News Karnataka Kannada
Monday, April 15 2024
Cricket
ಉತ್ತರ ಪ್ರದೇಶ

ಪತ್ನಿ ಮತ್ತು ಮೂವರು ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಪತಿ

Crime.
Photo Credit :

ಉತ್ತರ ಪ್ರದೇಶ:  ನವಾಬ್‍ಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ಕಗಲ್‍ಪುರ ಗ್ರಾಮದಲ್ಲಿ ಮೂವರು ಮುದ್ದಾದ ಮಕ್ಕಳು ಹಾಗೂ ಪತ್ನಿಯನ್ನು ಬರ್ಬರವಾಗಿ ಕೊಂದ ವ್ಯಕ್ತಿಯೊಬ್ಬ ತಾನೂ ನೇಣಿಗೆ ಶರಣಾಗಿರುವ ಘಟನೆ  ನಡೆದಿದೆ.

ಮೃತರನ್ನು ರಾಹುಲ್‍ತಿವಾರಿ ಅವರ ಪತ್ನಿ ಪ್ರೀತಿ ಮತ್ತು ಮೂವರು ಪುತ್ರಿಯರಾದ ಮಹಿ, ಪುಹು ಮತ್ತು ಪೋಹು ಎಂದು ಗುರುತಿಸಲಾಗಿದೆ.

ಮನೆಯೊಳಗೆ ಪತ್ತೆಯಾದ ಐದು ಮೃತ ದೇಹಗಳ ಪೈಕಿ ನಾಲ್ವರನ್ನು ಚೂಪಾದ ಆಯುಧದಿಂದ ಹತ್ಯೆ ಮಾಡಲಾಗಿದ್ದು, ಮನೆಯ ಯಜಮಾನನ ದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಶ್ವಾನದಳ ಜತೆಗೆ ದೌಡಾಯಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ರಾಹುಲ್ ತಿವಾರಿ ಮೂವರು ಮಕ್ಕಳನ್ನು ಒಬ್ಬೊಬ್ಬರನ್ನಾಗಿ ಕೊಲೆ ಮಾಡಿ ಬಳಿಕ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದೆ. ಪ್ರಕರಣದ ಸಂಪೂರ್ಣ ತನಿಖೆಯ ನಂತರವೇ ಮಾಹಿತಿ ತಿಳಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು