ಪ್ರೀತಿಸುತ್ತಿದ್ದ ಯುವಕನ ಜೊತೆ ಮದುವೆಗೆ ಒತ್ತಾಯಿಸಿದ ಸಹೋದರಿಯನ್ನೇ ಕೊಂದ ಅಣ್ಣ!

ಪ್ರೀತಿಸುತ್ತಿದ್ದ ಯುವಕನ ಮನೆಗೆ ಬಂದ ಯುವತಿ ತನ್ನೊಂದಿಗೆ ಮದುವೆ ಮಾಡಿಕೊಳ್ಳುವಂತೆ ಆತನ ಮೇಲೆ ಒತ್ತಡ ಹೇರಿದ್ದು, ಈ ವಿಷಯ ತಿಳಿದ ಹುಡುಗಿಯ ಸಹೋದರ ಆಕೆಯನ್ನು ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಮೊರಾದಾಬಾದ್​ನಲ್ಲಿ ನಡೆದಿದೆ. ಮೊರಾದಾಬಾದ್ ಜಿಲ್ಲೆಯ ಭೋಜ್​ಪುರದ ರಾಣಿನಾಗಲ್ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ನೀಲಂ ಎಂಬಾಕೆ ಅದೇ ಗ್ರಾಮದ ಯುವಕ ಮೋಹಿತ್​ ಯಾದವ್​​ ಎಂಬಾತನೊಂದಿಗೆ ಪ್ರೇಮ ಸಂಬಂಧ ಹೊಂದಿದ್ದಳು. ಇದರ ಬಗ್ಗೆ ತಂದೆಗೆ ತಿಳಿಯುತ್ತಿದ್ದಂತೆ ಬೇರೆ ಕಡೆ ಮದುವೆ ಮಾಡಿಸಲು ಮುಂದಾಗಿದ್ದರು. ಈ ವಿಷಯ ಯುವತಿಗೆ ತಿಳಿದು ಪ್ರಿಯಕರನ ಮನೆಗೆ ಹೋಗಿ ತನ್ನೊಂದಿಗೆ ಮದುವೆ ಮಾಡಿಕೊಳ್ಳುವಂತೆ ಒತ್ತಾಯಿಸಿದ್ದಾಳೆ.

ಆತ ಬೇರೆ ಜಾತಿಗೆ ಸೇರಿದವನು ಎಂದು ಮನೆಯವರು ಹೇಳಿದರೂ ಯುವತಿ ಮಾತ್ರ ಆತನನ್ನೇ ಮದುವೆಯಾಗಲು ನಿರ್ಧರಿಸಿದಳು. ಇದರಿಂದ ಕೋಪಗೊಂಡಿರುವ ಆಕೆಯ ಸಹೋದರ ಕೊಡಲಿಯಿಂದ ಹಲ್ಲೆ ನಡೆಸಿದ್ದಾನೆ. ಪರಿಣಾಮ ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.

ಘಟನೆಗೆ ಸಂಬಂಧಿಸಿ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಿದ್ದು, ಪ್ರಿಯಕರನ ತಂದೆ, ಯುವತಿಯ ತಂದೆ ಹಾಗೂ ಸಹೋದರನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ್ದಾರೆ.

Sneha Gowda

Recent Posts

ವಕೀಲ ಬಾಬಶೆಟ್ಟಿ ಹತ್ಯೆಗೆ 5 ಲಕ್ಷ ಸುಪಾರಿ: ಪ್ರಮುಖ ಆರೋಪಿ ಬಂಧನ

ಐದು ಲಕ್ಷ ರೂಪಾಯಿಗೆ ಸುಪಾರಿ ಕೊಟ್ಟು, ವಕೀಲನ ಹತ್ಯೆಗೆ ಸಂಚು ರೂಪಿಸಿದ್ದ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಬೀದರ್‌ ಜಿಲ್ಲಾ ಪೊಲೀಸರು…

11 mins ago

ದೇಶಾದ್ಯಂತ 24 ಗಂಟೆ ವಿದ್ಯುತ್‌ ಪೂರೈಕೆ ಸೇರಿ 10 ಗ್ಯಾರಂಟಿ ಘೋಷಿಸಿದ ಕೇಜ್ರಿವಾಲ್

2024ರ ಲೋಕಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಗೆದ್ದರೆ ಹತ್ತು ಗ್ಯಾರಂಟಿಗಳನ್ನು ಜಾರಿಗೊಳಿಸಲಾಗುವುದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌…

17 mins ago

ಬೀದರ್‌: ಬಿಸಿ ದೋಸೆಯಂತೆ ಮಾರಾಟವಾಗುತ್ತಿದೆ ಎಸಿ, ಕೂಲರ್‌

ಬಿಸಿಲು ಹಾಗೂ ಅದರ ಝಳದಿಂದ ಜನ ಒಂದೆಡೆ ತೀವ್ರ ಅನಾರೋಗ್ಯದ ಸಮಸ್ಯೆ ಎದುರಿಸುತ್ತಿದ್ದರೆ, ಏರ್‌ ಕಂಡಿಷನರ್‌ (ಎಸಿ), ಏರ್‌ ಕೂಲರ್‌ಗಳ…

32 mins ago

ಪರಿಷತ್ ಚುನಾವಣೆಯಲ್ಲೂ ಜೆಡಿಎಸ್ ಜತೆ ಮೈತ್ರಿ ಮುಂದುವರಿಕೆ: ಬಿ.ಎಸ್.ಯಡಿಯೂರಪ್ಪ

ಮುಂಬರುವ ವಿಧಾನಪರಿಷತ್ ಚುನಾವಣೆಯಲ್ಲೂ ಜೆಡಿಎಸ್-ಬಿಜೆಪಿಮೈತ್ರಿ ಮುಂದುವರಿಯಲಿದ್ದು, ಮೈತ್ರಿಗೆ ಯಾವುದೇ ಭಂಗ ಆಗುವುದಿಲ್ಲ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ…

48 mins ago

ವೇಣುಗೋಪಾಲಸ್ವಾಮಿ ದೇಗುಲ ಬಳಿ ಅಡ್ಡಾಡುತ್ತಿರುವ ಒಂಟಿ ಗಜ

ಪ್ರತಿಷ್ಠಿತ ಇತಿಹಾಸ ಪ್ರಸಿದ್ಧ ಶ್ರೀ ಹಿಮವದ್ ವೇಣುಗೋಪಾಲಸ್ವಾಮಿ ಬೆಟ್ಟದ ದೇಗುಲ ಆವರಣದ ಬಳಿ ಎಂದಿನಂತೆ ಆಗಮಿಸಿದ ಒಂಟಿ ಆನೆ ವಾಪಾಸ್…

1 hour ago

ಕಾಡಾನೆಯಿಂದ ಬೆಳೆ ನಾಶ: ಮನನೊಂದು ರೈತ ಆತ್ಮಹತ್ಯೆ

ಸಾಲ ಮಾಡಿ ಬೆಳೆದ ಬೆಳೆಯನ್ನು ಕಾಡಾನೆ ಹಿಂಡುಗಳು ನಾಶ ಮಾಡಿದ್ದರಿಂದ ಮನನೊಂದು ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೇಲೂರು ತಾಲೂಕಿನ ಅರೇಹಳ್ಳಿ ಹೋಳಿಯ ಚಿಕ್ಕಸಾಲಾವರದ ಬಾವಿಕಟ್ಟೆ ಗ್ರಾಮದಲ್ಲಿ ನಡೆದಿದೆ.

1 hour ago