News Karnataka Kannada
Monday, May 06 2024
ಉತ್ತರ ಪ್ರದೇಶ

ಉತ್ತರ ಪ್ರದೇಶ: 7 ವರ್ಷದ ಬಾಲಕಿ ಅಪಹರಿಸಿ ಅತ್ಯಾಚಾರ

Harrasment
Photo Credit :

ಉತ್ತರ ಪ್ರದೇಶ: 7 ವರ್ಷದ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ ಎಸಗಿದ ಬಳಿಕ ಹತ್ಯೆ ಮಾಡಲಾಗಿರುವ ಘಟನೆ ಮೊರಾದಾಬಾದ್‌ನ ಗ್ರಾಮವೊಂದರಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮನೆಯ ಮುಂದೆ ಆಟವಾಡುತ್ತಿದ್ದಾಗ ಡಿಸೆಂಬರ್ 22ರಂದು ಕಾಣೆಯಾಗಿದ್ದಳು.ಈ ಸಂಬಂಧ ಕುಟುಂಬಸ್ಥರು ದೂರು ದಾಖಲಿಸಿದ ಮೇರೆಗೆ ಎರಡು ಪೊಲೀಸ್ ತಂಡಗಳನ್ನು ನಿಯೋಜಿಸಲಾಗಿತ್ತು. ಆದರೆ ಬಾಲಕಿಯ ಬಗ್ಗೆ ಯಾವುದೇ ಸುಳಿವು ಸಿಕ್ಕಿರಲಿಲ್ಲ.

ರೈತರೊಬ್ಬರು ತಮ್ಮ ಜಮೀನಿಗೆ ತೆರಳಿದಾಗ ಕೊಳೆತ ಶವದ ವಾಸನೆ ಬಂದಿದೆ. ಬಳಿಕ ಹುಡುಕಾಡಿದಾಗ ಬಾಲಕಿಯ ಮನೆಯಿಂದ 2 ಕಿ.ಮೀ ದೂರದಲ್ಲಿದ್ದ ಕಬ್ಬಿನ ಗದ್ದೆಯಲ್ಲಿ ಶವ ಬಿದ್ದಿರುವುದು ಶುಕ್ರವಾರ ರಾತ್ರಿ ಪತ್ತೆಯಾಗಿತ್ತು.

ಮರಣೋತ್ತರ ಪರೀಕ್ಷೆಯಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿರುವುದು ದೃಢಪಟ್ಟಿದೆ. ಬಾಲಕಿಯ ತಂದೆ ತರಕಾರಿ ವ್ಯಾಪಾರಿಯಾಗಿದ್ದು, ಅವರಿಗೆ ನಾಲ್ವರು ಮಕ್ಕಳಿದ್ದರು.

ಈ ಸಂಬಂಧ ಪೊಲೀಸರು ಐಪಿಸಿ ಸೆಕ್ಷನ್ ಮತ್ತು ಪೋಕ್ಸೊ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು