ಪೂರ್ವಾಂಚಲ್ ಎಕ್ಸ್‌ಪ್ರೆಸ್‌ವೇ ಉದ್ಘಾಟಿಸಿದ ಪ್ರಧಾನಿ ಮೋದಿ

ಉತ್ತರ ಪ್ರದೇಶದ ಪೂರ್ವಾಂಚಲ್ ಎಕ್ಸ್‌ಪ್ರೆಸ್‌ವೇಯನ್ನು ಪ್ರಧಾನಿ ಮೋದಿ ಉದ್ಘಾಟಿಸಿದ್ದಾರೆ. ಪ್ರಧಾನಿ ಮೋದಿ ಹಾಗೂ ರಕ್ಷಣಾ ಸಚಿವ ರಾಜನಾಥ್ ಸಿಂಗ್ ವಾಯುಪಡೆಯ ಸಿ-130ಜೆ ಸೂಪರ್ ಹರ್ಕ್ಯುಲಸ್ ವಿಮಾನದಲ್ಲಿ ಬಂದಿಳಿದಿದ್ದು, ಎಕ್ಸ್‌ಪ್ರೆಸ್‌ವೇಯನ್ನು ಉದ್ಘಾಟಿಸಿದ್ದಾರೆ.

ಅಂದಾಜು 22,500 ಕೋಟಿ ವೆಚ್ಚದಲ್ಲಿ ಪೂರ್ವಾಂಚಲ್ ಎಕ್ಸ್‌ಪ್ರೆಸ್ ವೇ ನಿರ್ಮಾಣವಾಗಿದ್ದು, ಈ ಕೆಲಸಕ್ಕೆ ಬರೋಬ್ಬರಿ 36 ತಿಂಗಳುಗಳು ಬೇಕಾಗಿದೆ.
ಈ ಎಕ್ಸ್‌ಪ್ರೆಸ್‌ವೇ ಲಕ್ನೋ ಜಿಲ್ಲೆಯ ಚಂದ್‌ಸರೈ ಗ್ರಾಮದಿಂದ ಪ್ರಾರಂಭವಾಗಲಿದ್ದು, ರಾಷ್ಟ್ರೀಯ ಹೆದ್ದಾರಿ 31ರ ಗಾಜಿಪುರದ ಹೈದರಿಯಾ ಗ್ರಾಮದಲ್ಲಿ ಕೊನೆಯಾಗುತ್ತದೆ.

ಇದರ ಒಟ್ಟು ಉದ್ದ 340.824 ಕಿ.ಮೀಯಾಗಿದೆ. ಆರು ಪಥದ ಎಕ್ಸ್‌ಪ್ರೆಸ್‌ವೇ ಇದಾಗಿದ್ದು, ಮುಂದೆ ಎಂಟು ಪಥಗಳಿಗೆ ವಿಸ್ತರಿಸಿಕೊಳ್ಳಬಹುದಾಗಿದೆ.

ಪೂರ್ವಾಂಚಲ ಎಕ್ಸ್‌ಪ್ರೆಸ್‌ವೇ ಉತ್ತರ ಪ್ರದೇಶದ ಪೂರ್ವ ಭಾಗದ ಆರ್ಥಿಕ ಅಭಿವೃದ್ಧಿಗೆ ಒತ್ತು ನೀಡಲಿದೆ. ಲಖನೌ, ಅಮೇಥಿ, ಅಯೋಧ್ಯ, ಸುಲ್ತಾನ್‌ಪುರ, ಅಜಂಗಡ, ಗಾಜಿಪುರ ಹಾಗೂ ಮಾವೋ ಜಿಲ್ಲೆಗಳ ಅಭಿವೃದ್ಧಿಗೆ ಇದು ಪೂರಕವಾಗಲಿದೆ. ಎಕ್ಸ್‌ಪ್ರೆಸ್‌ವೇ ಹತ್ತಿರದ ಪ್ರದೇಶಗಳಲ್ಲಿ ಕೈಗಾರಿಕೆ ಅಭಿವೃದ್ಧಿ, ಶಿಕ್ಷಣ ಮತ್ತು ಆರೋಗ್ಯ ಸಂಸ್ಥೆಗಳು ತಲೆ ಎತ್ತಲಿವೆ.

ಪೂರ್ವಾಂಚಲ ಎಕ್ಸ್‌ಪ್ರೆಸ್‌ವೇನಲ್ಲಿ 22 ಫ್ಲೈ ಓವರ್‌ಗಳು, 7 ರೈಲ್ವೆ ಓವರ್ ಬ್ರಿಡ್ಜ್‌ಗಳು, 7 ಪ್ರಮುಖ ಸೇತುವೆಗಳು, 114 ಸಣ್ಣ ಸೇತುವೆಗಳು, 9 ಟೋಲ್ ಪ್ಲಾಜಾಗಳು, 45 ಅಂಡರ್‌ಪಾಸ್‌ಗಳು ಇವೆ.

2018 ರ ಜುಲೈನಲ್ಲಿ ಅಜಂಗಡದಲ್ಲಿ ಪ್ರಧಾನಿ ಮೋದಿ ಅವರು ಪೂರ್ವಾಂಚಲ ಎಕ್ಸ್‌ಪ್ರೆಸ್‌ವೇ ನಿರ್ಮಾಣಕ್ಕೆ ಅಡಿಗಲ್ಲು ಹಾಕಿದ್ದರು.

Sneha Gowda

Recent Posts

ಬಸವೇಶ್ವರ ಉದ್ಯಾನವನಕ್ಕೆ ‘ಸಾಂಸ್ಕೃತಿಕ ನಾಯಕ’ ಮರು ನಾಮಕರಣ

ಕರ್ನಾಟಕ ಕಾಲೇಜಿನ ಆವರಣದಲ್ಲಿರುವ ಬಸವೇಶ್ವರ ಉದ್ಯಾನವನಕ್ಕೆ 'ಸಾಂಸ್ಕೃತಿಕ ನಾಯಕ', ಮರು ನಾಮಕರಣದ ಉದ್ಘಾಟನೆಯನ್ನು ಕರ್ನಾಟಕ ಕಾಲೇಜಿನ ಪೌರ ಕಾರ್ಮಿಕ ಮಹಿಳೆ…

1 min ago

ಟೂರಿಸ್ಟ್ ಕಾರಿನಲ್ಲಿ ಮೃತದೇಹ ಸಾಗಾಟ: ಚಾಲಕನಿಗೆ ತರಾಟೆ

ಟೂರಿಸ್ಟ್ ಕಾರಿನಲ್ಲಿ ಮೃತದೇಹ ಕೊಂಡೊಯ್ದ ಘಟನೆಯೊಂದು ಉಡುಪಿ ಜಿಲ್ಲೆಯ ಗಡಿಭಾಗ ಶಿರೂರು ಟೋಲ್ ಗೇಟ್ ಬಳಿ ನಡೆದಿದೆ.

11 mins ago

ಕರ್ನಾಟಕದ ಎಲ್ಲಾ ಭಾಷೆಗಳಲ್ಲಿಯೇ ವೈಶಿಷ್ಟ್ಯ ಪಡೆದ ಲಂಬಾಣಿ ಭಾಷೆ

ರಾಜ್ಯದಲ್ಲಿ ಅತಿ ಹೆಚ್ಚು ಬಳಕೆಯಲ್ಲಿರುವ ಏಳು ಭಾಷೆಗಳ ಪೈಕಿ ಲಂಬಾಣಿ ಭಾಷೆಯೂ ಒಂದಾಗಿದ್ದು, ಕಲ್ಯಾಣ ಕರ್ನಾಟಕದ ಐದು ಜಿಲ್ಲೆಗಳಲ್ಲಿ ಈ…

22 mins ago

ಜಿಲ್ಲಾಧಿಕಾರಿಗಳಿಂದ ವಿಶ್ವಗುರು ಬಸವಣ್ಣನಿಗೆ ಪುಷ್ಪ ನಮನ

ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ 891 ಜಯಂತ್ಯೋತ್ಸವ ಅಂಗವಾಗಿ ಜಿಲ್ಲಾಡಳಿತ, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವುಗಳ…

39 mins ago

ಮದುವೆ ಮನೆಯ ಊಟ ಸೇವಿಸಿ ನೂರಾರು ಮಂದಿ ಅಸ್ವಸ್ಥ

ಮದುವೆ ಮನೆಯಲ್ಲಿ ಊಟ ಮಾಡಿದ ನೂರಾರು ಮಂದಿ ಏಕಾಏಕಿ ಅಸ್ವಸ್ಥಗೊಂಡ ಘಟನೆ ಚಿತ್ರದುರ್ಗ ತಾಲೂಕಿನ ಕಾಲ್ಗೆರೆ ಗ್ರಾಮದಲ್ಲಿ ನಡೆದಿದೆ.

50 mins ago

ಕಾಂಗ್ರೆಸ್ ಪರ ಮತ ಹಾಕಿಸಿದ್ದಕ್ಕೆ ಯುವಕನ ಕೊಲೆ

ಚುನಾವಣೆ ಮುಗಿದರೂ ಹಗೆತನ ಮುಗಿಯಲಿಲ್ಲ. ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದಕ್ಕೆ ಯುವಕನೊಬ್ಬ ಕೊಲೆಯಾಗಿದ್ದಾನೆ. ಜಾವೀದ್ ಚಿನ್ನಮಳ್ಳಿ (25)ಹತ್ಯೆಯಾದವನು. ಕಲಬುರಗಿಯ ಅಫಜಲಪುರ…

1 hour ago