ಮದುವೆ ಮಂಟಪದಲ್ಲಿ ವರನನ್ನು ನೋಡಿ ಮದುವೆಯಾಗಲು ನಿರಾಕರಿಸಿದ ವಧು

ಉತ್ತರ ಪ್ರದೇಶ: ಇನ್ನೇನು ಮದುವೆಯಾಗಬೇಕು ಎನ್ನುವಷ್ಟರಲ್ಲಿ ವಧುವೊಬ್ಬಳು ವರನನ್ನು ಮದುವೆಯಾಗಲು ನಿರಾಕರಿಸಿರುವ ಘಟನೆ ಉತ್ತರ ಪ್ರದೇಶದ ಬಾರಾಬಂಕಿ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಇದಕ್ಕೆ ಕಾರಣವೇನೆಂದು ತಿಳಿದರೆ, ಪ್ರತಿಯೊಬ್ಬರಿಗೂ ಶಾಕ್‌ ಆಗುವುದು ಖಂಡಿತ.

ಮದುವೆಯ ಎಲ್ಲಾ ವಿಧಿವಿಧಾನಗಳು ಮುಗಿದಿದ್ದವು. ಇನ್ನೇನು ತಾಳಿ ಕಟ್ಟುವ ಸಮಯ ಬಂದೇ ಬಿಡ್ತು. ಮೆರವಣಿಗೆ ಮುಗಿಸಿ ಬಂದ ವರನಿಗೆ ವಧುವಿನ ಕಡೆಯವರು ತಿಲಕವಿಡಲು ಮುಂದಾದರು. ಈ ವೇಳೆ ವರನನ್ನು ನೋಡಿದ ವಧು ವರನು ತೆಳ್ಳಗಿದ್ದ ಕಾರಣ ಅವನನ್ನು ಮದುವೆಯಾಗಲು ನಿರಾಕರಿಸಿದ್ದಾಳೆ. ಇದಕ್ಕೆ ವಧುವಿನ ಕಡೆಯವರೂ ಸಾಥ್‌ ನೀಡಿದ್ದಾರೆ. ಅಷ್ಟೇ ಅಲ್ಲದೇ, ವರನ ಕಡೆಯವರಿಗೆ ತರಾಟೆ ತೆಗೆದುಕೊಂಡಿದ್ದು, ಮೆರವಣಿಗೆಗೆ ಮಾಡಿದ ಖರ್ಚನ್ನು ವಾಪಸ್ ಕೊಡಿಸುವಂತೆ ಜಗಳವಾಡಿದ್ದಾರೆ.

ವಿಷಯ ತಿಳಿದ ಪೊಲೀಸರು ಸ್ಥಳಕ್ಕಾಗಮಿಸಿ ವರನನ್ನು ಬಿಡುಗಡೆಗೊಳಿಸಿದ್ದಾರೆ. ಈ ಬಗ್ಗ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Gayathri SG

Recent Posts

ಟಿ20 ವಿಶ್ವಕಪ್​ಗೆ ಮುನ್ನ ರಿಷಭ್​ ಪಂತ್​​ಗೆ ನಿಷೇಧ, 30 ಲಕ್ಷ ರೂ. ದಂಡ

17ನೇ ಆವೃತ್ತಿಯ ಐಪಿಎಲ್​ನ 62ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡದ ನಡುವೆ ಹೈವೋಲ್ಟೇಜ್ ಪಂದ್ಯ…

19 mins ago

ʼರಾಜ್ಯ ಸರ್ಕಾರ ಸಾಲ ಮನ್ನಾ ಮಾಡಿ ರೈತರಿಗೆ ನೆರವಾಗಬೇಕುʼ

ರಾಜ್ಯ ಸರ್ಕಾರ ಸಾಲ ಮನ್ನಾ ಮಾಡಿ ರೈತರಿಗೆ ನೆರವಾಗಬೇಕು ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.

21 mins ago

ಪ್ರವಾಹಕ್ಕೆ ತತ್ತರಿಸಿ ಹೋದ ಅಫ್ಗಾನಿಸ್ತಾನ : 200ಕ್ಕೂ ಹೆಚ್ಚು ಜನ ಬಲಿ

ಅಫ್ಘಾನಿಸ್ತಾನದಲ್ಲಿ ಭಾರೀ ಮಳೆಯಿಂದ ಪ್ರವಾಹ ಉಂಟಾಗಿದೆ. ಈ ಪ್ರವಾಹದಿಂದಾಗಿ ಸುಮಾರು 200ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ ಎಂದು ವಿಶ್ವಸಂಸ್ಥೆ ಶನಿವಾರ…

41 mins ago

ಫ್ಲೈಯಿಂಗ್ ಎಲೆಕ್ಟ್ರಿಕ್ ಟ್ಯಾಕ್ಸಿ ನಿರ್ಮಿಸಲು ಮುಂದಾದ ಮದ್ರಾಸ್ ಐಐಟಿ-ಶ್ಲಾಘಿಸಿದ ಆನಂದ್ ಮಹೀಂದ್ರಾ

ಎಲೆಕ್ಟ್ರಿಕ್ ಫ್ಲೈಯಿಂಗ್ ಟ್ಯಾಕ್ಸಿಯನ್ನು ಅಭಿವೃದ್ಧಿಪಡಿಸುತ್ತಿರುವ ಇಂಡಿಯನ್ ಇನ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮದ್ರಾಸ್‍ನ್ನು ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಅವರು…

53 mins ago

ಜಮ್ಮು –ಕಾಶ್ಮೀರ : ಪಾಕ್ ಡ್ರೋನ್ ಹೊಡೆದುರುಳಿಸಿದ ಬಿಎಸ್ಎಫ್

ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯ ಅಂತರರಾಷ್ಟ್ರೀಯ ಗಡಿ ಬಳಿ ಪಾಕಿಸ್ತಾನದ ಡ್ರೋನ್ ಅನ್ನು ಗಡಿ ಭದ್ರತಾ ಪಡೆ (ಬಿಎಸ್ಎಫ್)…

1 hour ago

ನೂಕುನುಗ್ಗಲಿನಲ್ಲೂ ಪಾದಯಾತ್ರೆ ಹೊರಟ ಭಕ್ತರು : ವಿಡಿಯೋ ವೈರಲ್‌

ಯಮುನೋತ್ರಿ, ಗಂಗೋತ್ರಿ, ಕೇದರ್‌ನಾಥ್‌ ಮತ್ತು ಬದರಿನಾಥ್‌ ಪವಿತ್ರ ಚಾರ್‌ ಧಾಮ್‌ ಯಾತ್ರೆಯ ಹಿನ್ನಲೆಯಲ್ಲಿ ಅಪಾರ ಪ್ರಮಾಣದ ಭಕ್ತರು ಜಮಾಯಿಸಿದ ಪರಿಣಾಮ…

1 hour ago