ಉತ್ತರ ಪ್ರದೇಶ : ದೆಹಲಿ-ಮೀರತ್ ಎಕ್ಸ್ಪ್ರೆಸ್ವೇಯಲ್ಲಿ ಕಾರು-ಟ್ರಕ್ ನಡುವೆ ಡಿಕ್ಕಿಯಾಗಿದ್ದು, ಸ್ಥಳದಲ್ಲೇ ಐವರು ಮೃತಪಟ್ಟಿದ್ದಾರೆ. ಉತ್ತರ ಪ್ರದೇಶದ ಗಾಜಿಯಾಬಾದ್ ಜಿಲ್ಲೆಯ ಮಸೂರಿ ಪ್ರದೇಶದಲ್ಲಿ ಘಟನೆ ನಡೆದಿದೆ.
ಕಾರಿನಲ್ಲಿ ಏಳು ಮಂದಿ ಪ್ರಯಾಣಿಸುತ್ತಿದ್ದರು. ಎಕ್ಸ್ಪ್ರೆಸ್ವೇನಲ್ಲಿ ಕಾರು ಟ್ರಕ್ಗೆ ಡಿಕ್ಕಿ ಹೊಡೆದಿದ್ದು, ಐವರು ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಉತ್ತರಾಖಂಡದ ಹರಿದ್ವಾರದಿಂದ ಗಾಜಿಯಾಬಾದ್ಗೆ ವಾಪಾಸಾಗುವ ವೇಳೆ ಅಪಘಾತ ಸಂಭವಿಸಿದೆ.