ಉತ್ತರ ಪ್ರದೇಶ

ಮದರಸಾಗಳಲ್ಲಿ ತರಗತಿ ಆರಂಭಕ್ಕೂ ಮುನ್ನ ರಾಷ್ಟ್ರಗೀತೆ ಕಡ್ಡಾಯ

ಲಖನೌ : ಉತ್ತರ ಪ್ರದೇಶದ ಎಲ್ಲಾ ಮದರಸಾಗಳು ತರಗತಿ ಆರಂಭಕ್ಕೂ ಮುನ್ನ ಬೆಳಗ್ಗೆ ಪ್ರಾರ್ಥನೆಯೊಂದಿಗೆ ರಾಷ್ಟ್ರಗೀತೆಯನ್ನು ಕಡ್ಡಾಯವಾಗಿ ಪಠಿಸುವಂತೆ ಮದರಸಾ ಶಿಕ್ಷಣ ಮಂಡಳಿ ಸುತ್ತೋಲೆ ಹೊರಡಿಸಿದೆ.

ಉತ್ತರ ಪ್ರದೇಶ ಮದರಸಾ ಶಿಕ್ಷಣ ಮಂಡಳಿ ನಡೆಸಿದ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. 2017ರಲ್ಲಿ ಮಂಡಳಿಯು ಸ್ವಾತಂತ್ರ್ಯ ದಿನದಂದು ರಾಷ್ಟ್ರಗೀತೆ ಮತ್ತು ರಾಷ್ಟ್ರ ಧ್ವಜಾರೋಹಣವನ್ನು ಕಡ್ಡಾಯಗೊಳಿಸಿದ ಸುಮಾರು ಐದು ವರ್ಷಗಳ ನಂತರ ಇದೀಗ ಜಾರಿಗೆ ಬಂದಿದೆ.

ವಿವಿಧ ಶಾಲೆಗಳಲ್ಲಿ ರಾಷ್ಟ್ರಗೀತೆಯನ್ನು ಹಾಡಲಾಗುತ್ತದೆ ಮತ್ತು ಮದರಸಾ ವಿದ್ಯಾರ್ಥಿಗಳಲ್ಲಿ ದೇಶಭಕ್ತಿ ಬೆಳೆಸಲು ನಾವು ಇಚ್ಚಿಸುತ್ತೇವೆ. ಇದರಿಂದಾಗಿ ಅವರು ಧಾರ್ಮಿಕ ಅಧ್ಯಯನದ ಹೊರತಾಗಿಯೂ ನಮ್ಮ ಇತಿಹಾಸ ಮತ್ತು ಸಂಸ್ಕೃತಿಯನ್ನು ತಿಳಿದುಕೊಳ್ಳುತ್ತಾರೆ. ಇದನ್ನು ಈಗಾಗಲೇ ಕೆಲವು ಮದರಸಾಗಳಲ್ಲಿ ಪಠಿಸಲಾಗಿದೆ. ಮುಂಬರುವ ಶೈಕ್ಷಣಿಕ ಅಧಿವೇಶನದಿಂದ ನಾವು ಈಗ ಅದನ್ನು ಕಡ್ಡಾಯಗೊಳಿಸಿದ್ದೇವೆ ಎಂದು ಅಧ್ಯಕ್ಷ ಇಫ್ತಿಕರ್ ಅಹ್ಮದ್ ಜಾವೇದ್ ಹೇಳಿದ್ದಾರೆ.

ಇಫ್ತಿಕಾರ್ ಅಹ್ಮದ್ ಜಾವೇದ್ ನೇತೃತ್ವದ ಸಭೆಯಲ್ಲಿ ಪರೀಕ್ಷೆಗಳು, ಹಾಜರಾತಿ ಮತ್ತು ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದ ಹಲವಾರು ಇತರ ನಿರ್ಧಾರಗಳನ್ನು ಮಂಡಳಿ ತೆಗೆದುಕೊಂಡಿತು. ಮದರಸಾ ಶಿಕ್ಷಕರಾಗಲು ಪೂರ್ವ ಅರ್ಹತೆಯಾಗಿ ಶಿಕ್ಷಕರ ಅರ್ಹತಾ ಪರೀಕ್ಷೆ ಪ್ರಾರಂಭಿಸಲು ಮಂಡಳಿ ನಿರ್ಧರಿಸಿದೆ.

