ಬಾಲಕಿಯೊಂದಿಗೆ ಓಡಿ ಹೋದ ಯುವಕ ಲಾಕಪ್​​ನಲ್ಲಿ ಶವವಾಗಿ ಪತ್ತೆ

ಯುವಕನೊಬ್ಬ ಲಾಕಪ್​​ನಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ ಘಟನೆಯು ಉತ್ತರ ಪ್ರದೇಶ ಕಾಸ್​ಗಂಜ್​​ನ ಸದಾರ್​ ಕೋತ್ವಾಲಿ ಎಂಬಲ್ಲಿ ಸಂಭವಿಸಿದೆ. ಬಾಲಕಿಯೊಂದಿಗೆ ಓಡಿ ಹೋದ ಆರೋಪದ ಅಡಿಯಲ್ಲಿ ಈತನನ್ನು ವಿಚಾರಣೆಗೆಂದು ವಶಕ್ಕೆ ಪಡೆದಿದ್ದರು. ಇದೀಗ ಆತ ಲಾಕಪ್​ನಲ್ಲೇ ಸಾವನ್ನಪ್ಪಿದ್ದು ಪೊಲೀಸರು ಇದನ್ನು ಆತ್ಮಹತ್ಯೆ ಎಂದಿದ್ದಾರೆ.  ಆದರೆ ಯುವಕನ ಕುಟುಂಬಸ್ಥರು ಇದನ್ನು ಕೊಲೆ ಎಂದು ಆರೋಪಿಸಿದ್ದಾರೆ.

ಮೃತ ಯುವಕನನ್ನು ಚಾಂದ್​ ಮಿಯಾನ್​ ಎಂದು ಗುರುತಿಸಲಾಗಿದೆ. ನಾಗ್ಲಾ ಸಯ್ಯದ್​ ಅಹ್ರೋಲಿ ನಿವಾಸಿಯಾದ ಅಲ್ತಾಫ್​ ಎಂಬವರ ಪುತ್ರ ಚಾಂದ್​​ ಲಾಕಪ್​​ನಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಈ ವಿಚಾರವಾಗಿ ಮಾತನಾಡಿದ ಅಲ್ತಾಫ್​, ಸೋಮವಾರ ಸಂಜೆ ನಾನು ನನ್ನ ಮಗನನ್ನು ಪೊಲೀಸರ ವಶಕ್ಕೆ ಒಪ್ಪಿಸಿದ್ದೆ. ಇದಾಗಿ 24 ಗಂಟೆ ಕಳೆಯುವುದರ ಒಳಗೆ ಆತ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ ಅಂತಾ ಹೇಳಿದ್ರು.

ಇನ್ನು ಈ ವಿಚಾರವಾಗಿ ಮಾತನಾಡಿದ ಪೊಲೀಸರು, ಚಾಂದ್​ ನಮ್ಮ ಬಳಿ ತನಗೆ ಶೌಚಾಲಯ ಹೋಗಬೇಕಿದೆ ಎಂದು ಹೇಳಿದ್ದ. ಶೌಚಾಲಯದ ಒಳಕ್ಕೆ ಹೋದವನು ಕೆಲ ಸಮಯ ಕಳೆದರೂ ಹೊರ ಬಾರದ್ದನ್ನು ಕಂಡು ಪೊಲೀಸರೇ ಒಳಗೆ ಹೋಗಿ ನೋಡಿದ್ದಾರೆ. ಈ ವೇಳೆ ಆತ ಶೌಚಾಲಯದ ಪೈಪ್​ಗೆ ನೇಣು ಹಾಕಿಕೊಂಡಿದ್ದ. ಚಾಂದ್​ ತಾನು ಧರಿಸಿದ್ದ ಜಾಕೆಟ್​ನ ಸಹಾಯದಿಂದಲೇ ನೇಣು ಬಿಗಿದುಕೊಂಡಿದ್ದಾನೆ. ನೆಲದಿಂದ 2 ಅಡಿ ಎತ್ತರವಿರುವ ಪೈಪ್​​ಗೆ ಆತ ಕೊರಳೊಡ್ಡಿದ್ದಾನೆ ಎಂದು ಹೇಳಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆಯೇ ಎಸ್ಪಿ ರೋಷನ್​ ಪ್ರಮೋದ್​ ಬೋಟ್ರೆ ಐವರು ಪೊಲೀಸರನ್ನು ಸೇವೆಯಿಂದ ಅಮಾನತುಗೊಳಿಸಿದ್ದಾರೆ. ಯುವಕನನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯ್ತಾದರೂ ಆತ ಅಷ್ಟರಲ್ಲಾಗಲೇ ಸಾವನ್ನಪ್ಪಿದ್ದ. ಇದರಲ್ಲಿ ಪೊಲೀಸರ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ಹೀಗಾಗಿ ಇನ್​ಸ್ಪೆಕ್ಟರ್​ ಸೇರಿದಂತೆ ಐವರನ್ನು ಅಮಾನತು ಮಾಡಿರೋದಾಗಿ ಹೇಳಿದ್ರು.

Gayathri SG

Recent Posts

ಇಂದು 49 ಕ್ಷೇತ್ರಗಳಲ್ಲಿ 5ನೇ ಹಂತದ ಮತದಾನ

ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನವು ಸೋಮವಾರ (ಮೇ 20) ನಡೆಯಲಿದೆ. ಆರು ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳ…

14 mins ago

ಇಂದಿನ ರಾಶಿ ಭವಿಷ್ಯ : ಈ ರಾಶಿಯವರಿಗೆ ಹೊಸ ಉದ್ಯೋಗ ಆಫರ್ ಬರಲಿದೆ

ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಮೇ​​​​​ 20) ರಾಶಿ ಭವಿಷ್ಯದಲ್ಲಿ ಯಾರ ರಾಶಿ…

25 mins ago

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

8 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

9 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

9 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

9 hours ago