ಪ್ರತಿಭಟನೆಯಲ್ಲಿ ಮೃತಪಟ್ಟ ರೈತ ಕುಟುಂಬಗಳಿಗೆ 45 ಲಕ್ಷ ರೂ. ಪರಿಹಾರ: ಉತ್ತರ ಪ್ರದೇಶ ಸರ್ಕಾರ

ಭಾರತೀಯ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕಾಯತ್, ಮತ್ತು ಪ್ರತಿಭಟನಾ ನಿರತ ರೈತರು ಹಾಗೂ ಯುಪಿ ಸರ್ಕಾರದ ಆಡಳಿತದ ನಡುವೆ ಮಾತುಕತೆ ನಡೆದಿದ್ದು, ಪ್ರತಿಭಟನಾ ನಿರತ ನಾಲ್ವರು ರೈತರು ಸೇರಿದಂತೆ ಮೃತಪಟ್ಟ 8 ಮಂದಿ ಕುಟುಂಬಕ್ಕೆ 45 ಲಕ್ಷ ರೂ. ಪರಿಹಾರ ನೀಡುವುದಾಗಿ ರಾಜ್ಯ ಸರ್ಕಾರ ತಿಳಿಸಿದೆ.

ನಾಲ್ಕು ಮೃತ ರೈತರ ಕುಟುಂಬದವರಿಗೆ 45 ಲಕ್ಷ ರೂ ಪರಿಹಾರ ಹಾಗೂ ವಿದ್ಯಾಭ್ಯಾಸದ ಅನುಗುಣವಾಗಿ ಉದ್ಯೋಗ ನೀಡಲಾಗುತ್ತದೆ. ಗಾಯಗೊಂಡವರಿಗೆ ತಲಾ 10 ಲಕ್ಷ ರೂ. ಗಳ ಪರಿಹಾರ ಹಾಗೂ ಕುಟುಂಬ ಸದಸ್ಯರ ವಿದ್ಯಾರ್ಹತೆಗೆ ಅನುಗುಣವಾಗಿ ಉದ್ಯೋಗ ನೀಡಲಾಗುವುದು ಎಂದು ವರದಿ ತಿಳಿಸಿದೆ.

ಉತ್ತರಪ್ರದೇಶದ ಲಖೀಂಪುರ ಖೇರಿಯಲ್ಲಿ ಭಾನುವಾರ ಪ್ರತಿಭಟನಕಾರ ರೈತರು ಮತ್ತು ಬಿಜೆಪಿ ಕಾರ್ಯಕರ್ತರ ನಡುವಿನ ಘರ್ಷಣೆಯಲ್ಲಿ ಕನಿಷ್ಠ 8 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದರು.

Sneha Gowda

Recent Posts

ಆನ್‌ಲೈನ್ ಟ್ರೇಡಿಂಗ್: 17.35 ಲಕ್ಷ ರೂ. ವಂಚನೆ

ಆನ್‌ಲೈನ್ ಪಾರ್ಟ್‌ಟೈಮ್ ಕೆಲಸ ಹಾಗೂ ಆನ್‌ಲೈನ್ ಟ್ರೇಡಿಂಗ್ ಮೇಸೆಜ್ ನ‌ ಬಲೆಗೆ ಬಿದ್ದ ವ್ಯಕ್ತಿಯೊಬ್ಬರು ಬರೋಬ್ಬರಿ 17.35 ಲಕ್ಷ ರೂ.…

5 mins ago

ಬಿಸಿಲಿನ ತಾಪ, ಮೇವಿನ ಕೊರತೆಯಿಂದ ಸಾವಿಗೀಡಾಗುತ್ತಿವೆ ಸಾಕುಪ್ರಾಣಿಗಳು

ಹೆಚ್ಚುತ್ತಿರುವ ಬಿಸಿಲಿನ ತಾಪ ಹಾಗೂ ಸಮರ್ಪಕ ಮೇವು ದೊರಕದೆ ಕಾಡಂಚಿನ ಗ್ರಾಮಗಳ ಜಾನುವಾರು, ಸಾಕುಪ್ರಾಣಿಗಳು ಸಾವಿಗೀಡಾಗುತ್ತಿವೆ.

25 mins ago

ದೊಡ್ಡಬಳ್ಳಾಪುರ: ಹಳೇ ದ್ವೇಷಕ್ಕೆ ಯುವಕನ ಕತ್ತು ಕುಯ್ದು ಕೊಲೆ

ಹಳೇ ದ್ವೇಷಕ್ಕೆ ನಡುರಸ್ತೆಯಲ್ಲಿ ಯುವಕನ ಕತ್ತು ಕುಯ್ದು ಕೊಲೆ ಮಾಡಿದ ಘಟನೆ ದೊಡ್ಡಬಳ್ಳಾಪುರ ಹೊರವಲಯ ನವೋದಯ ಶಾಲೆಯ ಮುಂಭಾಗದಲ್ಲಿ ನಡೆದಿದೆ.

39 mins ago

ಕೇಂದ್ರ ಸೂಚನೆ ನೀಡಿದ ಕೂಡಲೇ ರಾಜ್ಯದಲ್ಲಿ ಸಿಎಎ ಅನುಷ್ಠಾನ: ಮೋಹನ್‌ ಯಾದವ್‌

ದೇಶಾದ್ಯಂತ ಚುನಾವಣೆಗ ಅಂತ್ಯಗೊಳುವುದಕ್ಕೂ ಮುನ್ನ ವಿವಿಧ ರಾಜ್ಯಗಳಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಪ್ರಕ್ರಿಯೆ ಆರಂಭಿಸಬೇಕೆಂದು ಕೇಂದ್ರ ನಿರ್ಧರಿಸಿದೆ.

56 mins ago

ತಾಯಿ, ಹೆಂಡತಿ ಮತ್ತು ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಿದ ಮಾನಸಿಕ ಅಸ್ವಸ್ಥ

ವ್ಯಕ್ತಿಯೊಬ್ಬ ತನ್ನ ತಾಯಿ, ಹೆಂಡತಿ ಮತ್ತು ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಉತ್ತರ ಪ್ರದೇಶದ  ಸೀತಾಪುರದಲ್ಲಿ ನಡೆದಿದೆ.

1 hour ago

ಕಲಬುರಗಿ: ಮದುವೆಗೆ ನಿರಾಕರಿಸಿದ್ದಕ್ಕೆ ಯುವತಿ ಆತ್ಮಹತ್ಯೆ

ಮದುವೆಗೆ ನಿರಾಕರಿಸಿದ್ದಕ್ಕೆ  ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ನಗರ ಹೊರವಲಯದ ಯಲ್ಲಾಲಿಂಗ್ ಕಾಲೋನಿಯಲ್ಲಿ ನಡೆದಿದೆ.

2 hours ago