ಗೋರಖ್‌ಪುರದಿಂದ ಯೋಗಿ ಆದಿತ್ಯನಾಥ್ ಸ್ಪರ್ಧೆ

ಲಕ್ನೋ, ಜ. 15 : ಮುಂದಿನ ತಿಂಗಳು ನಡೆಯಲಿರುವ ಉತ್ತರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯುಮಂತ್ರಿ ಯೋಗಿ ಆದಿತ್ಯನಾಥ್ ಗೋರಖ್‌ಪುರದಿಂದ ಸ್ಪರ್ಧಿಸಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಗೋರಖ್‌ಪುರದಿಂದ ಯೋಗಿ ಸ್ಪರ್ಧಿಸುವುದಾದರೆ ಅಯೋಧ್ಯೆಯಿಂದ ಯಾರು ಸ್ಪರ್ಧಿಸಲಿದ್ದಾರೆ ಎನ್ನುವ ಕುತೂಹಲ ಎಲ್ಲರಲ್ಲಿ ಮೂಡಿದೆ. ಉತ್ತರಪ್ರದೇಶದಲ್ಲಿ ಏಳು ಹಂತದಲ್ಲಿ ಮತದಾನ ನಡೆಯಲಿದೆ.

ಮೊದಲ ಹಂತದಲ್ಲಿ 58 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು, ಅದರಲ್ಲಿ 57 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಇಂದು ಧರ್ಮೇಂದ್ರ ಪ್ರಧಾನ್​ ಬಿಡುಗಡೆ ಮಾಡಿದ್ದಾರೆ. ಹಾಗೇ, ಎರಡನೇ ಹಂತದಲ್ಲಿ 55 ವಿಧಾನಸಭೆ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು, ಅದರ 38 ಅಭ್ಯರ್ಥಿಗಳ ಹೆಸರನ್ನೂ ಇಂದು ಬಿಡುಗಡೆ ಮಾಡಲಾಗಿದೆ.

ಉತ್ತರ ಪ್ರದೇಶದಲ್ಲಿ ಏಳು ಹಂತಗಳಲ್ಲಿ ಚುನಾವಣೆ:

– ಮೊದಲ ಹಂತದಲ್ಲಿ ಫೆಬ್ರವರಿ 10ರಂದು ಮತದಾನ

– ಎರಡನೇ ಹಂತದಲ್ಲಿ ಫೆಬ್ರವರಿ 14ರಂದು ಮತದಾನ

– ಮೂರನೇ ಹಂತದಲ್ಲಿ ಫೆಬ್ರವರಿ 20ರಂದು ಮತದಾನ

– ನಾಲ್ಕನೇ ಹಂತದಲ್ಲಿ ಫೆಬ್ರವರಿ 23ರಂದು ಮತದಾನ

– ಐದನೇ ಹಂತದಲ್ಲಿ ಫೆಬ್ರವರಿ 27ರಂದು ಮತದಾನ

– ಆರನೇ ಹಂತದಲ್ಲಿ ಮಾರ್ಚ್ 3ರಂದು ಮತದಾನ

– ಏಳನೇ ಹಂತದಲ್ಲಿ ಮಾರ್ಚ್ 7ರಂದು ಮತದಾನ

ದೇಶದಲ್ಲಿ ಅತಿಹೆಚ್ಚು ವಿಧಾನಸಭೆ ಕ್ಷೇತ್ರಗಳನ್ನು ಹೊಂದಿರುವ ಉತ್ತರ ಪ್ರದೇಶದಲ್ಲಿ ಅಧಿಕಾರದ ಗದ್ದುಗೆ ಹಿಡಿಯುವುದಕ್ಕೆ ಬಿಜೆಪಿ, ಸಮಾಜವಾದಿ ಮತ್ತು ಬಹುಜನ ಸಮಾಜವಾದಿ ಸೇರಿದಂತೆ ಪ್ರಾದೇಶಿಕ ಪಕ್ಷಗಳ ನಡುವೆ ಪೈಪೋಟಿ ನಡೆಯುತ್ತಿದೆ. ಅತಿಹೆಚ್ಚು ಕ್ಷೇತ್ರಗಳನ್ನು ಹೊಂದಿರುವ ರಾಜ್ಯದ ಮತದಾರರ ಮನ ಗೆಲ್ಲುವುದಕ್ಕಾಗಿ ಇತ್ತೀಚಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಲವು ಬಾರಿ ರಾಜ್ಯಕ್ಕೆ ಭೇಟಿ ನೀಡಿ ಸಾಕಷ್ಟು ಯೋಜನೆಗಳಿಗೆ ಚಾಲನೆ ನೀಡಿದ್ದರು.

Gayathri SG

Recent Posts

ಚಿಕ್ಕಮಗಳೂರು: ಫಲಾನುಭವಿಗಳಿಗೆ ಯಶಸ್ವಿನಿ ಕಾರ್ಡ್ ವಿತರಣೆ

ಆಕಸ್ಮಿಕವಾಗಿ ಸಂಭವಿಸುವ ಕಾಯಿಲೆಗಳಿಗೆ ಸೂಕ್ತ ಚಿಕಿತ್ಸೆ ಪಡೆದುಕೊ ಳ್ಳುವ ಸಲುವಾಗಿ ಸರ್ಕಾರ ಜಾರಿಗೊಳಿಸಿರುವ ಯಶಸ್ವಿನಿ ಯೋಜನೆಯನ್ನು ಸಮರ್ಪಕವಾಗಿ ಬಳಸಿಕೊಳ್ಳ ಬೇಕು…

6 mins ago

ರೈತರಿಗೆ ಪರಿಹಾರ ನೀಡುವಲ್ಲಿ ತಾರತಮ್ಯ ನಿಲ್ಲಿಸಿ ಪರಿಹಾರ ನೀಡಿ: ರಮೇಶ ಹೂಗಾರ ಮನವಿ

ರಾಜ್ಯದಲ್ಲಿ ಭೀಕರ ಬರಗಾಲದಿಂದ ಕಂಗೆಟ್ಟಿರುವ ರೈತರಿಗೆ ರಾಜ್ಯ ಸರಕಾರ ಅಲ್ಪ ಮಟ್ಟಿಗೆ ಪರಿಹಾರ ನೀಡಿ ನಿಟ್ಟುಸಿರು ಬಿಡುವಂತೆ ಮಾಡಿದೆ.ಆದರೆ ಅಫಜಲಪುರ…

28 mins ago

ಅಂಜಲಿ ಕೊಲೆ ಪ್ರಕರಣ ಸಿಐಡಿಗೆ, ನೇಹಾ ಕೇಸ್​ ಸಿಬಿಐಗೆ ಕೊಡಲ್ಲ: ಗೃಹ ಸಚಿವ

ಹುಬ್ಬಳ್ಳಿಯ ನೇಹಾ ಹಿರೇಮಠ್ ಹತ್ಯೆ ಪ್ರಕರಣ ಬೆನ್ನಲ್ಲೇ ಇದೀಗ ಅಂಜಲಿ ಅಂಬಿಗೇರ ಕೊಲೆ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ಈ ಬಗ್ಗೆ…

35 mins ago

ಡ್ರಾಪ್​ ಕೊಡುವ ನೆಪದಲ್ಲಿ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರಕ್ಕೆ ಯತ್ನ

ಚಿಕ್ಕಬಳ್ಳಾಪುರ ತಾಲೂಕಿನ ಪೆರೇಸಂದ್ರ ಠಾಣಾ ವ್ಯಾಪ್ತಿಯಲ್ಲಿ ಯುವಕನೋರ್ವ ಡ್ರಾಪ್​ ಕೊಡುವ ನೆಪದಲ್ಲಿ  ತಡರಾತ್ರಿ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ…

49 mins ago

ಇಬ್ರಾಹಿಂ ರೈಸಿ ನಿಧನ: ನಾಳೆ ಭಾರತದಲ್ಲಿ ಒಂದು ದಿನದ ‘ಶೋಕಾಚರಣೆ’

ಹೆಲಿಕಾಪ್ಟರ್ ದುರಂತದಲ್ಲಿ ನಿಧನರಾದ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ನಿಧನಕ್ಕೆ ನಾಳೆ (ಮೇ 21) ಭಾರತದಲ್ಲಿ ಒಂದು ದಿನದ ರಾಜ್ಯ…

56 mins ago

ಪ್ರಕಟಣೆಯಾದ ಸಂಶೋಧನಾ ಬರಹಗಳಿಗೆ ಹೆಚ್ಚಿನ ಪ್ರಾಮುಖ್ಯತೆ ಇದೆ: ಡಾ. ಸುಧಾಕರ್ ವೈ.ಎನ್

ವಿದ್ಯಾರ್ಥಿಗಳು ಪ್ರಕಟಿಸುವ ಸಂಶೋಧನಾ ಬರಹಗಳು ಉನ್ನತ ವೇತನ ಶ್ರೇಣಿಯ ವೃತ್ತಿ ಅವಕಾಶಗಳನ್ನು ಪಡೆದುಕೊಳ್ಳುವಲ್ಲಿ ಉಪಯುಕ್ತವಾಗುತ್ತವೆ ಎಂದು ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್…

1 hour ago