News Karnataka Kannada
Friday, May 03 2024
ಉತ್ತರ ಪ್ರದೇಶ

ಉತ್ತರ ಪ್ರದೇಶ: ಹುಡುಗನೊಂದಿಗೆ ಮಾತಾಡಿದ್ದಕ್ಕೆ ಬಾಲಕಿ ಹೊಡೆದು ಕೊಂದ ಮನೆಯರು

ಜಮ್ಮು ಮತ್ತು ಕಾಶ್ಮೀರದ ರಿಯಾಸಿಯಲ್ಲಿ ಕಾರೊಂದು ಕಂದಕಕ್ಕೆ ಬಿದ್ದ ಪರಿಣಾಮ ದಂಪತಿ ಹಾಗೂ ಮಗು ಸಾವನ್ನಪ್ಪಿದ್ದಾರೆ.
Photo Credit : IANS

ಬಾರಾಬಂಕಿ : ಉತ್ತರ ಪ್ರದೇಶದ ಬಾರಾಬಂಕಿ ಜಿಲ್ಲೆಯಲ್ಲಿ ವರದಿಯಾಗಿರುವ ಭೀಕರ ಘಟನೆಯೊಂದರಲ್ಲಿ ಬಾಲಕಿಯೊಬ್ಬಳು ಹುಡುಗನೊಂದಿಗೆ ಮಾತನಾಡಿದ್ದಕ್ಕೆ ಆಕೆಯ ಮನೆಯವರೇ ಥಳಿಸಿ ಕೊಂದಿದ್ದಾರೆ. 16 ವರ್ಷದ ಸಂತ್ರಸ್ತೆಯ ಮೃತದೇಹವನ್ನು ಹತ್ತಿರದ ಹೊಲದಲ್ಲಿ ಸುಟ್ಟು ಹಾಕಿದ್ದಾರೆ.

ಗ್ರಾಮಸ್ಥರು ನೀಡಿದ ಮಾಹಿತಿ ಮೇರೆಗೆ ಪೊಲೀಸರು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ. ನಂತರ ಪೊಲೀಸರು ಹದಿಹರೆಯದ ಹುಡುಗಿಯ ಸುಟ್ಟ ಅವಶೇಷಗಳನ್ನು ವಶಪಡಿಸಿಕೊಂಡರು. ಬಾಲಕಿಯ ತಂದೆ ಸೇರಿದಂತೆ ಕುಟುಂಬದವರು ಸದ್ಯ ತಲೆಮರೆಸಿಕೊಂಡಿದ್ದಾರೆ.

ಕೊಲೆಯ ಬಗ್ಗೆ ಬಾಲಕಿಯ ಕುಟುಂಬದವರು ಶಂಕಿಸಿದ್ದು, ಸಂತ್ರಸ್ತೆಯ ಪೋಷಕರ ಪತ್ತೆಗೆ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಬಾರಾಬಂಕಿಯ ಕೋಠಿ ಪೊಲೀಸ್ ಠಾಣೆ ವ್ಯಾಪ್ತಿಯ ದೇಧಿಯಾ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಸಂತ್ರಸ್ತೆ ಕಸ್ತೂರಬಾ ಗಾಂಧಿ ಬಾಲಕಿಯರ ವಸತಿ ಶಾಲೆಯ ವಿದ್ಯಾರ್ಥಿನಿಯಾಗಿದ್ದಾಳೆ. ಗ್ರಾಮದಲ್ಲಿ ಹೆಚ್ಚುವರಿ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ. ದೇಹ ಶೇ 80 ರಷ್ಟು ಸುಟ್ಟಿತ್ತು. ನಂತರ ಪೊಲೀಸರು ಸುಟ್ಟ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು