ಮತ್ತೊಂದು ಮಸೀದಿಯನ್ನು ಕಳೆದುಕೊಳ್ಳಲು ನಾವು ಬಯಸುವುದಿಲ್ಲ: ಅಸಾದುದ್ದೀನ್ ಓವೈಸಿ

ವಾರಾಣಸಿ: ʼಅಯೋಧ್ಯೆಯಲ್ಲಿನ ಬಾಬ್ರಿ ಮಸೀದಿಯನ್ನು ಕಳೆದುಕೊಂಡಿದ್ದೇವೆ. ಈಗ ಮತ್ತೊಂದು ಮಸೀದಿಯನ್ನು ಕಳೆದುಕೊಳ್ಳಲು ನಾವು ಬಯಸುವುದಿಲ್ಲʼ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ವಾರಾಣಸಿ ಕೋರ್ಟ್‌ ಜ್ಞಾನವಾಪಿ ಮಸೀದಿ ಮರು ಸಮೀಕ್ಷೆ ನಡೆಸುವಂತೆ ನೀಡಿರುವ ತೀರ್ಪಿಗೆ ಪ್ರತಿಕ್ರಿಯಿಸಿದ್ದಾರೆ.

ವಾರಾಣಸಿ ಕೋರ್ಟ್ ತೀರ್ಪನ್ನು ಪೂಜಾ ಸ್ಥಳಗಳ ಕಾಯಿದೆ 1991 ರ ಘೋರ ಉಲ್ಲಂಘನೆ ಎಂದು ಕರೆದ ಓವೈಸಿ, ಬಾಬರಿ ಮಸೀದಿ ವಿವಾದದ ವಿಚಾರವಾಗಿ ಸುಪ್ರೀಂ ನೀಡಿದ್ದ ತೀರ್ಪಿನ ಸ್ಪಷ್ಟ ಉಲ್ಲಂಘನೆಯಿದು ಎಂದು ಹೇಳಿದ್ದಾರೆ.

ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಮತ್ತು ಮಸೀದಿ ಸಮಿತಿಯು ಸುಪ್ರೀಂ ಕೋರ್ಟ್‌ಗೆ ಹೋಗುತ್ತದೆ ಎಂದು ನಾನು ಭಾವಿಸುತ್ತೇನೆ ಎಂದರು.

1991 ರ ಆರಾಧನಾ ಸ್ಥಳಗಳ ಕಾಯಿದೆಯ ಪ್ರಕಾರ, ಯಾವುದೇ ಧಾರ್ಮಿಕ ಪಂಗಡದ ಪೂಜಾ ಸ್ಥಳವನ್ನು ಅಥವಾ ಬೇರೆ ಯಾವುದೇ ಧಾರ್ಮಿಕ ಪಂಗಡದ ಆರಾಧನೆಯ ಸ್ಥಳವಾಗಿ ಪರಿವರ್ತಿಸಬಾರದು ಎಂದಿದೆ. ಆಗಸ್ಟ್ 15, 1947 ರಂದು ಇದ್ದ ಧಾರ್ಮಿಕ ಸ್ಥಳಗಳ ಸ್ವರೂಪವನ್ನು ಬದಲಾಯಿಸಲು ಪ್ರಯತ್ನಿಸುವುದು ಅಪರಾಧವೆಂದು ಕಾಯಿದೆ ಸ್ಪಷ್ಟವಾಗಿ ಹೇಳುತ್ತದೆ. ಧಾರ್ಮಿಕ ಸ್ಥಳಗಳ ಸ್ವರೂಪವನ್ನು ಬದಲಾಯಿಸಲು ಪ್ರಯತ್ನಿಸುವವರ ವಿರುದ್ಧ ಯೋಗಿ ಸರ್ಕಾರ ತಕ್ಷಣವೇ ಎಫ್‌ಐಆರ್ ದಾಖಲಿಸಬೇಕು ಎಂದು ಆಗ್ರಹಿಸಿದ್ದಾರೆ.

