ಕಾನ್ಪುರ : ಉತ್ತರ ಪ್ರದೇಶದ ಕಾನ್ಪುರದಲ್ಲಿ ಝಿಕಾ ವೈರಸ್ ಸೋಂಕಿತರ ಸಂಖ್ಯೆ 79 ಕ್ಕೆ ಏರಿಕೆಯಾಗಿದ್ದು, ಈ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿ ಯೋಗಿ ಅವರು ಉನ್ನತ ಮಟ್ಟದ ಸಭೆ ನಡೆಸಿದ್ದಾರೆ.
ಝಿಕಾ ವೈರಸ್ ತ್ವರಿತವಾಗಿ ಹರಡುತ್ತಿದ್ದು, ಹರಡಲು ಕಾರಣ, ನಿಯಂತ್ರಣ ಕ್ರಮಗಳ ಬಗ್ಗೆ ಚರ್ಚಿಸಲಾಗಿದೆ. ನಿನ್ನೆಯಷ್ಟೇ ಕಾನ್ಪುರದಲ್ಲಿ13 ಹೊಸ ಝಿಕಾ ವೈರಸ್ ಪ್ರಕರಣಗಳು ದಾಖಲಾಗಿದೆ.
ನ.6ರವರೆಗೆ ಒಟ್ಟು 79 ಝಿಕಾ ವೈರಸ್ ಪ್ರಕರಣಗಳು ದಾಖಲಾಗಿವೆ. ಝಿಕಾ ಸೋಂಕಿಗೆ ಒಳಗಾದವರ ಮನೆಗೆ ಆರೋಗ್ಯ ತಂಡಗಳ ಭೇಟಿ, ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಅರಿವು ಮೂಡಿಸುವ ಬಗ್ಗೆ ಸಭೆಯಲ್ಲಿ ಮಾತನಾಡಲಾಗಿದೆ.
ಕಾನ್ಪುರದಲ್ಲಿ ಝಿಕಾ ವೈರಸ್ ಸೋಂಕು ವೇಗವಾಗಿ ಹರಡುತ್ತಿದೆ. ಇದರ ಗಂಭೀರತೆಯನ್ನು ಪರಿಗಣಿಸಿ ವಿಶೇಷ ಎಚ್ಚರಿಕೆ ತೆಗೆದುಕೊಳ್ಳಲು ನಿರ್ಧಾರ ಮಾಡಲಾಗಿದೆ. ಆಸ್ಪತ್ರೆಗಳಲ್ಲಿ ಎಲ್ಲ ರೀತಿಯ ವ್ಯವಸ್ಥೆಯನ್ನೂ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಭೆಯಲ್ಲಿ ಹೇಳಿದ್ದಾರೆ.