Gayathri SG

Recent Posts

ಹೊಳೆಯಲ್ಲಿ ಸ್ನಾನ ಮಾಡಲು ಹೋಗಿ ಇಬ್ಬರು ಮೃತ್ಯು

ಹೊಳೆಯಲ್ಲಿ ಮುಳುಗಿ ಇಬ್ಬರು ಮೃತಪಟ್ಟಿರುವ ಘಟನೆ ಇಂದು ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಕಡವಿನಕಟ್ಟೆಯಲ್ಲಿ ನಡೆದಿದೆ.

19 mins ago

ರಸ್ತೆ ತಿರುವಿನ ಅಪಾಯಕಾರಿ ವಿದ್ಯುತ್ ತಂತಿಗಳು: ಸುರಕ್ಷಿತ ಎತ್ತರಕ್ಕೆ ಏರಿಕೆ

ಸಾಣೂರಿನ ಲೈನ್ ಮ್ಯಾನ್  ಸುಭಾಷ್ ರವರು ತಮ್ಮ ತಂಡದೊಂದಿಗೆ ಮೇ 17 ರಂದು ಮುರತಂಗಡಿ ಇರುವತ್ತೂರು ರಸ್ತೆ ತಿರುವಿನಲ್ಲಿರುವ ವಿದ್ಯುತ್…

33 mins ago

ಕೇಸ್​ನಲ್ಲಿ ರಿಕವರಿ ಮಾಡಿದ್ದ ಅರ್ಧ ಕೆ.ಜಿ ಚಿನ್ನ ಕದ್ದ ಪೊಲೀಸ್​ ಪೇದೆ

ರಕ್ಷಕರೇ ಭಕ್ಷಕರಾದ ಘಟನೆಯೊಂದು ಕೋಲಾರದಲ್ಲಿ ನಡೆದಿದೆ . ಕಳವು ಕೇಸ್​ನಲ್ಲಿ ರಿಕವರಿ ಮಾಡಿದ್ದ 1 ಕೆಜಿ 408 ಗ್ರಾಂ ಚಿನ್ನದಲ್ಲಿ…

52 mins ago

ಪ್ರಧಾನಿ ನರೇಂದ್ರ ಮೋದಿಯವರು ಮಣ್ಣಿನ ಮಗ: ಕಂಗನಾ ರಣಾವತ್

ಪ್ರಧಾನಿ ನರೇಂದ್ರ ಮೋದಿಯವರು ಮಣ್ಣಿನ ಮಗ, ಬಡ ಕುಟುಂಬದಲ್ಲಿ ಹುಟ್ಟಿ ದೇಶದ ಕಲ್ಯಾಣ ಮತ್ತು ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಎಂದು ಹಿಮಾಚಲ…

1 hour ago

ವಾಸವಿ ಯುವಜನ ಸಂಘದಿಂದ ರಕ್ತದಾನ ಶಿಬಿರ : ದಿನೇಶ್‌ಗುಪ್ತ

ನಗರದ ವಾಸವಿ ಯುವಜನ ಸಂಘ ಮತ್ತು ವಾಸವಿ ಕ್ಲಬ್‌ ಆಶ್ರಯದಲ್ಲಿ ಇಂದು ನಗರದ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರವನ್ನು…

2 hours ago

ಗ್ರಾಮಸ್ಥರ ಆರೋಗ್ಯ ಸುರಕ್ಷತೆಗೆ ಕ್ರಮಕೈಗೊಳ್ಳಲು ಬಿಜೆಪಿ ಒತ್ತಾಯ

ಡೆಂಗ್ಯೂ ಸೋಂಕಿನಿಂದ ಬಳಲುತ್ತಿರುವ ಗ್ರಾಮಕ್ಕೆ ತಜ್ಞ ವೈದ್ಯಾಧಿಕಾರಿ ಗಳ ತಂಡವನ್ನು ರಚಿಸಿ ನಿವಾಸಿಗಳ ಆರೋಗ್ಯ ಕಾಪಾಡಬೇಕು ಎಂದು ಎರೆಹಳ್ಳಿ ಗ್ರಾಮಸ್ಥರು…

2 hours ago