ಉತ್ತರ ಪ್ರದೇಶ

ಮಥುರಾ, ವೃಂದಾವನವನ್ನೂ ಮರುಸ್ಥಾಪನೆ ಮಾಡುತ್ತೇವೆ: ಸಿಎಂ ಯೋಗಿ

ಅಯೋಧ್ಯೆ: ರಾಮ ಮಂದಿರ ನಿರ್ಮಾಣದ ನಂತರ ಮಥುರಾ, ವೃಂದಾವನ, ವಿಂಧ್ಯವಾಸಿನಿ ಧಾಮ, ನೈಮಿಷಾರಣ್ಯ ಧಾಮಗಳಂತಹ ಮಂದಿರಗಳು ಕೂಡ ತಲೆ ಎತ್ತಲಿವೆ ಎಂದು ಯುಪಿ ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

ಭಾನುವಾರ ಲಕ್ನೋದಲ್ಲಿ ನಡೆದ ಯುಪಿ ಬಿಜೆಪಿ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಈ ಹೇಳಿಕೆ ನೀಡಿದ್ದಾರೆ. ಗ್ಯಾನವಾಪಿ ಮಸೀದಿ ವಿವಾದದಲ್ಲಿ ಕಾನೂನು ಕ್ರಮ ಕೈಗೊಳ್ಳುತ್ತಿರುವ ಸಂದರ್ಭದಲ್ಲೇ ಅವರಿಂದ ಈ ಹೇಳಿಕೆ ಹೊರಬಿದ್ದಿದೆ. ಇತ್ತೀಚೆಗೆ ನವೀಕರಿಸಿದ ಕಾಶಿ ವಿಶ್ವನಾಥ ದೇವಾಲಯವು ಪ್ರತಿದಿನ ಸುಮಾರು ಒಂದು ಲಕ್ಷ ಪ್ರವಾಸಿಗರನ್ನು ಆಕರ್ಷಿಸುತ್ತಿದೆ ಎಂದು ಯೋಗಿ ಹೇಳಿದರು.

ಪ್ರಧಾನಿ ಮೋದಿಯವರ ದೂರದೃಷ್ಟಿಗೆ ಅನುಗುಣವಾಗಿ ನಗರವು ತನ್ನ ಹೆಸರಿನ ಮಹತ್ವವನ್ನು ಸಾಬೀತುಪಡಿಸುತ್ತಿದೆ. ಯುಪಿಯಲ್ಲಿ ಬಿಜೆಪಿ ಆಡಳಿತದ ಅವಧಿಯಲ್ಲಿ ಒಂದೇ ಒಂದು ಧಾರ್ಮಿಕ ಹಿಂಸಾಚಾರ ನಡೆದಿಲ್ಲ, ಇದು ರಾಜ್ಯದಲ್ಲಿನ ಬಲವಾದ ಭದ್ರತಾ ಪರಿಸ್ಥಿತಿಯನ್ನು ಪ್ರತಿಬಿಂಬಿಸುತ್ತದೆ ಎಂದು ಯೋಗಿ ಆದಿತ್ಯಾನಾಥ್ ಹೇಳಿದರು.

ಈದ್‌ಗೆ ಮುನ್ನ ಕಳೆದ ಶುಕ್ರವಾರ ರಸ್ತೆಗಳಲ್ಲಿ ಪ್ರಾರ್ಥನೆ ನಡೆಯದಿರುವುದು ಇದೇ ಮೊದಲು ಎಂದರು. ಇದೇ ವೇಳೆ ಶ್ರೀರಾಮನವಮಿ ಹನುಮ ಜಯಂತಿಯನ್ನು ಶಾಂತಿಯುತವಾಗಿ ಆಚರಿಸಲಾಗಿದೆ. ಪ್ರಾರ್ಥನಾ ಸ್ಥಳಗಳಿಂದ ಧ್ವನಿವರ್ಧಕಗಳನ್ನು ತೆಗೆದುಹಾಕಿರುವುದನ್ನು ಉಲ್ಲೇಖಿಸಿದ ಅವರು, “ಅನಗತ್ಯವಾಗಿ ಶಬ್ದ ಉಂಟುಮಾಡುತ್ತಿದ್ದ ಧ್ವನಿವರ್ಧಕಗಳನ್ನು ನಮ್ಮ ಸರ್ಕಾರ ಹೇಗೆ ತೆಗೆದುಹಾಕಿದೆ ಎಂಬುದನ್ನು ಜನರು ಗಮನಿಸುತ್ತಿದ್ದಾರೆ”. 2024ರ ಲೋಕಸಭೆ ಚುನಾವಣೆಗೆ ತಕ್ಷಣವೇ ಪ್ರಚಾರ ಆರಂಭಿಸುವ ಅಗತ್ಯವನ್ನು ಒತ್ತಿ ಹೇಳಿದ ಯೋಗಿ, ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ 80 ಲೋಕಸಭಾ ಸ್ಥಾನಗಳ ಪೈಕಿ ಕನಿಷ್ಠ 75 ಸ್ಥಾನಗಳನ್ನು ಗೆಲ್ಲುವ ಗುರಿಯೊಂದಿಗೆ ಪಕ್ಷ ಮುನ್ನಡೆಯಬೇಕು ಎಂದರು.

Sneha Gowda

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

8 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

8 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

9 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

9 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

9 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

9 hours ago