ಕಾನ್ಪುರ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಪಾದಚಾರಿಗಳ ಮೇಲೆ ಎಲೆಕ್ಟ್ರಿಕ್ ಬಸ್ ಹರಿದ ಪರಿಣಾಮ ಕನಿಷ್ಠ ಆರು ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಈ ಘಟನೆಯು ಕಾನ್ಪುರದ ಟ್ಯಾಟ್ಮಿಲ್ ಕ್ರಾಸಿಂಗ್ ಬಳಿ ನಡೆದಿದೆ.ಅಪಘಾತದಲ್ಲಿ ಮೂರು ಕಾರುಗಳಿಗೂ ಹಾನಿಯಾಗಿದೆ ಎಂದು ಪೂರ್ವ ಕಾನ್ಪುರದ ಡಿಸಿಪಿ ಪ್ರಮೋದ್ ಕುಮಾರ್ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದ್ದಾರೆ.
ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗಳಿಗೆ ರವಾನಿಸಲಾಗಿದ್ದು, ಒಂಬತ್ತು ಜನರ ಸ್ಥಿತಿ ಚಿಂತಾಜನಕವಾಗಿದೆ ಎಂದು ಪ್ರಮೋದ್ ಕುಮಾರ್ ಹೇಳಿದ್ದಾರೆ.