News Karnataka Kannada
Friday, May 10 2024
ಉತ್ತರ ಪ್ರದೇಶ

ಮದುವೆ ಮುಗಿಸಿ ಹೊರಟಿದ್ದ ಜೀಪ್-ಟ್ರಕ್ ಅಪಘಾತ:ಸ್ಥಳದಲ್ಲೇ 6 ಮಂದಿ ಸಾವು

Accident.
Photo Credit :

ಉತ್ತರಪ್ರದೇಶ: ಜಿಲ್ಲೆಯ ಗೌರಿಗಂಜ್‌ ಪ್ರದೇಶದಲ್ಲಿ ಮದುವೆ ಮುಗಿಸಿ ವಾಪಸ್‌ ಆಗುತ್ತಿದ್ದ ಜೀಪ್‌ ಹಾಗೂ ಟ್ರಕ್‌  ಡಿಕ್ಕಿಯಾಗಿವೆ. ಪರಿಣಾಮವಾಗಿ ಜೀಪ್‌ನಲ್ಲಿದ್ದ 6 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೂ ನಾಲ್ವರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಾಬುಗಂಜ್‌ ಸಗ್ರಾ ಆಶ್ರಮದ ಸಮೀಪ ಭಾನುವಾರ ತಡರಾತ್ರಿ 12.15ರ ಸುಮಾರಿಗೆ ಅಪಘಾತ ಸಂಭವಿಸಿದೆ. ಅಮೇಥಿಯ ಬೇರೆಬೇರೆ ಊರುಗಳ ಜನರಿದ್ದ ಬೊಲೆರೊ ಜೀಪ್‌, ರಾಯ್‌ ಬರೇಲಿ ಜಿಲ್ಲೆಯ ನಾಸಿರಾಬಾದ್‌ ಪ್ರದೇಶದಿಂದ ಬರುತ್ತಿತ್ತು ಎಂದು ಸೂಪರಿಂಟೆಂಡೆಂಟ್‌ ಆಫ್‌ ಪೊಲೀಸ್‌ (ಎಸ್‌ಪಿ) ದಿನೇಶ್‌ ಸಿಂಗ್‌ ಹೇಳಿದ್ದಾರೆ.

ಸದ್ಯ ಮೃತದೇಹಗಳನ್ನು ಶವಪರೀಕ್ಷೆಗೆ ಕಳುಹಿಸಲಾಗಿದ್ದು, ಟ್ರಕ್‌ಅನ್ನು ವಶಕ್ಕೆ ಪಡೆಯಲಾಗಿದೆ. ಟ್ರಕ್‌ ಚಾಲಕ ಪರಾರಿಯಾಗಿದ್ದಾನೆ ಎಂದೂ ಹೇಳಿದ್ದಾರೆ.

ಡಿಕ್ಕಿಯಾದ ರಭಸಕ್ಕೆ ಜೀಪ್ ಜಖಂಗೊಂಡಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಅಪಘಾತದಲ್ಲಿ ಮೃತಪಟ್ಟವರಿಗಾಗಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಸಂತಾಪಸೂಚಿಸಿದ್ದು, ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಒದಗಿಸುವುಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ಸರ್ಕಾರದ ವಕ್ತಾರರು ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು