ಉತ್ತರ ಪ್ರದೇಶ

ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ವಾದ್ರಾ ಬಂಧನ: ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್ ಬಿ.ವಿ

ಉತ್ತರ ಪ್ರದೇಶ ಉಪ ಮುಖ್ಯಮಂತ್ರಿ ಕೇಶವ ಪ್ರಸಾದ್‌ ಮೌರ್ಯ ಅವರ ಭೇಟಿಯ ವಿರುದ್ಧ ನಡೆದ ರೈತರ ಪ್ರತಿಭಟನೆ ವೇಳೆ ದುರಂತ ಸಂಭವಿಸಿದ್ದು, ಇಂದು ಘಟನಾ ಸ್ಥಳಕ್ಕೆ ಹಾಗೂ ರೈತ ಕುಟುಂಬಗಳನ್ನು ಭೇಟಿ ಮಾಡಲು ತೆರಳುತ್ತಿದ್ದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ತಡೆದು, ಬಂಧಿಸಲಾಗಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ರಾಷ್ಟ್ರೀಯ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ಶ್ರೀನಿವಾಸ್ ಬಿವಿ, ಬಿಜೆಪಿಯಿಂದ ಏನನ್ನು ನಿರೀಕ್ಷಿಸಲಾಗುತ್ತಿತ್ತೋ, ಅದು ಕೊನೆಗೂ ಆಯಿತು. ‘ಮಹಾತ್ಮಗಾಂಧಿ’ಯವರ ಪ್ರಜಾಪ್ರಭುತ್ವ ರಾಷ್ಟ್ರವಾದಲ್ಲಿ ಅನ್ನದಾತನನ್ನು ಭೇಟಿ ಮಾಡಲು ಸಾಕಷ್ಟು ಹೋರಾಟ ಮಾಡಿದ ನಮ್ಮ ನಾಯಕಿ ಪ್ರಿಯಂಕಗಾಂಧಿ ಜೀಯವರನ್ನು ‘ಗೋಡ್ಸೆ’ಯ ಆರಾಧಕರು ಹರ್ಗಾಂವ್ ನಲ್ಲಿ ಬಂಧನಕ್ಕೊಳಪಡಿಸಿದ್ದಾರೆ. ಇದು ಹೋರಾಟದ ಆರಂಭವಷ್ಟೇ. ಕಿಸಾನ್ ಏಕತಾ ಜಿಂದಾಬಾದ್ ಎಂದು ಬರೆದುಕೊಂಡಿದ್ದಾರೆ.

ಉತ್ತರಪ್ರದೇಶದ ಲಖೀಂಪುರ ಖೇರಿಯಲ್ಲಿ ಭಾನುವಾರ ಪ್ರತಿಭಟನಕಾರ ರೈತರು ಮತ್ತು ಬಿಜೆಪಿ ಕಾರ್ಯಕರ್ತರ ನಡುವಿನ ಘರ್ಷಣೆಯಲ್ಲಿ ಕನಿಷ್ಠ 8 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. 3ಕ್ಕೂ ಹೆಚ್ಚು ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಇದರಿಂದ ಉತ್ತರಪ್ರದೇಶದಾದ್ಯಂತ ಹೈಅಲರ್ಟ್‌ ಘೋಷಿಸಲಾಗಿದೆ.

Sneha Gowda

Recent Posts

40 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಇಂಡಿಯಾ ಮೈತ್ರಿಕೂಟ ಗೆಲ್ಲಲಿದೆ: ಡಿ.ಕೆ.ಶಿವಕುಮಾರ್

ಉತ್ತರ ಪ್ರದೇಶದಲ್ಲಿ 40 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಇಂಡಿಯಾ ಮೈತ್ರಿಕೂಟ ಗೆಲ್ಲಲಿದೆ. ದೇಶದೆಲ್ಲೆಡೆ ಕಾಂಗ್ರೆಸ್ ಪಕ್ಷ ಹಾಗೂ ಇಂಡಿಯಾ ಮೈತ್ರಿಕೂಟದ…

7 mins ago

ಕೇಜ್ರಿವಾಲ್ ನಿವಾಸದಲ್ಲಿ ಸ್ವಾತಿ ಮಲಿವಾಲ್ ಜಗಳದ ವಿಡಿಯೋ ತುಣುಕು ವೈರಲ್

ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರ ಸಹಾಯಕ ಬಿಭವ್ ಕುಮಾರ್ ಅವರು ನಗರದ ಸಿವಿಲ್ ಲೈನ್ಸ್‌ನಲ್ಲಿರುವ ದೆಹಲಿ…

18 mins ago

ಕೇಜ್ರಿವಾಲ್‌ ನಾಚಿಕೆಯಿಲ್ಲದೇ ಆರೋಪಿ ಬಿಭವ್‌ ಕುಮಾರ್‌ ಜೊತೆ ತಿರುಗಾಟ: ನಿರ್ಮಲಾ ಸೀತಾರಾಮನ್‌

ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲಿನ ಹಲ್ಲೆಯನ್ನು ಖಂಡಿಸಿ ಮಾತನಾಡದ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ವಿರುದ್ಧ ಕೇಂದ್ರ ಹಣಕಾಸು ಸಚಿವೆ…

19 mins ago

ಈಜಲು ಹೋಗಿ‌ದ್ದ ಮೂವರು ನೀರುಪಾಲು: 5 ಜನ ಪ್ರಾಣಾಪಾಯದಿಂದ ಪಾರು

ಈಜಲು ಹೋಗಿ‌ದ್ದ ಮೂವರು ನೀರುಪಾಲಾಗಿರುವ ಘಟನೆ ರಾಮನಗರ ತಾಲೂಕಿನ ಅಚ್ಚಲು ಗ್ರಾಮದ ಬಳಿ ನಡೆದಿದೆ.

42 mins ago

“ಪಟ್ಲ ಸಂಭ್ರಮ” ಯಶಸ್ವಿಗೊಳಿಸಲು ಪಟ್ಲ ಸತೀಶ್ ಶೆಟ್ಟಿ ಕರೆ

ಮೇ 26 ರಂದು ಅಡ್ಯಾರ್ ಗಾರ್ಡನ್ ನಲ್ಲಿ ನಡೆಯುವ "ಪಟ್ಲ ಸಂಭ್ರಮ" ನಮ್ಮೆಲ್ಲರ ಮನೆಯ ಕಾರ್ಯಕ್ರಮ. ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಪಟ್ಲ…

51 mins ago

ಮಂಗಳೂರು: ಕರ್ತವ್ಯದಲ್ಲಿದ್ದ ವಾಹನದ ಬಗ್ಗೆ ಸುಳ್ಳು ಸಂದೇಶ ರವಾನಿಸಿದ ಸಾರ್ವಜನಿಕ

ಕಳೆದ ದಿನ (ಮೇ 16) ಸಂಜೆ ಮಂಗಳೂರು ನಗರದ ಕುಂಟಿಕಾನ ಬಳಿ ಕರ್ತವ್ಯದಲ್ಲಿದ್ದ ಕೆಎ-19-ಜಿ-1023 ನೊಂದಣೆ ಸಂಖ್ಯೆಯ ಹೆದ್ದಾರಿ ಗಸ್ತು…

57 mins ago