ಉತ್ತರ ಪ್ರದೇಶ

ಉತ್ತರ ಪ್ರದೇಶದಲ್ಲಿ ಮತ್ತೆ 30 ಝಿಕಾ ವೈರಸ್ ಪ್ರಕರಣಗಳು ಪತ್ತೆ

ಕಾನ್ಪುರ : ಉತ್ತರ ಪ್ರದೇಶದ ಲಕ್ನೋದ ಜಾರ್ಜ್ ವೈದ್ಯಕೀಯ ವಿವಿಯ ವೈರಾಲಜಿ ಲ್ಯಾಬ್ ಮತ್ತು ನ್ಯಾಷನಲ್ ಇನ್ ಸ್ಟಿಟ್ಯೂಟ್ ಆಫ್ ವೈರಾಲಜಿಯಲ್ಲಿ ನಡೆಸಿದ ಪರೀಕ್ಷೆಯಲ್ಲಿ ಮತ್ತೆ 30 ಜನರಲ್ಲಿ ಹೊಸದಾಗಿ ಝಿಕಾ ವೈರಸ್ ಸೋಂಕು ದೃಢಪಟ್ಟಿದೆ.

ಕೊರೊನಾ ವೈರಸ್ ಸೋಂಕಿನ ಅಬ್ಬರ ಕಡಿಮೆಯಾಗುತ್ತಿರುವ ಬೆನ್ನಲ್ಲೇ ಉತ್ತರ ಪ್ರದೇಶದಲ್ಲಿ ಝಿಕಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿವೆ. ಉತ್ತರ ಪ್ರದೇಶದಲ್ಲಿ ಮತ್ತೆ 30 ಝಿಕಾ ವೈರಸ್ ಸೋಂಕಿತರು ಪತ್ತೆಯಾಗಿವೆ.ಈ ಮೂಲಕ ಉತ್ತರ ಪ್ರದೇಶದಲ್ಲಿ ಝಿಕಾ ವೈರಸ್ ಸೋಂಕಿತರ ಸಂಖ್ಯೆ 66 ಕ್ಕೆ ಏರಿಕೆಯಾಗಿದೆ.

ನಿನ್ನೆ ಒಂದೇ ದಿನ ಪತ್ತೆಯಾದ 30 ಸೋಂಕಿತರ ಪೈಕಿ ಮೂವರು ಮಹಿಳೆಯರು, 27 ಜನ ಪುರುಷರಿದ್ದಾರೆ. ಝಿಕಾ ವೈರಸ್ ಸೊಳ್ಳೆಯಿಂದ ಹರಡುವ ವೈರಸ್ ಆಗಿದ್ದು, ಈಡೀಸ್ ಸೊಳ್ಳೆಗಳು ಸಾಮಾನ್ಯವಾಗಿ ಹಗಲಿನಲ್ಲಿ ಕಚ್ಚುತ್ತವೆ. ಅಕ್ಟೋಬರ್ 23 ರಂದು ಕಾನ್ಪುರದ ಭಾರತೀಯ ವಾಯುಪಡೆಯ ಸ್ಟೇಷನ್ ಪ್ರದೇಶದಲ್ಲಿ ಮೊದಲ ಝಿಕಾ ವೈರಸ್ ಪ್ರಕರಣ ಪತ್ತೆಯಾಗಿತ್ತು.

Swathi MG

Recent Posts

ದುರಸ್ತಿ ಮಾಡಿ ವಾರ ಕಳೆಯುವ ಮೊದಲೇ ಕಿತ್ತು ಬಂದ ರಸ್ತೆ

ಪಟ್ಟಣದ ಬಸವಕಲ್ಯಾಣ-ಭಾಲ್ಕಿ ಮುಖ್ಯ ರಸ್ತೆ ಸಂಪೂರ್ಣ ಕೆಟ್ಟು ಹೋಗಿದೆ. ವಾರದ ಹಿಂದೆ ರಸ್ತೆ ದುರಸ್ತಿ ಕಾಮಗಾರಿ ಮಾಡಲಾಗಿದ್ದು, ವಾರ ಕಳೆಯುವ…

7 mins ago

ಬಿರುಗಾಳಿ ಸಹಿತ ಮಳೆಗೆ ಕಬ್ಬಿಣದ ಬಸವ ಮಹಾದ್ವಾರ ಕುಸಿತ

ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ…

19 mins ago

ನೂರಕ್ಕೆ ನೂರು ‘ಇಂಡಿಯಾ’ ಮೈತ್ರಿಗೆ ಅಧಿಕಾರ: ಈಶ್ವರ ಖಂಡ್ರೆ

'ದೇಶದಲ್ಲಿ ಈ ಸಲ 'ಇಂಡಿಯಾ' ಒಕ್ಕೂಟ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ' ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ…

23 mins ago

ನಾನು ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತೇನೆ ಎಂದ ವಿರಾಟ್​​ ಕೊಹ್ಲಿ

ವಿರಾಟ್​​ ಕೊಹ್ಲಿ ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತೇನೆ ಎಂದು ಹೇಳಿದ್ದಾರೆ. ಅವರು ಹೇಳಿರುವ ಆಡಿಯೋ ಸಮೇತ ದೃಶ್ಯ ವೈರಲ್​ ಆಗಿದೆ. 

38 mins ago

ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಮಹಿಳೆಯ ತಲೆ ಸಿಕ್ಕಿಕೊಂಡು ಪರದಾಟ

ಕೆಎಸ್‌ಆರ್‌ಟಿಸಿ ಬಸ್‌ ನ ಕಿಟಕಿಯಿಂದ ಉಗುಳಲು ಹೋಗಿ ಮಹಿಳೆಯೊಬ್ಬರ ತಲೆ ಸಿಕ್ಕಿಕೊಂಡಿರುವ ಘಟನೆ ನಡೆದಿದೆ.

60 mins ago

92ನೇ ಜನ್ಮದಿನ ಆಚರಿಸಿಕೊಳ್ಳದಿರಲು ಎಚ್‌.ಡಿ. ದೇವೇಗೌಡರ ನಿರ್ಧಾರ!

ಇದೇ ತಿಂಗಳ 18 ರಂದು 92ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರು ಈ ಬಾರಿ ಹುಟ್ಟುಹಬ್ಬ…

1 hour ago