ಕುಶಿನಗರ: ತಡರಾತ್ರಿ ಮದುವೆ ಸಮಾರಂಭವೊಂದರಲ್ಲಿ ದುರ್ಘಟನೆ ಸಂಭವಿಸಿದೆ. ‘ಹಲ್ದಿ’ ಸಂಪ್ರದಾಯ ನಡೆಯುವ ವೇಳೆ 13 ಮಹಿಳೆಯರು ಬಾವಿಯಲ್ಲಿ ಮುಳುಗಿ ಉತ್ತರ ಪ್ರದೇಶದ ಕುಶಿನಗರದಲ್ಲಿ ಬುಧವಾರ ಸಾವಿಗೀಡಾಗಿದ್ದಾರೆ.
ಬಾವಿಯ ಮೇಲಿನ ಕಬ್ಬಿಣದ ಹೊದಿಕೆಯ ಮೇಲೆ ಮಹಿಳೆಯರು ಕುಳಿತಿದ್ದರು.ಈ ವೇಳೆ ಅದು ಕುಸಿದಿದ್ದು ಮಹಿಳೆಯರು ಬಾವಿಗೆ ಬಿದ್ದಿದ್ದಾರೆ. ಕುಶಿನಗರದ ನೆಬುವಾ ನೌರಂಗಿಯಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬುಧವಾರ ರಾತ್ರಿ 8.30ರಲ್ಲಿ ಈ ದುರ್ಘಟನೆ ಸಂಭವಿಸಿದೆ.
ಬಾವಿಯಲ್ಲಿ ಬಿದ್ದವರನ್ನು ರಕ್ಷಿಸಲು ಮಧ್ಯರಾತ್ರಿಯ ವರೆಗೆ ಕಾರ್ಯಾಚರಣೆ ನಡೆಯಿತು. ಸ್ಥಳೀಯರು, ಪೊಲೀಸರು ನಡೆಸಿದ ರಕ್ಷಣಾ ಕಾರ್ಯಾಚರಣೆಯಲ್ಲಿ 15 ಮಹಿಳೆಯರನ್ನು ರಕ್ಷಿಸಲಾಯಿತಾದರೂ, 13 ಮಹಿಳೆಯರು ಘಟನೆಯಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಘಟನೆಯ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಯನ್ನು ಚುರುಕುಗೊಳಿಸುವಂತೆ ಮತ್ತು ಗಾಯಾಳುಗಳಿಗೆ ಚಿಕಿತ್ಸೆ ನೀಡಲು ಸಿಎಂ ಯೋಗಿ ಆದಿತ್ಯನಾಥ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ, ನಾಳೆ ಮೇ ಮೂರರಂದು ದಾವಣಗೆರೆಗೆ ಆಗಮಿಸುತ್ತಿದ್ದಾರೆ.
ದೇಶದ ಸ್ವಾತಂತ್ರ್ಯ ಚಳುವಳಿಯಲ್ಲಿ ಪ್ರಧಾನ ಪಾತ್ರ ವಹಿಸಿದ್ದ ಅಂದಿನ ಕಾರ್ಮಿಕ ವರ್ಗ ಇಂದು ಮತ್ತೆ ದೇಶವನ್ನು ಉಳಿಸಲು ಸನ್ನದ್ದವಾಗಬೇಕು.ಕಳೆದ 10…
ಪವಾಡ ಪುರುಷ ಮಲೆ ಮಹದೇಶ್ವರ ಕೋಟಿ ಒಡೆಯನಾಗಿ ಮುಂದುವರೆಯುತ್ತಿದ್ದು, ಇದೀಗ 34 ದಿನಗಳ ಅಂತರದಲ್ಲಿ ಮೂರು ಕೋಟಿ ನಾಲ್ಕು ಲಕ್ಷದ…
ಅಶ್ಲೀಲ ವೀಡಿಯೋ ಪ್ರಕರಣ ಆರೋಪಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ವಿದೇಶದಲ್ಲಿದ್ದು, ಅವರಿಗೆ ಕ್ಲಿಯರೆನ್ಸ್ ಕೊಟ್ಟವರು ಯಾರು ಎಂಬುದರ…
ಉಡುಪಿ ಜಿಲ್ಲೆಯಾದ್ಯಂತ ಸಿ ಎನ್ ಜಿ ಬಂಕ್ ಗಳಲ್ಲಿ ಇಂಧನ ಕೊರತೆಯಿಂದ ರಿಕ್ಷಾ ಚಾಲಕರು ಗಂಟೆಗಟ್ಟಲೆ ಇಂಧನಕ್ಕಾಗಿ ಕಾಯುವ ಸನ್ನಿವೇಶ…
ಮಗಳ ಹತ್ಯೆಯಾದ ಸಂದರ್ಭದಲ್ಲಿ ಮನೆಗೆ ಆಗಮಿಸಿ ಸಾಂತ್ವನ ಹೇಳಿದ್ದಲ್ಲದೆ ಸರಕಾರದಿಂದ ಆಗಬೇಕಾದ ಕೆಲಸಗಳನ್ನು ಅತ್ಯಂತ ತ್ವರಿತವಾಗಿ ಮಾಡಿಸಿಕೊಟ್ಟಿರುವುದಕ್ಕಾಗಿ ನೇಹಾ ಹಿರೇಮಠ…