News Karnataka Kannada
Sunday, April 28 2024
ಉತ್ತರ ಪ್ರದೇಶ

ಅಮೇಠಿ: ಹಲ್ಲೆಗೆ ಗುರಿಯಾಗಿದ್ದ ದಲಿತ ಬಾಲಕಿಯನ್ನು ಭೇಟಿಯಾದ ಪ್ರಿಯಾಂಕಾ ಗಾಂಧಿ ವಾದ್ರಾ

Karnataka model for Madhya Pradesh: Five bhagyas including loan waiver
Photo Credit :

ಅಮೇಠಿ : ಇಲ್ಲಿನ ಸಂಗ್ರಾಮಪುರದಲ್ಲಿ ಕಳ್ಳತನದ ಆರೋಪದಲ್ಲಿ ಹಲ್ಲೆಗೆ ಗುರಿಯಾಗಿದ್ದ ದಲಿತ ಬಾಲಕಿ ಮತ್ತು ಆಕೆಯ ಕುಟುಂಬದವರನ್ನು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಗುರುವಾರ ಭೇಟಿಯಾಗಿದ್ದಾರೆ. ‘ಸಂತ್ರಸ್ತ ಬಾಲಕಿಗೆ ನ್ಯಾಯ ದೊರಕಿಸಲು ಅಗತ್ಯವಿರುವ ಎಲ್ಲಾ ರೀತಿಯ ನೆರವನ್ನು ಕಾಂಗ್ರೆಸ್‌ ನೀಡಲಿದೆ’ ಎಂದು ಅವರು ಹೇಳಿದ್ದಾರೆ.

ಸಂತ್ರಸ್ತ ಬಾಲಕಿಯನ್ನು ಮೂರು ಮಂದಿ ಪುರುಷರು ನೆಲಕ್ಕೆ ಅವುಚಿ ಹಿಡಿದು, ಆಕೆಯ ಪಾದಗಳಿಗೆ ದೊಣ್ಣೆಯಿಂದ ಹೊಡೆಯುತ್ತಿರುವ ವಿಡಿಯೊ ಬುಧವಾರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಆ ಮನೆಯ ಮಹಿಳೆಯರು ಸಹ ಕಳ್ಳತನದ ಬಗ್ಗೆ ಬಾಲಕಿಯನ್ನು ಬೈದು ಪ್ರಶ್ನಿಸುತ್ತಿರುವ ದೃಶ್ಯ ಆ ವಿಡಿಯೊದಲ್ಲಿ ಇತ್ತು.

ಘಟನೆ ನಡೆದು ಎರಡು ದಿನಗಳಾದರೂ ಕ್ರಮ ತೆಗೆದುಕೊಂಡಿಲ್ಲ ಎಂದು ಉತ್ತರ ಪ್ರದೇಶ ಕಾಂಗ್ರೆಸ್‌ ಘಟಕದ ಅಧ್ಯಕ್ಷ ಅಜಯ್ ಕುಮಾರ್ ಲಲ್ಲು ನೇತೃತ್ವದಲ್ಲಿ ಪ್ರತಿಭಟನೆ ನಡೆದಿತ್ತು. ಅವರನ್ನು ಪೊಲೀಸರು ಬಂಧಿಸಿದ್ದರು. ನಂತರ ವೈಯಕ್ತಿಕ ಜಾಮೀನಿನ ಮೇಲೆ ಬಿಡುಗಡೆ ಮಾಡಿದರು.

‘ತಪ್ಪಿತಸ್ಥರ ವಿರುದ್ಧ ಸರ್ಕಾರವು ತಕ್ಷಣವೇ ಕ್ರಮ ತೆಗೆದುಕೊಳ್ಳಬೇಕು’ ಎಂದು ಪ್ರಿಯಾಂಕಾ ಅವರು ಟ್ವೀಟ್ ಮಾಡಿದ್ದರು. ಅದರ ಬೆನ್ನಲ್ಲೇ ಸಂತ್ರಸ್ತ ಬಾಲಕಿಯ ತಂದೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಪೊಲೀಸರು ಗುರುವಾರ ಬೆಳಿಗ್ಗೆ ವೇಳೆಗೆ ಮೂವರು ಆರೋಪಿಗಳನ್ನು ಬಂಧಿಸಿದ್ದರು. ಮೂವರನ್ನೂ ನ್ಯಾಯಾಲಯದ ಎದುರು ಹಾಜರು ಮಾಡಲಾಗಿದೆ.

ಆರೋಪಿಗಳನ್ನು ಜೈಲಿಗೆ ಹಾಕಲಾಗಿದೆ. ಆನಂತರ ಪ್ರಿಯಾಂಕಾ ನೇತೃತ್ವದ ನಿಯೋಗವು ಸಂತ್ರಸ್ತ ಕುಟುಂಬವನ್ನು ಭೇಟಿ ಮಾಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು