ಉತ್ತರಪ್ರದೇಶ : ಆಶಿಶ್ ಮಿಶ್ರಾ ಗೆ ಡೆಂಘೀ, ಆಸ್ಪತ್ರೆಗೆ ದಾಖಲು

ಉತ್ತರಪ್ರದೇಶದ ಲಖೀಂಪುರ್ ಖೇರಿ ಹಿಂಸಾಚಾರ ಪ್ರಕರಣದ ಆರೋಪಿ, ಕೇಂದ್ರ ಸಚಿವ ಅಜಯ್ ಮಿಶ್ರಾ ಪುತ್ರ ಆಶಿಶ್ ಮಿಶ್ರಾ ಗೆ ಡೆಂಘೀ ಸೋಂಕು ತಗುಲಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಳೆದ ಶುಕ್ರವಾರದಿಂದ ಜ್ವರದಿಂದ ಬಳಲುತ್ತಿದ್ದ ಆಶಿಶ್ ಗೆ ರಕ್ತ ತಪಾಸಣೆ ನಡೆಸಲಾಗಿತ್ತು. ಈ ಬಳಿಕ ಆಶಿಶ್ ಡೆಂಘೀ ಸೋಂಕಿನಿಂದ ಬಳಲುತ್ತಿರುವುದು ದೃಢಪಟ್ಟಿದೆ. ಹಾಗಾಗಿ ಆಶಿಶ್ ರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಅಕ್ಟೋಬರ್‌ 3ರಂದು ಲಖೀಂಪುರ್‌ ನಲ್ಲಿ ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ವಿರೋಧಿಸಿ ಹಾಗೂ ರಾಜ್ಯದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಭೇಟಿ ವಿರೋಧಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದರು.

ಈ ವೇಳೆ ಪ್ರತಿಭಟನಾ ನಿರತ ರೈತರ ಮೇಲೆ ಆಶಿಶ್‌ ಮಿಶ್ರಾ ಕಾರು ಹಾಯಿಸಿದ ಆರೋಪ ಎದುರಿಸುತ್ತಿದ್ದಾರೆ. ಈ ಪ್ರಕರಣದಲ್ಲಿ ಆಶಿಶ್ ಮಿಶ್ರಾ ಸೇರಿದಂತೆ 13 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

Sneha Gowda

Recent Posts

ಎಸ್​ಎಸ್​ಎಲ್​​​ಸಿ ಫಲಿತಾಂಶ; ರಾಜ್ಯಕ್ಕೆ ಎರಡನೇ ಸ್ಥಾನ ಪಡೆದ ಬೆಳ್ತಂಗಡಿ ವಿದ್ಯಾರ್ಥಿ

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಇದೀಗ ಪ್ರಕಟವಾಗಿದ್ದು, ಶೇ 73.4 ಮಂದಿ ತೇರ್ಗಡೆಯಾಗಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು…

5 mins ago

ರೇವಣ್ಣ ಲೈಂಗಿಕ ಹಗರಣ: ಮಹಿಳಾ ಕಾಂಗ್ರೆಸ್ ನಿಂದ ಪೊರಕೆ ಹಿಡಿದು ಪ್ರತಿಭಟನೆ

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ ಖಂಡಿಸಿ ಹಾಗೂ ಪ್ರಜ್ವಲ್ ರೇವಣ್ಣರನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿ ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್…

12 mins ago

ಎಸ್ಎಸ್​ಎಲ್​ಸಿ ಫಲಿತಾಂಶ: ಉಡುಪಿ ಪ್ರಥಮ, ದಕ್ಷಿಣ ಕನ್ನಡ ದ್ವಿತೀಯ

ಇಂದು 2023-24 ನೇ ಸಾಲಿನ SSLC ಪರೀಕ್ಷೆ ಫಲಿತಾಂಶ ಹೊರಬಿದ್ದಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ…

25 mins ago

ಸುಡುಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟ : ಇಬ್ಬರು ಮಹಿಳೆಯರಿಗೆ ಗಾಯ

ಸುಡುಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟಗೊಂಡ ಪರಿಣಾಮ ಇಬ್ಬರು ಮಹಿಳೆಯರು ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಕಸಬಾ ಗ್ರಾಮದ ಹಿಮ್ಮುಂಜೆ ಬಳಿಯ…

28 mins ago

ಮಕ್ಕಳನ್ನು ಕೊಂದು ಮಹಿಳೆ ಆತ್ಮಹತ್ಯೆ : ಡೆತ್‌ನೋಟು ಪತ್ತೆ

ತನ್ನ ಮಕ್ಕಳಿಬ್ಬರನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.ಸಾವಿಗೆ ಮುನ್ನ ವಿಡಿಯೊ ಮೆಸೇಜ್‌ ಮಾಡಿರುವ ಮಹಿಳೆ, ಪತಿಯ ಕಿರುಕುಳದಿಂದ…

39 mins ago

ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶ ಪ್ರಕಟ; ಇಲ್ಲಿ ಫಲಿತಾಂಶ ವೀಕ್ಷಿಸಿ

2023-24ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶವು ಇಂದು ಪ್ರಕಟಗೊಂಡಿದೆ. ಕರ್ನಾಟಕದ ಒಟ್ಟು 2,750 ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಈ ಸಲದ…

46 mins ago