News Karnataka Kannada
Tuesday, April 30 2024
ಉತ್ತರ ಪ್ರದೇಶ

ಉತ್ತರ ಪ್ರದೇಶದ ಕಾನ್ಪುರಕ್ಕೆ ಇಂದು ಪ್ರಧಾನಿ ಮೋದಿ ಭೇಟಿ : ಕಾನ್ಪುರ ಮೆಟ್ರೋ ಉದ್ಘಾಟನೆ

Primeminister Modi 29072021
Photo Credit :

ಪ್ರಧಾನಿ ನರೇಂದ್ರ ಮೋದಿಯವರು ಇಂದು ಉತ್ತರ ಪ್ರದೇಶದ ಕಾನ್ಪುರಕ್ಕೆ ಭೇಟಿ ನೀಡಲಿದ್ದಾರೆ. ಕಾನ್ಪುರ ಮೆಟ್ರೋ ರೈಲು ಯೋಜನೆಯ ಸಂಪೂರ್ಣಗೊಂಡ ಮೊದಲ ಹಂತವನ್ನು ಇಂದು ಪ್ರಧಾನಿ ಉದ್ಘಾಟಿಸಲಿದ್ದಾರೆ.

ಐಐಟಿ ಕಾನ್ಪುರದಿಂದ ಮೋಟಿ ಝೀಲ್‌ವರೆಗಿನ ಮೆಟ್ರೋ ಮಾರ್ಗ ಇದಾಗಿದೆ. 11 ಸಾವಿರ ಕೋಟಿ ರೂ. ವೆಚ್ಚದ ಯೋಜನೆ ಇದಾಗಿದ್ದು, ಒಟ್ಟಾರೆ 32 ಕಿ.ಮೀ ಮೆಟ್ರೋ ರೈಲು ಸಂಚರಿಸಲಿದೆ.

ಪ್ರಧಾನಿ ಮೋದಿಯವರು ಈಗಾಗಲೇ ಮೆಟ್ರೋದಲ್ಲಿ ಪ್ರಯಾಣಿಸಿ, ಪರಿಶೀಲನೆ ನಡೆಸಿದ್ದಾರೆ. ನಗರದಲ್ಲಿ ಸಂಚಾರ ಮಾರ್ಗ ಸುಧಾರಣೆಗೆ ಪ್ರಧಾನಿ ಮೋದಿ ಒತ್ತು ನೀಡಿದ್ದಾರೆ.

ಉತ್ತರ ಪ್ರದೇಶದಲ್ಲಿ ಕಾನ್ಪುರ ಮೆಟ್ರೋ ರೈಲು ಯೋಜನೆ ಇನ್ನೊಂದು ಪ್ರಮುಖ ಹೆಜ್ಜೆಯಾಗಿದೆ ಎಂದು ಸರ್ಕಾರ ತಿಳಿಸಿದೆ. ಮೆಟ್ರೋ ಉದ್ಘಾಟನೆ ಜತೆಗೆ ಬಿನಾ-ಪಂಕಿ ಮಲ್ಟಿಪ್ರೊಡಕ್ಟ್ ಪೈಪ್‌ಲೈನ್ ಯೋಜನೆಯನ್ನು ಪ್ರಧಾನಿ ಮೋದಿ ಉದ್ಘಾಟಿಸಲಿದ್ದು, ಐಐಟಿ ಕಾನ್ಪುರ 54 ನೇ ಘಟಿಕೋತ್ಸವದಲ್ಲೂ ಪಾಲ್ಗೊಳ್ಳಲಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು