ಕಾಶಿ ವಿಶ್ವ ಧಾಮದಲ್ಲಿ ಕೆಲಸ ಮಾಡುವವರಿಗೆ 100 ಜೋಡಿ ಪಾದರಕ್ಷೆಗಳನ್ನು ಕಳುಹಿಸಿದ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಲೋಕಸಭಾ ಕ್ಷೇತ್ರವಾದ ವಾರಣಾಸಿಯ ಕಾಶಿ ವಿಶ್ವನಾಥ ಧಾಮದಲ್ಲಿ ಕೆಲಸ ಮಾಡುವವರಿಗೆ 100 ಜೋಡಿ ಸೆಣಬಿನ ಪಾದರಕ್ಷೆಗಳನ್ನು ಕಳುಹಿಸಿದ್ದಾರೆ.

ಸರ್ಕಾರಿ ಮೂಲಗಳ ಪ್ರಕಾರ, ಕಾಶಿ ವಿಶ್ವನಾಥ ಕಾರಿಡಾರ್ ಉದ್ಘಾಟನೆಗೆಂದು ವಾರಣಾಸಿಗೆ ಭೇಟಿ ನೀಡಿದಾಗ, ದೇವಾಲಯದಲ್ಲಿ ಕೆಲಸ ಮಾಡುವ ಹೆಚ್ಚಿನ ಜನರು ತಮ್ಮ ಕರ್ತವ್ಯವನ್ನು ಬರಿಗಾಲಿನಲ್ಲಿ ನಿರ್ವಹಿಸುತ್ತಿರುವುದನ್ನ ಪ್ರಧಾನಿ ಮೋದಿ ಗಮನಿಸಿದ್ದರು.

ದೇವಾಲಯದ ಆವರಣದಲ್ಲಿ ಚರ್ಮ ಅಥವಾ ರಬ್ಬರ್‌ನಿಂದ ಮಾಡಿದ ಪಾದರಕ್ಷೆಗಳನ್ನು ಧರಿಸುವುದನ್ನು ನಿಷೇಧಿಸಲಾಗಿದೆ. ಅರ್ಚಕರು, ಸೇವೆ ಮಾಡುವ ಜನರು, ಭದ್ರತಾ ಸಿಬ್ಬಂದಿ, ನೈರ್ಮಲ್ಯ ಕಾರ್ಯಕರ್ತರು ಮತ್ತು ಇತರರು ಸೇರಿದಂತೆ ಯಾರೂ ಈ ಆದೇಶದಿಂದ ಹೊರತಾಗಿಲ್ಲ.

ಹೀಗಾಗಿ, ಪ್ರಧಾನ ಮಂತ್ರಿಗಳು ತಕ್ಷಣವೇ 100 ಜೋಡಿ ಸೆಣಬಿನ ಪಾದರಕ್ಷೆಗಳನ್ನು ಖರೀದಿಸಿ ಕಾಶಿ ವಿಶ್ವನಾಥ ಧಾಮಕ್ಕೆ ಕಳುಹಿಸಿದರು, ಇದರಿಂದ ಧಾಮದಲ್ಲಿ ತಮ್ಮ ಕರ್ತವ್ಯಗಳನ್ನು ನಿರ್ವಹಿಸುವವರು ಶೀತ ವಾತಾವರಣದಲ್ಲಿ ಬರಿಗಾಲಿನಲ್ಲಿ ಕಾರ್ಯ ನಿರ್ವಹಿಸಬೇಕಿಲ್ಲ.

ಪ್ರಧಾನಿಯವರು ತಮಗೆ ಪಾದರಕ್ಷೆ ಕಳುಹಿಸಿದ್ದಾರೆಂದು ತಿಳಿದು ಕಾಶಿ ವಿಶ್ವನಾಥ ಧಾಮದಲ್ಲಿನ ಜನರು ತುಂಬಾ ಖುಷಿಪಟ್ಟರು. ಕಳೆದ ತಿಂಗಳು ವಾರಣಾಸಿಗೆ ಎರಡು ದಿನಗಳ ಭೇಟಿ ಕೊಟ್ಟ ಸಂದರ್ಭದಲ್ಲಿ, ಕಾಶಿ ವಿಶ್ವನಾಥ ಕಾರಿಡಾರ್ ನಿರ್ಮಿಸಿದ ಕಾರ್ಮಿಕರ ಮೇಲೆ ಪ್ರಧಾನಿ ಅವರು ಹೂವಿನ ದಳಗಳನ್ನು ಸುರಿಸಿ ನಂತರ ಅವರೊಂದಿಗೆ ಊಟ ಮಾಡಿದ್ದರು.

Gayathri SG

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

4 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

4 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

4 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

5 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

5 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

5 hours ago