News Karnataka Kannada
Monday, May 06 2024
ಉತ್ತರ ಪ್ರದೇಶ

ಕೆಲಸಕ್ಕೆ ಸೇರಿದ ಮೊದಲ ದಿನವೇ ನರ್ಸ್ ಶವವಾಗಿ ಪತ್ತೆ

Untitled 101
Photo Credit :

ಉತ್ತರ ಪ್ರದೇಶ :  ಉನ್ನಾವೋ ಜಿಲ್ಲೆಯ ಖಾಸಗಿ ಆಸ್ಪತ್ರೆಯೊಂದರ ಆವರಣದಲ್ಲಿ ಶನಿವಾರ ಬೆಳಗ್ಗೆ ನರ್ಸ್‌ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹತ್ಯೆಯಾಗುವ ಮುನ್ನ ಸಾಮೂಹಿಕ ಅತ್ಯಾಚಾರ ನಡೆಸಲಾಗಿದೆ ಎಂದು ಸಂತ್ರಸ್ತೆಯ ಕುಟುಂಬಸ್ಥರು ತಿಳಿಸಿದ್ದಾರೆ. ಯುವತಿಯ ತಾಯಿ ನೀಡಿದ ದೂರಿನ ಆಧಾರದ ಮೇಲೆ ಮೂವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಕುಟುಂಬ ಸದಸ್ಯರ ಪ್ರಕಾರ, ಈ ಘಟನೆಯ ಒಂದು ದಿನದ ಮೊದಲು ಆಕೆ ಆಸ್ಪತ್ರೆಯಲ್ಲಿ ಕೆಲಸಕ್ಕೆ ಸೇರಿಕೊಂಡಿದ್ದರು.

ಇಲ್ಲಿನ ನ್ಯೂ ಜೀವನ್ ಆಸ್ಪತ್ರೆಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಉನ್ನಾವೋ ಜಿಲ್ಲೆಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಶಿ ಶೇಖರ್ ಸಿಂಗ್ ಮಾಹಿತಿ ನೀಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು