News Karnataka Kannada
Friday, May 03 2024
ಉತ್ತರ ಪ್ರದೇಶ

ಉತ್ತರ ಪ್ರದೇಶ ಚುನಾವಣೆಯಲ್ಲಿ ಸಮಾಜವಾದಿ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಗಲಿದೆ: ಮುಲಾಯಂ ಸಿಂಗ್

Mulayam Singh
Photo Credit : News Kannada

ಲಖನೌ:  ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯ ಮೂರನೇ ಹಂತದ ಮತದಾನ ಇಂದು (ಭಾನುವಾರ) ಆರಂಭಗೊಂಡಿದೆ. ಚುನಾವಣೆಯಲ್ಲಿ ಸಮಾಜವಾದಿ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಗಲಿದೆ ಎಂದು ಸಮಾಜವಾದಿ ಪಕ್ಷದ (ಎಸ್‌ಪಿ) ಮಾಜಿ ಅಧ್ಯಕ್ಷ ಮುಲಾಯಂ ಸಿಂಗ್ ಯಾದವ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸೈಫೈ ಕ್ಷೇತ್ರದಲ್ಲಿ ಮತದಾನ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಚುನಾವಣೆಯಲ್ಲಿ ಸಮಾಜವಾದಿ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಗಲಿದ್ದು, ಪಕ್ಷ ಅಧಿಕಾರಕ್ಕೆ ಬರುವುದು ಖಚಿತ’ ಎಂದಿದ್ದಾರೆ.

59 ಕ್ಷೇತ್ರಗಳಲ್ಲಿ 627 ಅಭ್ಯರ್ಥಿಗಳು ಸ್ಪರ್ಧೆಯಲ್ಲಿದ್ದಾರೆ. ಸಂಜೆ 6 ಗಂಟೆವರೆಗೆ ಮತದಾನ ನಡೆಯಲಿದೆ.

403 ಸದಸ್ಯ ಬಲದ ಉತ್ತರ ಪ್ರದೇಶ ವಿಧಾನಸಭೆಗೆ 7 ಹಂತಗಳಲ್ಲಿ ಚುನಾವಣೆ ನಡೆಯುತ್ತಿದೆ. ಎರಡು ಹಂತದ (ಫೆಬ್ರುವರಿ 10 ಮತ್ತು 14ರಂದು) ಮತದಾನ ಈಗಾಗಲೇ ಮುಗಿದಿದೆ. ಫೆಬ್ರುವರಿ 23, 27, ಮಾರ್ಚ್‌ 3 ಮತ್ತು 7ರಂದು ಉಳಿದ ಹಂತಗಳ ಮತದಾನ ನಡೆಯಲಿದೆ. ಮಾರ್ಚ್‌ 10 ರಂದು ಫಲಿತಾಂಶ ಪ್ರಕಟವಾಗಲಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು