ಕಾನ್ಪುರ:14 ವರ್ಷದ ಬಾಲಕಿ ಮೇಲೆ ಸಹೋದರರಿಂದ ಸಾಮೂಹಿಕ ಅತ್ಯಾಚಾರ

  ಕಾನ್ಪುರ: 14 ವರ್ಷದ ಬಾಲಕಿಯ ಮೇಲೆ ಇಬ್ಬರು ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆಯು ಕಾನ್ಪುರದಲ್ಲಿ ನಡೆದಿದೆ.ಪೊಲೀಸರು ನೀಡಿರುವ ಮಾಹಿತಿಯ ಪ್ರಕಾರ, ಸಹೋದರರಾದ ಚುಟ್ಕನ್​ ಹಾಗೂ ಬಡ್ಕನ್​ ಎಂಬವರು ಈ ಕೃತ್ಯ ಎಸಗಿದ್ದಾರೆ. ಗಂಟೆ ಕಳೆದರೂ ಬಾಲಕಿ ಪತ್ತೆ ಸಿಗದ ಹಿನ್ನೆಲೆಯಲ್ಲಿ ಪೋಷಕರು ಪೊಲೀಸರಿಗೆ ದೂರನ್ನು ನೀಡಿದ್ದಾರೆ.

ಅಪ್ರಾಪ್ತೆಯು ಮನೆಯ ಹೊರಗೆ ತಾನು ಸಾಕಿದ್ದ ಪ್ರಾಣಿಗಳಿಗೆ ಆಹಾರ ನೀಡುತ್ತಿದ್ದ ವೇಳೆಯಲ್ಲಿ ಇಬ್ಬರು ಕಾಮುಕರು ಆಕೆಯನ್ನು ಅಪಹರಿಸಿ ಬಳಿಕ ಅತ್ಯಾಚಾರಗೈದಿದ್ದಾರೆ.

ಸಂಪೂರ್ಣ ಗ್ರಾಮವೇ ಬಾಲಕಿಗಾಗಿ ಹುಡುಕಾಟ ನಡೆಸಿದ್ದರೂ ಸಹ ಯಾವುದೇ ಸುಳಿವು ಪತ್ತೆ ಆಗಿರಲಿಲ್ಲ.ಪೊದೆಯೊಂದರಲ್ಲಿ ಬಾಲಕಿಯನ್ನು ಹಗ್ಗದಿಂದ ಕಟ್ಟಿ ಹಾಕಲಾಗಿದ್ದು, ಆಕೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಇದ್ದಾಳೆ ಮತ್ತು ಆಕೆಯ ಬಾಯಿಗೆ ಬಟ್ಟೆಯನ್ನು ಕಟ್ಟಲಾಗಿದೆ ಎಂದು ಸಂಬಂಧಿಕರೊಬ್ಬರಿಗೆ ಮಾಹಿತಿ ಸಿಕ್ಕಿದೆ.

ಬಳಿಕ ಬಾಲಕಿಯ ಕುಟುಂಬಸ್ಥರು ಪೊಲೀಸರಿಗೆ ಈ ಬಗ್ಗೆ ಮಾಹಿತಿ ನೀಡಿದ್ದರು. ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿದ್ದು ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆಂದು ಆಸ್ಪತ್ರೆಗೆ ಕಳುಹಿಸಿದ್ದಾರೆ. ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದು ಮತ್ತೊಬ್ಬರಿಗಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ.

Swathi MG

Recent Posts

ಒಗ್ಗಟ್ಟಾಗಿ ಕೆಲಸ ಮಾಡಿದರೆ ಶಿವಮೊಗ್ಗದಲ್ಲಿ ರಾಘವೇಂದ್ರ ಗೆಲ್ಲುತ್ತಾರೆ : ಹೆಚ್‌ಡಿಕೆ

ಒಗ್ಗಟ್ಟಾಗಿ ಕೆಲಸ ಮಾಡಿದರೆ ಶಿವಮೊಗ್ಗ ಗ್ರಾಮಾಂತರದಲ್ಲಿ ಒಂದು ಲಕ್ಷದ ಮತ ದಿಂದ ರಾಘವೇಂದ್ರ ಗೆಲ್ಲಲಿದ್ದಾರೆ ಎಂದು ಮಜಿಮುಖ್ಯಮಂತ್ರಿ ಕುಮಾರ ಸ್ವಾಮಿ…

