ಭೂವಿವಾದ ಹಿನ್ನೆಲೆ ಒಂದೇ ಕುಟುಂಬದ ನಾಲ್ವರ ಹತ್ಯೆ

ಲಖನೌ: ಭೂವಿವಾದ ಹಿನ್ನೆಲೆಯಲ್ಲಿ ಬಾಲಕಿ ಸೇರಿದಂತೆ ಪರಿಶಿಷ್ಟ ಜಾತಿಯ ಒಂದೇ ಕುಟುಂಬದ ನಾಲ್ವರನ್ನು ಹತ್ಯೆ ಮಾಡಿರುವ ಘಟನೆ ಉತ್ತರಪ್ರದೇಶದ ಪ್ರಯಾಗ್‌ರಾಜ್‌ ಜಿಲ್ಲೆಯಲ್ಲಿ ನಡೆದಿದೆ. ಹತ್ಯೆಗೆ ಮುನ್ನ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ.

50 ವರ್ಷದ ವ್ಯಕ್ತಿ, ಆತನ ಪತ್ನಿ, ಪುತ್ರ ಮತ್ತು ಪುತ್ರಿಯನ್ನು ಹತ್ಯೆ ಮಾಡಲಾಗಿದೆ. ಜಿಲ್ಲೆಯ ಫಂಫಮೌನಲ್ಲಿ ನಾಲ್ವರ ಶವಗಳೂ ಪತ್ತೆಯಾಗಿವೆ. ಒಂದು ಅಥವಾ ಎರಡು ದಿನದ ಹಿಂದೆ ಕೃತ್ಯ ನಡೆದಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ.

ಕೃತ್ಯದ ಹಿಂದೆಯೇ ಕರ್ತವ್ಯಲೋಪ ಆರೋಪದಡಿ ಸ್ಥಳೀಯ ಠಾಣೆಯ ಇನ್‌ಸ್ಪೆಕ್ಟರ್‌ ಸೇರಿದಂತೆ ಇಬ್ಬರನ್ನು ಅಮಾನತುಮಾಡಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮೃತರ ಸಂಬಂಧಿಕರೊಬ್ಬರ ಪ್ರಕಾರ, ಕೊಲೆಯಾದ ಕುಟುಂಬ ಮತ್ತು ಅದೇ ಗ್ರಾಮದ ಸವರ್ಣೀಯ ಕುಟುಂಬವೊಂದರ ನಡುವೆ ಭೂವಿವಾದ ಇತ್ತು. ಈ ಬಗ್ಗೆ ದೂರು ಸಲ್ಲಿಸಿದ್ದರೂ ಪೊಲೀಸರು ಯಾವುದೇ ಕ್ರಮಕೈಗೊಂಡಿರಲಿಲ್ಲ.

ಘಟನೆಗೆ ಆಕ್ರೋಶ ವ್ಯಕ್ತಪಡಿಸಿದ ಜನರು ಆರೋಪಿಗಳ ಬಂಧನ ಮತ್ತು ಮೃತರ ಕುಟುಂಬಗಳಿಗೆ ಪರಿಹಾರಕ್ಕೆ ಒತ್ತಾಯಿಸಿ ಕೆಲಹೊತ್ತು ರಸ್ತೆ ತಡೆ ನಡೆಸಿದರು. ಅಧಿಕಾರಿಗಳ ಭರವಸೆ ನಂತರ ಪ್ರತಿಭಟನೆ ಹಿಂಪಡೆದು ಶವಗಳ ಅಂತ್ಯಕ್ರಿಯೆ ನಡೆಸಿದರು.

ಈ ಬಗ್ಗೆ ಪ್ರತಿಕ್ರಿಯಿಸಿರುವ ಉತ್ತರ ಪ್ರದೇಶ ಕಾಂಗ್ರೆಸ್‌ ಘಟಕದ ಅಧ್ಯಕ್ಷ ಅಜಯ್ ಕುಮಾರ್ ಲಲ್ಲು ಅವರು, ‘ಪರಿಶಿಷ್ಟರು, ಹಿಂದುಳಿದವರಿಗೆ ರಕ್ಷಣೆಯನ್ನು ಒದಗಿಸಲು ಈ ಸರ್ಕಾರ ವಿಫಲವಾಗಿದೆ’ ಎಂದು ಹೇಳಿದ್ದಾರೆ.

