News Karnataka Kannada
Thursday, April 18 2024
Cricket
ಉತ್ತರ ಪ್ರದೇಶ

ಕಳೆದೆರಡು ವರ್ಷಗಳಲ್ಲಿ ಕೋಟಿ ಕೋಟಿ ಆಸ್ತಿ ಜಪ್ತಿ

Untitled 49
Photo Credit :

ಲಕ್ನೋ: ಉತ್ತರಪ್ರದೇಶದಲ್ಲಿ ಯೋಗಿ ಆದಿತ್ಯನಾಥ್‌ ನೇತೃತ್ವದ ಬಿಜೆಪಿ ಸರ್ಕಾರ, ಕಳೆದೆರಡು ವರ್ಷಗಳಲ್ಲಿ ನಾನಾ ಭ್ರಷ್ಟಾಚಾರಿಗಳಿಗೆ ಸೇರಿದ 268 ಕೋಟಿ ರೂ. ಮೌಲ್ಯದ ಆಸ್ತಿಪಾಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ ಎಂದು ಗೃಹಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ಅವನೀಶ್‌ ಕುಮಾರ್‌ ಅವಸ್ಥಿ ಹೇಳಿದ್ದಾರೆ.

ನಮ್ಮ ಸರ್ಕಾರ ಯಾವುದೇ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವ ಮುನ್ನ ಅದು ಅಕ್ರಮವೇ, ಸಕ್ರಮವೇ ಎಂದು ಪರಿಶೀಲಿಸುತ್ತದೆ. ಅದು ಅಕ್ರಮ ಆಸ್ತಿಯಾಗಿದ್ದರೆ, ಅದನ್ನು ನಾಶ ಮಾಡಲು ಕ್ರಮ ತೆಗೆದುಕೊಳ್ಳಲಾಗುತ್ತದೆ. ಅದನ್ನೇ ಬುಲ್ಡೋಜರ್‌ ಆಡಳಿತ ಎಂದು ವರ್ಣಿಸಲಾಗುತ್ತಿದೆ” ಎಂದಿರುವ ಅವರು, “ಉತ್ತರಪ್ರದೇಶದಲ್ಲಿ ಭ್ರಷ್ಟಾಚಾರಿಗಳ ಹೆಡೆಮುರಿ ಕಟ್ಟುವವರೆಗೆ ಕಾರ್ಯಾಚರಣೆ ನಿಲ್ಲಿಸುವುದಿಲ್ಲ” ಎಂದು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು