ಉತ್ತರ ಪ್ರದೇಶ

ಇಂದಿನಿಂದ ಉತ್ತರಪ್ರದೇಶದಲ್ಲಿ ಯೋಗಿ ಆಡಳಿತ: ಸಂಜೆ 4 ಗಂಟೆಗೆ ಪ್ರಮಾಣವಚನ

ಲಖನೌ: ಯೋಗಿ ಆದಿತ್ಯನಾಥ್ ಶುಕ್ರವಾರ ಸತತ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದರೊಂದಿಗೆ ಐದು ವರ್ಷಗಳ ಅಧಿಕಾರಾವಧಿಯನ್ನು ಪೂರ್ಣಗೊಳಿಸಿದ ಬಳಿಕ ಮತ್ತೆ ರಾಜ್ಯದ ಚುಕ್ಕಾಣಿ ಹಿಡಿಯುತ್ತಿರುವ ಉತ್ತರಪ್ರದೇಶದ ಮೊದಲ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಯೋಗಿ ಪಾತ್ರರಾಗಲಿದ್ದಾರೆ.

ಇಂದು ಸಂಜೆ 4 ಗಂಟೆಗೆ ಅಟಲ್ ಬಿಹಾರಿ ವಾಜಪೇಯಿ ಏಕಾನಾ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ ಭವ್ಯ ಸಮಾರಂಭದಲ್ಲಿ ಯೋಗಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಗುರುವಾರ ಬಿಜೆಪಿಯ ಶಾಸಕಾಂಗ ಪಕ್ಷವು, ಯೋಗಿ ಅವರನ್ನು ತನ್ನ ನಾಯಕನನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಿದೆ. ಇದಾದ ನಂತರ ಯೋಗಿ ಅವರು ರಾಜ್ಯಪಾಲ ಆನಂದಿಬೆನ್ ಪಟೇಲ್ ಅವರ ಮುಂದೆ ಸರ್ಕಾರ ರಚಿಸುವ ಹಕ್ಕನ್ನು ಮಂಡಿಸಿದರು. ಸರ್ಕಾರ ರಚಿಸಲು ಯೋಗಿ ಅವರು ರಾಜ್ಯಪಾಲರನ್ನು ಆಹ್ವಾನಿಸಿದರು.

ಮೋದಿ ಸಮ್ಮುಖದಲ್ಲಿ ಪ್ರಮಾಣ ವಚನ
ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ರಾಜ್ಯಪಾಲ ಆನಂದಿಬೆನ್ ಪಟೇಲ್ ಅವರು ಯೋಗಿ ಆದಿತ್ಯನಾಥ್ ಅವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಲಿದ್ದಾರೆ. ಅವರೊಂದಿಗೆ ಸುಮಾರು 45 ಸಚಿವರು ಪ್ರಧಾನಿ ಮೋದಿ ಸಮ್ಮುಖದಲ್ಲಿ ಪ್ರಮಾಣ ವಚನ ಸ್ವೀಕರಿಸಬಹುದು ಎಂದು ಮೂಲಗಳು ತಿಳಿಸಿವೆ.

ಸಿಎಂ ಬೊಮ್ಮಾಯಿ ಭಾಗಿ
ಯೋಗಿ ಆದಿತ್ಯನಾಥ್ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪಾಲ್ಗೊಳ್ಳಲಿದ್ದಾರೆ.

ಬೆಳಿಗ್ಗೆ 9 ಗಂಟೆಗೆ ನಗರದ ಹೆಚ್‌ಎಎಳ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದಲ್ಲಿ ಪ್ರಯಾಣಿಸಲಿರುವ ಬೊಮ್ಮಾಯಿಯವರು 11.45ಕ್ಕೆ ಉತ್ತರಪ್ರದೇಶದ ರಾಜಧಾನಿ ಲಖನೌ ತಲುಪಲಿದ್ದಾರೆ. ಸಂಜೆ 4 ಗಂಟೆಗೆ ನಡೆಯಲಿರುವ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಿದ ಬಳಿಕ ರಾತ್ರಿ ಅಲ್ಲಿಂದ ನೇರವಾಗಿ ಹುಬ್ಬಳ್ಳಿಗೆ ಬಂದು ವಾಸ್ತವ್ಯ ಹೂಡಲಿದ್ದಾರೆಂದು ತಿಳಿದುಬಂದಿದೆ.

Swathi MG

Recent Posts

ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ: ಆರೋಪಿ ಬಿಭವ್‌ ಕುಮಾರ್‌ ವಶಕ್ಕೆ

ಆಮ್‌ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ನಡೆಸಿದ ಆರೋಪಿ, ಅರವಿಂದ್‌ ಕೇಜ್ರಿವಾಲ್‌ ಆಪ್ತ ಕಾರ್ಯದರ್ಶಿ…

6 mins ago

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹುಸಿ ಬಾಂಬ್ ಬೆದರಿಕೆ: ಪ್ರಯಾಣಿಕನ ಮೇಲೆ ಪ್ರಕರಣ ದಾಖಲು

ಬೆಂಗಳೂರಿನಿಂದ ಪುಣೆಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಚೆಕ್-ಇನ್ ಬ್ಯಾಗ್‌ನಲ್ಲಿ ಬಾಂಬ್ ಅಡಗಿಸಿಟ್ಟಿರುವುದಾಗಿ ಸುಳ್ಳು ಬೆದರಿಕೆ ಹಾಕಿ ಭೀತಿ…

15 mins ago

ಸಂವಿಧಾನವನ್ನು ಯಾವುದೇ ಸರ್ಕಾರ ಬದಲಾಯಿಸಲು ಸಾಧ್ಯವಿಲ್ಲ : ನಿತಿನ್‌ ಗಡ್ಕರಿ

ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಿಸಲಿದೆ ಎನ್ನುವ ಕಾಂಗ್ರೆಸ್‌ ಆರೋಪಕ್ಕೆ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿಗಳ ಖಾತೆ ಸಚಿವ…

26 mins ago

ತೀರ್ಥಯಾತ್ರೆಗೆ ಬಂದ ನಾಲ್ವರು ನದಿಯಲ್ಲಿ ಮುಳುಗಿ ದಾರುಣ ಸಾವು

ತೀರ್ಥಯಾತ್ರೆಗೆಂದು ಅತಿಥಿ ಗೃಹಕ್ಕೆ ಬಂದಿದ್ದವರು ನದಿಯಲ್ಲಿ ಬಟ್ಟೆ ತೊಳೆಯಲು ಹೋಗಿ ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕೊಲ್ಲಾಪುರದ ಕಾಗಲ್ ತಾಲೂಕಿನ…

45 mins ago

ಪ್ರಾಚೀನರ ಕಲಾ ಕೊಡುಗೆಗಳ ಸಂರಕ್ಷಣೆ ಅಗತ್ಯ: ನೇಮಿರಾಜ ಶೆಟ್ಟಿ

ಇತಿಹಾಸವನ್ನು ಚಿತ್ರಗಳ ಮೂಲಕ ಜೋಪಾಸನೆ ಮಾಡುವ ಕಾಯಕವೂ ಅತ್ಯಂತ ಶ್ರೇಷ್ಠ. ಮುಂದಿನ ಪೀಳಿಗೆಗೆ ಪ್ರಾಚೀನರ ಕಲಾ ಕೊಡುಗೆಯನ್ನು ಸಂರಕ್ಷಣೆ ಮಾಡುವುದು…

50 mins ago

ಮತ್ತೆ ವಿವಾದಕ್ಕೆ ಸಿಲುಕಿದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ

ಒಂದು ವರ್ಷದ ಸಾಧನೆಯ ರಿಪೋರ್ಟ್ ಕಾರ್ಡ್ ಹಿಡಿದು ಹಿರಿಯ ಬಿಜೆಪಿ ಮುಖಂಡರ ಬಳಿ ಶಾಸಕ ಅಶೋಕ್ ಕುಮಾರ್ ರೈ ತೆರಳಿದ್ದು, ಶಾಸಕ…

59 mins ago