ಲಖನೌ: ಹಸುವಿನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆಘಾತಕಾರಿ ಘಟನೆ ಲಖನೌನಲ್ಲಿ ನಡೆದಿದ್ದು, ಈ ಸಂಬಂಧ ಮಜೀದ್ ಎಂಬಾತನನ್ನು ಬಂಧಿಸಲಾಗಿದೆ.
ಏಪ್ರಿಲ್ 23ರಂದು ಹಸುವಿನ ಮೇಲೆ ಲೈಂಗಿಕವಾಗಿ ಶೋಷಣೆ ಮಾಡಿದ್ದಾನೆ ಮತ್ತು ನೆರೆಹೊರೆಯವರು ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದಾಗ ವ್ಯಕ್ತಿ ಸಿಕ್ಕಿಬಿದ್ದಿದ್ದಾನೆ.
ವ್ಯಕ್ತಿ ಎರಡನೇ ಬಾರಿ ಹಸುವಿನ ಮೇಲೆ ಅತ್ಯಾಚಾರ ಮಾಡಲು ಪ್ರಯತ್ನಿಸುತ್ತಿರುವು ಸಹ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೆರೆಹೊರೆಯವರು ಹಸುವಿನ ಮಾಲೀಕರಿಗೆ ವಿಷಯ ತಿಳಿಸಿದ್ದಾರೆ. ನಂತರ ವಿಷಯ ಕಾಡ್ಗಿಚ್ಚಿನಂತೆ ಹರಡಿ ಆರೋಪಿಯನ್ನು ಹಿಡಿಯಲು ಸ್ಥಳೀಯರು ಶೋಧ ತಂಡವನ್ನು ರಚಿಸಿದರು.
ನಂತರ ಲಖನೌದ ಸರೋಜನಿ ನಗರದ ದರೋಗಾ ಖೇರಾದಲ್ಲಿ ಪೊಲೀಸರು ವ್ಯಕ್ತಿಯನ್ನು ಬಂಧಿಸಿದ್ದಾರೆ.