6 hours ago

ಪ್ರಜ್ವಲ್ ರೇವಣ್ಣ ಉಚ್ಚಾಟನೆ : ಕುಮಾರ ಸ್ವಾಮಿ ಶಿವಮೊಗ್ಗದಲ್ಲಿ ಪ್ರತಿಕ್ರಿಯೆ

ಪ್ರಜ್ವಲ್ ರೇವಣ್ಣ ಉಚ್ಚಾಟನೆ ಬಗ್ಗೆ ಮಾಜಿ ಸಿಎಂ ಕುಮಾರ ಸ್ವಾಮಿ ಶಿವಮೊಗ್ಗದಲ್ಲಿ ಪ್ರತಿಕ್ರಿಯೆ ನೀಡಿದ್ದು, ನಿನ್ನೆಯೇ ಈ ಬಗ್ಗೆ ನಮ್ಮ…

6 hours ago

ಬಿಜೆಪಿ ಅಭ್ಯರ್ಥಿ ಜೈಲಿಗೆ ಹೋಗುವ ದಿನಕ್ಕೆ ಕ್ಷಣಗಣನೆ : ಪ್ರಿಯಾಂಕಾ ಗಾಂಧಿ

ಒಲಿಂಪಿಕ್ಸ್ ಆಟಗಾರರ ಮೇಲೆ ಕಿರುಕುಳವಾಗಿತ್ತು, ಮಹಿಳೆಯ ಮೇಲೆ ಅತ್ಯಾಚಾರವಾಗಿತ್ತು. ಆಗ ಪ್ರಧಾನಿ ಮೋದಿ‌ ಸುಮ್ಮನೆ ಇದ್ದರಲ್ಲದೆ ಇಂದು ಕರ್ನಾಟಕದಲ್ಲಿ ಸಾವಿರಾರು…

6 hours ago

ಕಾಂಗ್ರೆಸ್ ಗ್ಯಾರಂಟಿ ಕಾರ್ಡ ವಿತರಣೆ ಮಾಡಿದ ಕಾರ್ಯಕರ್ತರು

ಮತಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಗೆಲವು ನಿಶ್ಚಿತವಾಗಿದೆ ಎಂದು ಕಾಂಗ್ರೆಸ್ ಮುಖಂಡ ವಿಶ್ವರಾಧ್ಯ ದಳವಾಯಿ ಸುಂಬಡ ಅವರು…

6 hours ago

ದೇಶ ಭಕ್ತಿಯನ್ನು ಮೋದಿಯವರಿಗೆ ಗುತ್ತಿಗೆ ಕೊಟ್ಟಿಲ್ಲ: ಲಕ್ಷ್ಮಣ ಸವದಿ

ದೇಶ ಭಕ್ತಿಯನ್ನು ಈ ಬಿಜೆಪಿಯವರಿಗೆ ಹಾಗೂ ಪ್ರಧಾನಿಗೆ ಗುತ್ತಿಗೆ ಕೊಟ್ಟಿಲ್ಲ. ನಾವು ಕೂಡ ದೇಶ ಭಕ್ತರೇ ಎಂದು ಮಾಜಿ ಮುಖ್ಯಮಂತ್ರಿ…

6 hours ago

ಶನಿವಾರಸಂತೆ ಹಲ್ಲೆ ಪ್ರಕರಣ : ನಿಷ್ಪಕ್ಷಪಾತ ತನಿಖೆಗೆ ಹನೀಫ್ ಒತ್ತಾಯ

ಕಳೆದ ಚುನಾವಣಾ ದಿನದಂದು ಕ್ಷುಲ್ಲಕ ವಿಚಾರವಾಗಿ ಎರಡು ರಾಜಕೀಯ ಪಕ್ಷಗಳ ನಡುವೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಿಷ್ಪಕ್ಷಪಾತವಾದ…

7 hours ago