಶದ ಪ್ರಯಾಗರಾಜ್ ನಲ್ಲಿ ಎರಡು ವರ್ಷದ ಮಗು ಸೇರಿದಂತೆ ಒಂದೇ ಕುಟುಂಬದ ಐವರು ಮನೆಯಲ್ಲಿಯೇ ಹತ್ಯೆಯಾಗಿರುವ ಘಟನೆ  ನಡೆದಿದೆ.

ಬೆಳ್ಳಂಬೆಳಗ್ಗೆ ಮನೆಗೆ ನುಗ್ಗಿದ ದುಷ್ಕರ್ಮಿಗಳು ಇಡೀ ಕುಟುಂಬವನ್ನೇ ಕೊಂದಿದ್ದಾರೆ. ನಿರ್ಭೀತ ಹಂತಕರು ಪತಿ, ಪತ್ನಿ, ಮಗಳು, ಸೊಸೆ ಮತ್ತು ಅಮಾಯಕ ಮೊಮ್ಮಗಳ ಮೇಲೆ ಹಲ್ಲೆ ನಡೆಸಿ ಕೊಂದಿದ್ದಾರೆ

ರಸ್ತೆ ಬದಿಗೆ ಇದ್ದ ಮನೆಥರವಾಯಿ ಪೊಲೀಸ್ ಠಾಣಾ ವ್ಯಾಪ್ತಿಯ ಗರಾಪುರದಿಂದ ಸಿಕಂದ್ರಕ್ಕೆ ಹೋಗುವ ರಸ್ತೆಯ ಬದಿಯಲ್ಲಿ ಕುಟುಂಬವೊಂದು ವಾಸಿಸುತ್ತಿತ್ತು.

ರಾಮ್ ಕುಮಾರ್ ಯಾದವ್, ಪತ್ನಿ ಕುಸುಮ್ ದೇವಿ ಮಗಳು ಮನಿಶಾ ಮತ್ತು ಸೊಸೆ ಸವಿತಾ ಹಾಗೂ ಮೀನಾಕ್ಷಿ ಮೃತರು. ಅಪರಾಧದ ಸಮಯದಲ್ಲಿ ಯಾದವ್ ಅವರ ಮಗ ಸುನೀಲ್ ಘಟನೆ ನಡೆದಾಗ ಮನೆಯಲ್ಲಿರಲಿಲ್ಲ. ಹತ್ಯೆಯ ನಂತರ ದುಷ್ಕರ್ಮಿಗಳು ಮನೆಗೆ ಬೆಂಕಿ ಹಚ್ಚಿದ್ದಾರೆ.

ಈ ವೇಳೆ ಬೆಳಗ್ಗೆ ಮನೆಯಿಂದ ಹೊಗೆ ಬರುತ್ತಿರುವುದನ್ನು ಕಂಡ ದಾರಿಹೋಕರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಈ ವೇಳೆ ಎಲ್ಲರೂ ಕೊಲೆಯಾಗಿರುವುದು ಬೆಳಕಿಗೆ ಬಂದಿದೆ. ಕೂಡಲೇ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ಕೈಗೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು