ಓಮಿಕ್ರಾನ್‌ ಭೀತಿ: ಹೆಂಡತಿ ಮತ್ತು ಇಬ್ಬರು ಅಪ್ರಾಪ್ತ ಮಕ್ಕಳನ್ನು ಕೊಂದ ಪ್ರೊಫೆಸರ್

ಕಾನ್ಪುರ :  ಆಘಾತಕಾರಿ ಘಟನೆಯೊಂದರಲ್ಲಿ, ಹೊಸದಾಗಿ ಹೊರಹೊಮ್ಮಿದ covid -19 ರೂಪಾಂತರದ ಓಮಿಕ್ರಾನ್‌ನ ಮೇಲಿನ ‘ಭಯ’ದಿಂದಾಗಿ ಕಾನ್ಪುರದ ಹಿರಿಯ ಫೋರೆನ್ಸಿಕ್ ಪ್ರೊಫೆಸರ್ ತನ್ನ ಹೆಂಡತಿ ಮತ್ತು ಇಬ್ಬರು ಅಪ್ರಾಪ್ತ ಮಕ್ಕಳನ್ನು ಕೊಂದಿದ್ದಾರೆ.

ನಗರದ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ಕೆಲಸ ಮಾಡುತ್ತಿದ್ದ ಕೊಲೆ ಆರೋಪಿಯು ಮೊದಲು ತನ್ನ ಪತ್ನಿಯ ಕತ್ತು ಹಿಸುಕಿ ನಂತರ ತನ್ನ ಮಗ ಮತ್ತು ಮಗಳ ತಲೆ ಬುರುಡೆಯನ್ನು ಸುತ್ತಿಗೆಯಿಂದ ಒಡೆದು ಕೊಂದಿರುವ ಘಟನೆ ಕಾನ್ಪುರದ ಕಲ್ಯಾಣಪುರ ಪ್ರದೇಶದಲ್ಲಿ ನಡೆದಿದೆ. ನಂತರ ಮನೆಯಿಂದ ಪರಾರಿಯಾಗಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.ಮನೆಯಿಂದ ಹೊರಡುವ ಮೊದಲು, ವ್ಯಕ್ತಿ ತನ್ನ ಸಹೋದರನಿಗೆ ವಾಟ್ಸಾಪ್ ಮೂಲಕ ಕೃತ್ಯವನ್ನು ತಿಳಿಸಿದನು ಮತ್ತು ‘ಮೃತ ದೇಹಗಳನ್ನು ನೋಡಿ ಬೇಸರಗೊಂಡಿದ್ದೇನೆ ಮತ್ತು ಓಮಿಕ್ರಾನ್‌ನಿಂದ(omicron) ಯಾವುದೇ ಪ್ರಾಣ ಉಳಿಯುವುದಿಲ್ಲ. ಅಂತಹ ಪರಿಸ್ಥಿತಿಯಿಂದ ‘ಎಲ್ಲರನ್ನು ವಿಮೋಚನೆಗೊಳಿಸುತ್ತಿದ್ದೇನೆ’ ಎಂದು ಹೇಳಿದರು.

ಸಂದೇಶವನ್ನು ಸ್ವೀಕರಿಸಿದ ನಂತರ ಆರೋಪಿಯ ಸಹೋದರ ಸ್ಥಳಕ್ಕಾಗಮಿಸಿ ಫ್ಲಾಟ್‌ನ ಬಾಗಿಲು ಮುರಿದು ಒಳಹೋದರು. ಒಮ್ಮೆ ಒಳಗೆ ಹೋದಾಗ ಅತ್ತಿಗೆಯ ಶವ ಕಂಡಿತು. ಅವರ ಸೋದರಳಿಯ ಮತ್ತು ಸೊಸೆಯ ಶವಗಳು ಸಹ ಹತ್ತಿರದ ಕೋಣೆಯಲ್ಲಿ ಬಿದ್ದಿರುವುದು ಕಂಡುಬಂದಿದೆ. ಅವರು ಘಟನೆಯ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದು, ಅಧಿಕಾರಿಗಳು ವಿಧಿವಿಜ್ಞಾನ ತಂಡ ಮತ್ತು ಶ್ವಾನ ದಳದೊಂದಿಗೆ ಸ್ಥಳಕ್ಕೆ ತಲುಪಿದ್ದಾರೆ.

ಪ್ರಾಧ್ಯಾಪಕರು ತೀವ್ರ ಖಿನ್ನತೆಯಿಂದ ಬಳಲುತ್ತಿದ್ದು, ಚಿಕಿತ್ಸೆಯನ್ನೂ ಪಡೆಯುತ್ತಿದ್ದರು ಎಂದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ. ಆರೋಪಿಯು ಈ ಹಿಂದೆಯೂ ಪತ್ನಿಯ ಕೊಲೆಗೆ ಯತ್ನಿಸಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Gayathri SG

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

2 hours ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

2 hours ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

3 hours ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

3 hours ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

3 hours ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

3 hours ago