News Karnataka Kannada
Thursday, May 09 2024
ಉತ್ತರ ಪ್ರದೇಶ

ಮತಾಂತರವಾಗಲು ವಿರೋಧಿಸಿದ ಪತ್ನಿಯನ್ನು ಕೊಲೆಗೈದ ಪತಿ

Suicide
Photo Credit :

 ಉತ್ತರಪ್ರದೇಶ:: ಮತಾಂತರಕ್ಕೆ ಒಪ್ಪದ ಪತ್ನಿಯನ್ನು ಪತಿಯೇ ಹತ್ಯೆಗೈದಿರುವ ಘಟನೆ ಮಿರ್​​ಗಂಜ್​ ಪೊಲೀಸ್​ ಠಾಣಾ ವ್ಯಾಪ್ತಿಯ ಚುರೈ ದಲ್ಪರ್​ಪುರ ಗ್ರಾಮದಲ್ಲಿ ನಡೆದಿದೆ.

ನಿಶಾ (28) ಮೃತ ಮಹಿಳೆ. ಅವರು ಮಂಗಳವಾರ ರಾತ್ರಿ ತಮ್ಮ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಮರುದಿನ ಅವರ ಮರಣೋತ್ತರ ಪರೀಕ್ಷೆಯ ವರದಿ ಬಂದಾಗ, ಯಾರೋ ಆಕೆಯನ್ನು ಹಗ್ಗದಿಂದ ಕತ್ತು ಹಿಸುಕಿ ಕೊಲೆ ಮಾಡಿ ಬಳಿಕ ನೇತು ಹಾಕಿದ್ದಾರೆ ಎಂಬುದು ತಿಳಿದುಬಂದಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ (ಗ್ರಾಮೀಣ) ರಾಜ್ ಕುಮಾರ್ ಅಗರ್ವಾಲ್ ಹೇಳಿದ್ದಾರೆ.

ನಿಶಾ ಅವರ ತಾಯಿ ಕೌಶಲ್ ದೇವಿ ಗುರುವಾರ ತಮ್ಮ ಅಳಿಯ ಇಕ್ಬಾಲ್ ಮತ್ತು ಆತನ ಸಹಚರರ ವಿರುದ್ಧ ದೂರು ದಾಖಲಿಸಿದ್ದರು. ಅಲ್ಲದೇ ಇಕ್ಬಾಲ್ ನನ್ನ ಮಗಳನ್ನು ಇಸ್ಲಾಂಗೆ ಮತಾಂತರಿಸಲು ಪದೇ ಪದೇ ಪ್ರಯತ್ನಿಸುತ್ತಿದ್ದ, ಇದಕ್ಕೆ ಆಕೆ ವಿರೋಧಿಸಿದ ಕಾರಣಕ್ಕೆ ಸ್ನೇಹಿತರ ಸಹಾಯದಿಂದ ಇಕ್ಬಾಲ್ ಕೊಂದಿದ್ದಾನೆ ಎಂದು ತಾಯಿ ಆರೋಪಿಸಿದ್ದಾರೆ.

ಮೃತಳ ತಾಯಿಯ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಗೆ ಕ್ರಮಕೈಗೊಳ್ಳಲಾಗಿದೆ ಎಂದು ಎಸ್ ಪಿ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು