ಶಹಜಹಾನ್ಪುರ(ಯುಪಿ): ತನ್ನ ಧರ್ಮವನ್ನು ಬದಲಿಸಿ ಮದುವೆಯಾಗುವಂತೆ ಒತ್ತಡ ಹೇರುವ ಉದ್ದೇಶದಿಂದ 28 ವರ್ಷದ ಸರ್ಕಾರಿ ಶಾಲೆಯ ಶಿಕ್ಷಕಿಯನ್ನ ರೇಪ್ ಮಾಡಿ, ಆ ಕುಕೃತ್ಯದ ವೀಡಿಯೊವನ್ನು ರೆಕಾರ್ಡ್ ಮಾಡಲಾಗಿತ್ತು ಎಂದು ಶುಕ್ರವಾರ ಪೊಲೀಸರು ತಿಳಿಸಿದ್ದಾರೆ.
ಆರೋಪಿ ಅಮೀರ್ ಸೇರಿದಂತೆ ಐವರ ವಿರುದ್ಧ ಉತ್ತರ ಪ್ರದೇಶದ ಕಾನೂನುಬಾಹಿರ ಧರ್ಮ ಮತಾಂತರ ನಿಷೇಧ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಗುರುವಾರ ದಾಖಲಾದ ಎಫ್ಐಆರ್ನಲ್ಲಿ ಆರೋಪಿಯ ತಾಯಿ, ಸಹೋದರಿ, ಸಹೋದರ ಮತ್ತು ಇನ್ನೊಬ್ಬ ಸಂಬಂಧಿಕರ ಹೆಸರೂ ಇದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಮೇ 4 ರಂದು ಮಹಿಳೆ ತನ್ನ ಮನೆಗೆ ಹೋಗುತ್ತಿದ್ದಾಗ ಅದೇ ಗ್ರಾಮದ ಆರೋಪಿ ಆಕೆಯನ್ನು ಡ್ರಾಪ್ ಮಾಡಲು ಮುಂದಾದ. ಈ ವೇಳೆ ಆಕೆಯ ಮೇಲೆ ಯಾವುದೋ ವಸ್ತುವನ್ನ ಸಿಂಪಡಿಸಿ ಪ್ರಜ್ಞಾಹೀನಳನ್ನಾಗಿ ಮಾಡಿದ. ನಂತರ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಪೊಲೀಸರು ಎಫ್ಐಆರ್ನಲ್ಲಿ ಉಲ್ಲೇಖಿಸಿದ್ದಾರೆ.
ಪೊಲೀಸ್ ಅಧೀಕ್ಷಕ (ನಗರ) ಸಂಜಯ್ ಕುಮಾರ್ ಮಾತನಾಡಿ ಆರೋಪಿ ಅಮೀರ್ ಅವರ ಕುಟುಂಬ ಸದಸ್ಯರು ಮತಾಂತರಗೊಂಡು ಮದುವೆಯಾಗುವಂತೆ ಒತ್ತಡ ಹೇರುತ್ತಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ. ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರನ್ನು ಹಿಡಿಯಲು ಪ್ರಯತ್ನಿಸಲಾಗುತ್ತಿದೆ ಎಂದು ಎಸ್ಪಿ ತಿಳಿಸಿದ್ದಾರೆ. ಸಂತ್ರಸ್ತೆಯನ್ನ ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ ಎಂದರು.
ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಬಾಲಕ ಸಿಲುಕಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಸನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಅವಳಿ ನಗರದಲ್ಲಿ ಹೆಚ್ಚುತ್ತಿರುವ ಕ್ರೈಂ ರೇಟ್ ಕಡಿವಾಣ ಹಾಕುವಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ರೇಣುಕಾಸುಕುಮಾರ ಅವರನ್ನು ಬದಲಾವಣೆ ಮಾಡಬೇಕು ಅಂತ…
ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು…
ಮುಂಬಯಿಯ ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (75) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ನಿಧನರಾದರು.
ಬಸ್ಗೆ ಬೆಂಕಿ ಹತ್ತಿಕೊಂಡು 10 ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಹರಿಯಾಣದ ಕುಂಡಲಿ-ಮನೇಸರ್-ಪಲ್ವಾಲ್ ಎಕ್ಸ್ಪ್ರೆಸ್ ವೇಯಲ್ಲಿ…
ನಮ್ಮ ಮೆಟ್ರೋದಲ್ಲಿ ಸುರಕ್ಷತೆ, ಭದ್ರತೆ ದೃಷ್ಟಿಯಿಂದ ಹಲವಾರು ನೀತಿ ನಿಯಮಗಳನ್ನು ಬಿಎಂಆರ್ಸಿಎಲ್ ಜಾರಿ ಮಾಡಿದೆ. ಬರೀ ನಿಯಮ ಮಾಡಿದ್ದು ಮಾತ್ರವಲ್ಲದೇ…