News Karnataka Kannada
Thursday, April 25 2024
Cricket
ಉತ್ತರ ಪ್ರದೇಶ

ಮಸೀದಿಗಳಲ್ಲಿ ಧ್ವನಿವರ್ಧಕಗಳನ್ನು ಅಳವಡಿಸುವುದು ಮೂಲಭೂತ ಹಕ್ಕಲ್ಲ: ಅಲಹಾಬಾದ್ ಹೈಕೋರ್ಟ್

Sounds
Photo Credit :

ಅಲಹಾಬಾದ್‌:  ‘ಮಸೀದಿಗಳಲ್ಲಿ ಧ್ವನಿವರ್ಧಕಗಳನ್ನು ಅಳವಡಿಸುವುದು ಮೂಲಭೂತ ಹಕ್ಕಲ್ಲ’ ಎಂದು ಅಲಹಾಬಾದ್‌ ಉಚ್ಚ ನ್ಯಾಯಾಲಯ ಹೇಳಿದೆ. ಮಸೀದಿಗಳಲ್ಲಿ ಧ್ವನಿವರ್ಧಕಗಳನ್ನು ಅಳವಡಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ವಜಾಗೊಳಿಸಿದೆ.

ಧ್ವನಿವರ್ಧಕಗನ್ನು ತೆರವು ಗೊಳಿಸುವಂತೆ ಬದೌನ್ ಜಿಲ್ಲೆಯ ಬಿಸೌಲಿ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸ್‌ಡಿಎಂ) ಹೊರಡಿಸಿದ ಆದೇಶವನ್ನು ಪ್ರಶ್ನಿಸಿ ಇರ್ಫಾನ್ ಎಂಬ ವ್ಯಕ್ತಿಯು ಹೈಕೋರ್ಟ್‌ ಗೆ ಅರ್ಜಿ ಸಲ್ಲಿಸಿ ಎಸ್‌ಡಿಎಂ ಆದೇಶವು “ಕಾನೂನುಬಾಹಿರ” ಮತ್ತು ಇದು “ಮೂಲಭೂತ ಹಕ್ಕುಗಳು ಮತ್ತು ಕಾನೂನು ಹಕ್ಕುಗಳನ್ನು ಉಲ್ಲಂಘಿಸುತ್ತದೆ” ಎಂದು ಆರೋಪಿಸಿದ್ದರು.

ಅರ್ಜಿಯನ್ನು ವಿಚಾರಣೆ ಮಾಡಿದ ನ್ಯಾಯಮೂರ್ತಿ ವಿವೇಕ್ ಕುಮಾರ್ ಬಿರ್ಲಾ ಮತ್ತು ನ್ಯಾಯಮೂರ್ತಿ ವಿಕಾಸ್ ಅವರಿದ್ದ ವಿಭಾಗೀಯ ಪೀಠವು ಬುಧವಾರ ಈ ಆದೇಶ ನೀಡಿದ್ದು, ‘‘ಮಸೀದಿಗಳಲ್ಲಿ ಧ್ವನಿವರ್ಧಕಗಳನ್ನು ಬಳಸುವುದು ಸಾಂವಿಧಾನಿಕ ಹಕ್ಕು ಅಲ್ಲ ಎಂದು ಕಾನೂನು ಹೇಳುತ್ತದೆ” ಎನ್ನುವ ಮೂಲಕ ಅರ್ಜಿಯನ್ನು ತಳ್ಳಿಹಾಕಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು