ತಾಲಿಬಾನ್‌ ನಡೆಯನ್ನು ಸಮರ್ಥಿಸಿಕೊಂಡ ಸಮಾಜವಾದಿ ಪಕ್ಷದ ಸಂಸದನ ಹೇಳಿಕೆಗೆ ವ್ಯಾಪಕ ಖಂಡನೆ

 

ನವದೆಹಲಿ: ಇಡೀ ಜಗತ್ತಿನ ಎಲ್ಲೆಡೆ ತಾಲಿಬಾನ್‌ ಉಗ್ರರು ಅಪ್ಘಾನಿಸ್ಥಾನವನ್ನು ಬಗ್ಗೆ ಆತಂಕ ವ್ಯಕ್ತಪಡಿಸುತಿದ್ದರೆ ಉತ್ತರ ಪ್ರದೇಶದ ಸಮಾಜವಾದಿ ಪಕ್ಷದ ಸಂಸದ ಶಫಿಕರ್‌ ರೆಹಮಾನ್‌ ಬಾರ್ಕ್‌ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ತಾಲಿಬಾನ್‌ಗಳು ಅಫ್ಘಾನ್‌ನಲ್ಲಿ ಸ್ವಾತಂತ್ರ್ಯವನ್ನು ಬಯಸಿದ್ದಾರೆ ಎಂದು ಭಾರತದ ಸ್ವಾತಂತ್ರ್ಯ ಚಳುವಳಿಗೆ ಹೋಲಿಸಿ ಹೇಳಿದ್ದಾರೆ. ಸಂಭಾಲ್ ಲೋಕಸಭಾ ಸಂಸದ ಶಫಿಕರ್ ಅವರ ಈ ಹೇಳಿಕೆಗೆ ಭಾರಿ ಆಕ್ರೋಶ ವ್ಯಕ್ತವಾಗಿದೆ.
ರಷ್ಯಾ ಮತ್ತು ಅಮೆರಿಕ ಅಫ್ಘಾನಿಸ್ತಾನವನ್ನು ಆಳಲು ತಾಲಿಬಾನ್ ಅನುಮತಿಸುವುದಿಲ್ಲ. ಈಗ ಅವರು ತಮ್ಮ ದೇಶವನ್ನು ಆಳಲು ಬಯಸುತ್ತಾರೆ. ದೇಶವನ್ನು ಬ್ರಿಟಿಷರು ಆಳಿದಾಗ, ಇಡೀ ದೇಶವು ಅವರ ವಿರುದ್ಧ ಹೋರಾಡಿತು. ಅದೇ ರೀತಿ, ಅವರಿಗೆ ಸ್ವಾತಂತ್ರ್ಯ ಬೇಕು. ಅದು ಅವರ ಆಂತರಿಕ ವ್ಯವಹಾರವಾಗಿದೆ. ನಾವು ಅದರಲ್ಲಿ ಹೇಗೆ ಹಸ್ತಕ್ಷೇಪ ಮಾಡುತ್ತೇವೆ ಎಂದು ಪ್ರಶ್ನಿಸಿದ್ದಾರೆ.ಇದನ್ನೂ ಓದಿ: ಆಫ್ಘನ್​ ಬಿಕ್ಕಟ್ಟು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಮಹತ್ವದ ಸಭೆಬಾರ್ಕ್‌ ಹೇಳಿಕೆಗೆ ಪ್ರತಿಕ್ರಿಯಿಸಿರುವ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ನಾಚಿಕೆಯಿಲ್ಲದೆ ತಾಲಿಬಾನ್‌ಗಳನ್ನು ಶಫಿಕರ್‌ ರೆಹಮಾನ್‌ ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ. ನಾವು ಪ್ರಜಾಪ್ರಭುತ್ವದಲ್ಲಿದ್ದೇವೆ. ಆದ್ರೆ ಇವರು ಮಾನವೀಯತೆಗೆ ಬೆಂಕಿ ಹಚ್ಚುವವರನ್ನು ಬೆಂಬಲಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ನಾನು ಸಂಸದರ ಹೇಳಿಕೆ ಕೇಳಲಿಲ್ಲ. ಆದರೆ, ಬಾರ್ಕ್‌ ಅಂತಹ ಟೀಕೆಗಳನ್ನು ಮಾಡಿದ್ದರೆ, ಅವರು ಮತ್ತು ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ನಡುವೆ ಯಾವುದೇ ದೊಡ್ಡ ವ್ಯತ್ಯಾಸವಿರಲಿಲ್ಲ ಎಂದು ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಪ್ರತಿಕ್ರಿಯಿಸಿದ್ದಾರೆ.ಹಲವಾರು ನೆಟ್ಟಿಗರೂ ಈ ಹೇಳಿಕೆಗೆ ಖಂಡನೆ ವ್ಯಕ್ತಪಡಿಸಿದ್ದಾರೆ.

Indresh KC

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

4 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

5 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

5 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

5 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

6 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

7 hours ago