ಆಟೋ ಹಾಗೂ ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಇದರ ಪರಿಣಾಮ ಆರು ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ.
ಈ ದುರ್ಘಟನೆ ಇಂದು ಬೆಳಗ್ಗೆ ಅನಂತಪುರದ ಬೆಂಗಳೂರು-ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿಯ ಪಾಮಿಡಿ ಮಂಡಲದ ಬಳಿ ನಡೆದಿದೆ.
ಆಟೋದಲ್ಲಿ ಮಹಿಳೆಯರು ಸೇರಿದಂತೆ ಕೃಷಿ ಕಾರ್ಮಿಕರು ಪ್ರಯಾಣಿಸುತ್ತಿದ್ದು, ವೇಗವಾಗಿ ಬಂದ ಟ್ರಕ್ ಆಟೋಗೆ ಡಿಕ್ಕಿ ಹೊಡೆದಿದೆ. ಆರು ಮಂದಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮೃತರ ಪಾಮಿಡಿ ಮಂಡಲ ಸಮೀಪದ ಕೊಪ್ಪಲ್ಲಕೊಂಡ ಗ್ರಾಮದವರು ಎನ್ನಲಾಗಿದೆ.
ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಯುತ್ತಿದೆ.