News Karnataka Kannada
Wednesday, May 01 2024
ಉತ್ತರ ಪ್ರದೇಶ

ಉತ್ತರ ಪ್ರದೇಶ: ಮದುವೆ ಮನೆಯಲ್ಲಿ ದುರಂತ ಬಾವಿಯಲ್ಲಿ ಮುಳುಗಿ 13 ಮಹಿಳೆಯರ ಸಾವು

Breaking News
Photo Credit :

ಕುಶಿನಗರ: ತಡರಾತ್ರಿ ಮದುವೆ ಸಮಾರಂಭವೊಂದರಲ್ಲಿ ದುರ್ಘಟನೆ ಸಂಭವಿಸಿದೆ. ‘ಹಲ್ದಿ’ ಸಂಪ್ರದಾಯ ನಡೆಯುವ ವೇಳೆ 13 ಮಹಿಳೆಯರು ಬಾವಿಯಲ್ಲಿ ಮುಳುಗಿ  ಉತ್ತರ ಪ್ರದೇಶದ ಕುಶಿನಗರದಲ್ಲಿ ಬುಧವಾರ ಸಾವಿಗೀಡಾಗಿದ್ದಾರೆ.

ಬಾವಿಯ ಮೇಲಿನ ಕಬ್ಬಿಣದ ಹೊದಿಕೆಯ ಮೇಲೆ ಮಹಿಳೆಯರು ಕುಳಿತಿದ್ದರು.ಈ ವೇಳೆ ಅದು ಕುಸಿದಿದ್ದು ಮಹಿಳೆಯರು ಬಾವಿಗೆ ಬಿದ್ದಿದ್ದಾರೆ. ಕುಶಿನಗರದ ನೆಬುವಾ ನೌರಂಗಿಯಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬುಧವಾರ ರಾತ್ರಿ 8.30ರಲ್ಲಿ ಈ ದುರ್ಘಟನೆ ಸಂಭವಿಸಿದೆ.

ಬಾವಿಯಲ್ಲಿ ಬಿದ್ದವರನ್ನು ರಕ್ಷಿಸಲು ಮಧ್ಯರಾತ್ರಿಯ ವರೆಗೆ ಕಾರ್ಯಾಚರಣೆ ನಡೆಯಿತು. ಸ್ಥಳೀಯರು, ಪೊಲೀಸರು ನಡೆಸಿದ ರಕ್ಷಣಾ ಕಾರ್ಯಾಚರಣೆಯಲ್ಲಿ 15 ಮಹಿಳೆಯರನ್ನು ರಕ್ಷಿಸಲಾಯಿತಾದರೂ, 13 ಮಹಿಳೆಯರು ಘಟನೆಯಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ಘಟನೆಯ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಯನ್ನು ಚುರುಕುಗೊಳಿಸುವಂತೆ ಮತ್ತು ಗಾಯಾಳುಗಳಿಗೆ ಚಿಕಿತ್ಸೆ ನೀಡಲು ಸಿಎಂ ಯೋಗಿ ಆದಿತ್ಯನಾಥ್‌ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು