ನಾಲ್ಕು ದಶಕದಿಂದ ಬಾಕಿ ಇದ್ದ ಉತ್ತರ ಪ್ರದೇಶದ ಬಲರಾಂಪುರ ಜಿಲ್ಲೆಯಲ್ಲಿ ನಿರ್ಮಾಣಗೊಂಡಿರುವ ಸರಯೂ ನಹರ್ ರಾಷ್ಟ್ರೀಯ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಇಂದು ಚಾಲನೆ ನೀಡಿದರು.
ಸರಯೂ ನಹರ್ ರಾಷ್ಟ್ರೀಯ ಯೋಜನೆಗೆ ಒಟ್ಟು 9,800 ಕೋಟಿ ರೂ ವೆಚ್ಚ ಮಾಡಲಾಗಿದ್ದು, 9 ಜಿಲ್ಲೆಯ 14 ಲಕ್ಷ ಹೆಕ್ಟರ್ ಭೂಮಿಗೆ ನೀರಾವರಿ ಸೌಲಭ್ಯ ಒದಗಿಸುತ್ತದೆ.
ಮುಂದಿನ ವರ್ಷ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ನಡೆಯಲಿದ್ದು, ಹೀಗಾಗಿ ಮೇಲಿಂದ ಮೇಲೆ ಯೋಗಿ ನಾಡಿಗೆ ಪ್ರಯಾಣ ಬೆಳೆಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಇಂದು ಕೂಡ ಅಲ್ಲಿಗೆ ತೆರಳಿ ಬೃಹತ್ ಯೋಜನೆ ಲೋಕಾರ್ಪಣೆಗೊಳಿಸಿದ್ದಾರೆ.
ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿರುವ ಮೋದಿ, ಉತ್ತರ ಪ್ರದೇಶದಲ್ಲಿ ಈ ಹಿಂದೆ ಆಡಳಿತ ನಡೆಸಿರುವ ಅನೇಕ ಪಕ್ಷಗಳು ತಮ್ಮ ಹಿತಾಸಕ್ತಿಗೆ ಕೆಲಸ ಮಾಡಿದ್ದು, ಇಂತಹ ಪ್ರಮುಖ ಯೋಜನೆ ಸ್ಥಗಿತಗೊಳಿಸಿದ್ದವು ಎಂದರು.
ಉತ್ತರ ಪ್ರದೇಶದಲ್ಲಿ ಕೇವಲ ರಿಬ್ಬನ್ ಕತ್ತರಿಸುವುದು, ನಂತರ ಯೋಜನೆ ಮರೆತು ಬಿಡುವುದು ಸಾಮಾನ್ಯವಾಗಿದೆ. ಇದೇ ಕಾರಣಕ್ಕಾಗಿ ಈ ಯೋಜನೆ ಬಾಕಿ ಉಳಿದಿತ್ತು.ಆದರೆ, ಇದೀಗ ಯೋಗಿ ಸರ್ಕಾರ ಇಂತಹ ಮಹತ್ವದ ಯೋಜನೆಗೆ ಅಂತಿಮ ರೂಪ ನೀಡಿದ್ದು, ರೈತರಿಗೆ ಸಹಕಾರಿಯಾಗಲಿದೆ ಎಂದರು.
ಕಾರ್ಯಕ್ರಮದಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ರಾಜ್ಯಪಾಲರಾದ ಆನಂದಿಬೆನ್ ಪಟೇಲ್, ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಮತ್ತು ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಉಪಸ್ಥಿತರಿದ್ದರು.
ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…
ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ.
ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.
ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…
ಜಿಪ್ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್ನಲ್ಲಿ ನಡೆದಿದೆ.
ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…