ಉತ್ತರ ಪ್ರದೇಶದಲ್ಲಿ ಜನಸಂಖ್ಯಾ ನಿಯಂತ್ರಣ ಕಾನೂನು ಕರಡು ಮಸೂದೆ ಸಿದ್ದ

ಲಕ್ನೋ, ;ಉತ್ತರಪ್ರದೇಶದಲ್ಲಿ ಜನಸಂಖ್ಯಾ ನಿಯಂತ್ರಣಕ್ಕೆ ಒತ್ತು ನೀಡಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಸರಕಾರ ಎರಡು ಮಕ್ಕಳು ಇದ್ದವರಿಗೆ ಉದ್ಯೋಗ, ವರಮಾನ ಮತ್ತು ಶಿಕ್ಷಣ ಸೇರಿದಂತೆ ವಿವಿಧ ಸರ್ಕಾರದ ಯೋಜನೆಗಳಲ್ಲಿ ಸೌಲಭ್ಯ ನೀಡಲು ಮುಂದಾಗಿದೆ.
ಇದಕ್ಕೆ ಪೂರಕವಾಗಿ ರಾಜ್ಯ ಕಾನೂನು ಆಯೋಗ ಜನಸಂಖ್ಯಾ ನಿಯಂತ್ರಣ ಮತ್ತು ಸ್ಥಿರತೆ ಕುರಿತ ಕರಡು ಮಸೂದೆಯ ವರದಿಯನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಸಲ್ಲಿಸಿದೆ.ವರದಿ ಸ್ವೀಕರಿಸಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಈ ವರದಿಯನ್ನು ರಾಜ್ಯದಲ್ಲಿ ಚಾಚು ತಪ್ಪದೆ ಪಾಲಿಸುವ ಮೂಲಕ ಜನಸಂಖ್ಯಾ ನಿಯಂತ್ರಣಕ್ಕೆ ಒತ್ತು ನೀಡಲಾಗುವುದು .ಅಲ್ಲದೆ ಎರಡು ಮಕ್ಕಳು ಇರುವ ಕುಟುಂಬಕ್ಕೆ ಸರ್ಕಾರದಿಂದ ಹಲವು ಸೌಲಭ್ಯಗಳು ಮತ್ತು ರಿಯಾಯಿತಿಗಳನ್ನು ನೀಡಲಾಗುವುದು. ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ ಕುಟುಂಬಕ್ಕೆ ಸಹಜವಾಗಿಯೇ ಸೌಲಭ್ಯಗಳನ್ನು ಕಡಿತ ಮಾಡಲಾಗುವುದು ಎಂದು ಹೇಳಿದ್ದಾರೆ.ಉತ್ತರಪ್ರದೇಶದಲ್ಲಿ 2 ಕ್ಕಿಂತ ಹೆಚ್ಚು ಮಕ್ಕಳು ಇರುವ ಕುಟುಂಬದ ಸದಸ್ಯರು ಗ್ರಾಮ ಪಂಚಾಯಿತಿ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಕ್ಕೆ ನಿಷೇಧ ಇರುವಂತೆಯೂ ಕೂಡ ರಾಜ್ಯ ಕಾನೂನು ಆಯೋಗ ಶಿಫಾರಸು ಮಾಡಿದೆ.
ಇದರ ಜೊತೆಗೆ ಉದ್ಯೋಗ ಮೀಸಲಾತಿ ಸೇರಿದಂತೆ ಇನ್ನಿತರ ಸರಕಾರಿ ಸೌಲಭ್ಯಗಳನ್ನು ಕಡಿತ ಮಾಡುವಂತೆ ವರದಿಯಲ್ಲಿ ಶಿಫಾರಸು ಮಾಡಿದ್ದು ಅದನ್ನು ಚಾಚೂ ತಪ್ಪದೆ ಅನುಸರಿಸಲು ಮುಖ್ಯಮಂತ್ರಿಯಾಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಮುಂದಾಗಿದೆ. ಜುಲೈ 9 ರಂದು ಮೊದಲ ಬಾರಿಗೆ ರಾಜ್ಯ ಕಾನೂನು ಆಯೋಗ ಪ್ರಾಥಮಿಕ ವರದಿಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಿದ್ದು ಈ ಸಂಬಂಧ ರಾಜ್ಯ ಸರಕಾರ ಜುಲೈ ೧೯ ರವರೆಗೆ ಆಕ್ಷೇಪಣೆಗಳನ್ನು ಸಲ್ಲಿಸುವಂತೆ ಜನರಿಗೆ ಅವಕಾಶ ಮಾಡಿಕೊಟ್ಟಿತ್ತು.

Indresh KC

Recent Posts

ಅನೈತಿಕ ಸಂಬಂಧ ಶಂಕೆ: ಬೀದರ್​​ನಲ್ಲಿ ಯುವಕರಿಂದ ನೈತಿಕ ಪೊಲೀಸ್​ ಗಿರಿ

ಹಿಂದೂ ಯುವಕನ ಜೊತೆ ಮುಸ್ಲಿಂ ಸಮುದಾಯದ ಮಹಿಳೆ ಕುಳಿತಿದಕ್ಕೆ ಅದೇ ಕೋಮಿನ ಯುವಕರ ಗುಂಪೊಂದು ಹಲ್ಲೆ ನಡೆಸಿ, ನೈತಿಕ ಪೊಲೀಸ್​​…

7 hours ago

ಸಂಗೊಳ್ಳಿರಾಯಣ್ಣ ಪ್ರತಿಮೆ ಭಗ್ನಗೊಳಿಸಿದ ಆರೋಪಿ ಸೆರೆ

ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬೀಕನಹಳ್ಳಿ ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ  ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಭಗ್ನಗೊಳಿಸಿದ್ದ ಆರೋಪಿಯನ್ನು…

7 hours ago

ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಿಗೆ ಹುಸಿ ಬಾಂಬ್ ಬೆದರಿಕೆ

ಸಿಲಿಕಾನ್ ಸಿಟಿಯಲ್ಲಿ ಹುಸಿ ಬಾಂಬ್ ಬೆದರಿಕೆ ಮೇಲ್ ಮುಂದುವರೆದಿದ್ದು, ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಾದ ನಾಗವಾರದ ಸೇಂಟ್ ಫಿಲೋಮಿನಾ ಸೇರಿದಂತೆ…

7 hours ago

ಬೀದರ್‌: ಜಿಲ್ಲೆಯಾದ್ಯಂತ ತಂಪೆರೆದ ಮಳೆ, ಸಿಡಿಲಿಗೆ ವ್ಯಕ್ತಿ ಸಾವು

ಜಿಲ್ಲೆಯಾದ್ಯಂತ ಭಾನುವಾರ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ವಾತಾವರಣ ತಂಪಾಗಿದೆ.

8 hours ago

ಆಮ್ ಆದ್ಮಿ ಪಕ್ಷವನ್ನು ಚುನಾವಣೆಯಲ್ಲಿ ಆಯ್ಕೆ ಮಾಡಿದರೆ ನಾನು ಮತ್ತೆ ಜೈಲಿಗೆ ಹೋಗಬೇಕಾಗಿಲ್ಲ

ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…

9 hours ago

ಗೌಡರ ಕುಟುಂಬಕ್ಕೆ ಮೋಸ ಮಾಡುವುದಿಲ್ಲ: ಕೆ.ಮಂಜು

ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…

10 hours ago