ವಾರಾಣಸಿ ನ್ಯಾಯಾಲಯವು ಈ ವಿಷಯದ ವಿಚಾರಣೆಯ ವೇಳೆ ಕಾಶಿ ವಿಶ್ವನಾಥ ದೇವಸ್ಥಾನದ ಪಕ್ಕದಲ್ಲಿರುವ ಗ್ಯಾನವಾಪಿ ಮಸೀದಿಯನ್ನು ಮರು ಸಮೀಕ್ಷೆ ನಡೆಸಿ ಮೇ 17 ರೊಳಗೆ ವರದಿಯನ್ನು ಸಲ್ಲಿಸಬೇಕು ಎಂದು ಹೇಳಿದ ವಿಚಾರವಾಗಿ ಓವೈಸಿಯಿಂದ ಈ ಪ್ರತಿಕ್ರಿಯೆ ಬಂದಿದೆ.

Sneha Gowda

Recent Posts

ಹುಟ್ಟೂರಿಗೆ ಆಗಮಿಸಿದ ಮಾಜಿ ಶಾಸಕ ಕೆ.ವಸಂತ ಬಂಗೇರ ಪಾರ್ಥಿವ ಶರೀರ

ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ ಬಂಗೇರ (79)…

23 mins ago

ಮಲಯಾಳಂ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

ಮಲಯಾಳಂ ಮತ್ತು ಹಿಂದಿ ಚಿತ್ರರಂಗದಲ್ಲಿ ಖ್ಯಾತಿ ಪಡೆದ ನಿರ್ದೇಶಕ ಸಂಗೀತ್ ಶಿವನ್ ಮೇ 8 ರಂದು ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ…

1 hour ago

ಮುಸ್ಲಿಂ ಯುವತಿಯೊಂದಿಗೆ ಮದುವೆ : ಖಾಕಿ ವಿರುದ್ಧ ಹಿಂದೂ ಸಂಘಟನೆ ಪ್ರತಿಭಟನೆ

ಬಾದಾಮಿ ಮೂಲದ ರುಬಿನಾ ಮತ್ತು ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ‌ ಮದುವೆಯಾಗಿ ರಕ್ಷಣೆ ಕೋರಿ ಲ ಬಾಗಲಕೋಟೆ ಎಸ್​ಪಿ ಕಚೇರಿಗೆ ಬಂದಿದ್ದು,…

2 hours ago

ಹಾಸ್ಟೆಲ್‌ ಯುವತಿಯರ ಬೆತ್ತಲೆ ವಿಡಿಯೊಗಳನ್ನು ಬಾಯ್‌ಫ್ರೆಂಡ್‌ಗೆ ಕಳುಹಿಸಿದ ಯುವತಿ!

ಮಹಾರಾಷ್ಟ್ರದ ಪುಣೆಯಲ್ಲಿರುವ ಕಾಲೇಜ್‌ ಆಫ್‌ ಎಂಜಿನಿಯರಿಂಗ್‌ ಪುಣೆಯ (COEP) ಹಾಸ್ಟೆಲ್‌ನಲ್ಲಿ ಯುವತಿಯೊಬ್ಬಳು ಮಾಡಿದ ಭಾನಗಡಿ ಈಗ ಹಾಸ್ಟೆಲ್‌ನ ಎಲ್ಲ ವಿದ್ಯಾರ್ಥಿನಿಯರು…

2 hours ago

ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ನಿಧನ

ಬೆಳ್ತಂಗಡಿಯ ಬಡವರ ಬಂಧು, ಮಾಜಿ ಶಾಸಕ ವಸಂತ ಬಂಗೇರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನ ಹೊಂದಿರುತ್ತಾರೆ. ಗುರುವಾರ ಮುಂಜಾನೆ…

2 hours ago

ಇಂದು ಎಸ್​ಎಸ್​ಎಲ್​​ಸಿ ಫಲಿತಾಂಶ : ಎಷ್ಟು ಗಂಟೆಗೆ? ಎಲ್ಲಿ ನೋಡಬಹುದು?

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶಬೆಳಗ್ಗೆ 10.30ಕ್ಕೆ ಪ್ರಕಟವಾಗಲಿದೆ. ರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುದ್ದಿಗೋಷ್ಠಿ…

3 hours ago