ಕೊಲೆಗೀಡಾದ ಪರಿಶಿಷ್ಟರ ಕುಟುಂಬ ಸದಸ್ಯರನ್ನು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಭೇಟಿಯಾಗುವ ಸಂಭವವಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

Gayathri SG

Recent Posts

ಯಾರನ್ನು ಬಂಧಿಸಬೇಕೋ ಅವರನೆಲ್ಲಾ ಬಂಧಿಸಿ ಜೈಲಿಗೆ ತಳ್ಳಿ ಎಂದು ಮೋದಿಗೆ ಚಾಲೆಂಜ್‌ ಹಾಕಿದ ಕೇಜ್ರಿವಾಲ್

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಬಂಧನವಾಗಿ ಜಾಮೀನಿನ ಮೇಲೆ ಹೊರ ಬಂದಿರುವ ಆಮ್ ಆದ್ಮಿ ಪಕ್ಷದ ನಾಯಕ, ದೆಹಲಿ ಮುಖ್ಯಮಂತ್ರಿ…

4 mins ago

ಜುಲೈ 1ರಿಂದ ಮೂರು ಹೊಸ ಕ್ರಿಮಿನಲ್ ಕಾನೂನು ಜಾರಿ

ಮೂರು ಹೊಸ ಕ್ರಿಮಿನಲ್ ಕಾನೂನುಗಳು ಸರ್ಕಾರದ ಅಧಿಸೂಚನೆಯ ಪ್ರಕಾರ ಜುಲೈ 1ರಿಂದ ಜಾರಿಗೆ ಬರಲಿವೆ. ಇದರಲ್ಲಿ ಭಾರತೀಯ ನ್ಯಾಯ ಸಂಹಿತಾ,…

25 mins ago

ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣ: ಆರೋಪಿ ಬಿಭವ್‌ ಕುಮಾರ್‌ 5 ದಿನ ಕಸ್ಟಡಿಗೆ

ಆಮ್‌ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರೆಸ್ಟ್‌ ಆಗಿರುವ ದಿಲ್ಲಿ ಮುಖ್ಯಮಂತ್ರಿ…

49 mins ago

ಆರ್​ಸಿಬಿ ಮುಂದಿನ ಪಂದ್ಯವನ್ನು ಯಾವ ತಂಡದ ಜೊತೆ ಆಡಲಿದೆ..?

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬಲಿಷ್ಠ ಚೆನ್ನೈ ಸೂಪರ್ ಕಿಂಗ್ಸ್​ ತಂಡವನ್ನು ಸೋಲಿಸಿ ರಾಯಲ್ಲಾಗಿಯೇ ಪ್ಲೇಆಫ್​ಗೆ ಪ್ರವೇಶಿಸಿದೆ. ಇನ್ನು ಆರ್​ಸಿಬಿ…

1 hour ago

ಮೆಥೋಡಿಸ್ಟ್‌ ಚರ್ಚ್‌ನ 101ನೇ ವಾರ್ಷಿಕ ಜಾತ್ರೆ ಉತ್ಸವ

ನಗರದ ಮಂಗಲಪೇಟ್‌ ಸಮೀಪದ ಮೆಥೋಡಿಸ್ಟ್‌ ಚರ್ಚ್‌ನ 101ನೇ ವಾರ್ಷಿಕ ಜಾತ್ರೆ ಉತ್ಸವ ಸಂಭ್ರಮದಿಂದ ನಡೆಯಿತು.

1 hour ago

ಆಧಾರ್‌ ದುರುಪಯೋಗ: ಕರ್ನಾಟಕದಿಂದ 2.95 ಲಕ್ಷ ದೂರು ದಾಖಲು

ಜನರು ದಾಖಲೆ ದುರುಪಯೋಗ ಪಡಿಸಿಕೊಂಡಿರುವ ಸೈಬರ್ ವಂಚಕರು, ಒಂದೇ ಸಂಖ್ಯೆ ಸಿಮ್‌ಗಳನ್ನು ಖರೀದಿಸಿರುವ ಸಂಬಂಧ ಟೆಲಿಕಾಂ ಅನಾಲಿಟಿಕಲ್‌ ಫಾರ್ ಫ್ರಾಡ್‌…

2 hours ago