“ಮಾಲೆಗಾಂವ್ ಸ್ಫೋಟದಲ್ಲಿ ಯೋಗಿ ಮತ್ತು ಆರೆಸ್ಸೆಸ್ ಹೆಸರಿಸುವಂತೆ ಹಿಂಸಿಸಲಾಗಿತ್ತು”

ರಾಷ್ಟ್ರೀಯ ತನಿಖಾ ದಳದ ವಿಶೇಷ ನ್ಯಾಯಾಲಯವು 2008ರ ಮಾಲೆಗಾಂವ್ ಸ್ಫೋಟದ ಕುರಿತು ವಿಚಾರಣೆ ನಡೆಸುತ್ತಿದೆ. ಇದೀಗ, ಪ್ರಕರಣದ ಸಾಕ್ಷಿಯೊಬ್ಬರು ಅಂದಿನ ಭಯೋತ್ಪಾದನಾ ನಿಗ್ರಹ ದಳದ (ಎಟಿಎಸ್) ವಿರುದ್ಧ ನ್ಯಾಯಾಲಯದೆದುರು ಗಂಭೀರ ಆರೋಪ ಮಾಡಿದ್ದಾರೆ.

ಮಾಲೆಗಾಂವ್ ಪ್ರಕರಣದಲ್ಲಿ ಯೋಗಿ ಆದಿತ್ಯನಾಥ ಹಾಗೂ ಆರೆಸ್ಸೆಸ್ ಗೆ ಸೇರಿದ ಇನ್ನು ನಾಲ್ವರನ್ನು ಹೆಸರಿಸುವುದಕ್ಕೆ ತಮ್ಮನ್ನುಹಿಂಸೆಗೆ ಒಳಪಡಿಸಲಾಗಿತ್ತು ಎಂದು ಸಾಕ್ಷಿ ಹೇಳುತ್ತಿದ್ದ ವ್ಯಕ್ತಿ ಆರೋಪಿಸಿದ್ದಾರೆ.

ರಿಪಬ್ಲಿಕ್ ಟಿವಿ ವರದಿ ಮಾಡಿರುವ ಪ್ರಕಾರ, ಸ್ವಾಮಿ ಅಸೀಮಾನಂದ, ಇಂದ್ರೇಶ ಕುಮಾರ, ಕಾಕಾಜಿ ಮತ್ತು ದೇವಧರಜೀ ಅವರ ಹೆಸರುಗಳನ್ನು ತೆಗೆದುಕೊಳ್ಳುವುದಕ್ಕೆ ಸಾಕ್ಷಿಯ ಮೇಲೆ ಒತ್ತಡ ಹೇರಲಾಗಿತ್ತು.

ಯುಪಿಎ ಸರ್ಕಾರದ ಅವಧಿಯಲ್ಲಿ ಮಾಲೆಗಾಂವ್ ಸ್ಫೋಟದ ಸಂಬಂಧ ಶುರುವಾದ ತನಿಖೆಗಳು ಅದಾಗಲೇ ವ್ಯಾಪಕ ಸಂದೇಹ ಮತ್ತು ಟೀಕೆಗಳನ್ನು ಹುಟ್ಟುಹಾಕಿದ್ದವು. ‘ಹಿಂದು ಭಯೋತ್ಪಾದನೆ’ ಎಂಬುದೊಂದಿದೆ ಎಂದು ಸಾಬೀತುಪಡಿಸಲೆಂದೇ ತನಿಖೆಯ ದಿಕ್ಕು ಸಾಗಿತ್ತು ಎಂಬ ಬಗ್ಗೆ ಅದಾಗಲೇ ಹಲವು ಆರೋಪಗಳು ಕೇಳಿಬಂದಿದ್ದವು. ಇದೀಗ ನ್ಯಾಯಾಲಯದ ಎದುರು ಸಾಕ್ಷಿಯ ಹೇಳಿಕೆ ಹೊಸ ಸೇರ್ಪಡೆ ಅಷ್ಟೆ.

ಯುಪಿಎ ಸರ್ಕಾರದ ಅವಧಿಯಲ್ಲಿ ಸರ್ಕಾರದ ಉನ್ನತ ಹುದ್ದೆಗಳಲ್ಲಿದ್ದ ಅಧಿಕಾರಿ ಆರ್ ವಿ ಎಸ್ ಮಣಿ ಎಂಬುವವರು ಈ ಹಿಂದೆ ತಮ್ಮ ಸಂದರ್ಶನ ಮತ್ತು ಬರಹಗಳ ಮೂಲಕ ಮಾಲೆಗಾಂವ್, ಸಮಜೋತಾ, ಬಾಟ್ಲಾ ಹೌಸ್ ಎನ್ಕೌಂಟರ್ ಇಲ್ಲೆಲ್ಲ ಕೇಸರಿ ಭಯೋತ್ಪಾದನೆ ಇದೆ ಎಂದು ನಿರೂಪಿಸುವುದಕ್ಕೆ ಸರ್ಕಾರ ಭಾರಿ ಪ್ರಯತ್ನ ಮಾಡಿತ್ತು ಎಂಬುದನ್ನು ಜಾಹೀರಾಗಿಸಿದ್ದರು.

Sneha Gowda

Recent Posts

ಅಂಜಲಿ ಹತ್ಯೆ ಪ್ರಕರಣ : ಆತ್ಮಹತ್ಯೆಗೆ ಯತ್ನಿಸಿದ ಸಹೋದರಿ ಚೇತರಿಕೆ

ಅಂಜಲಿ ಅಂಬಿಗೇರ ಹತ್ಯೆ ಪ್ರಕರಣ ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿದೆ. ಈ ಮಧ್ಯೆ ಸಹೋದರಿಯ ಹತ್ಯೆಯಿಂದ ಮಾನಸಿಕವಾಗಿ ಕುಗ್ಗಿ ಹೋಗಿರುವ ಯಶೋದಾ…

9 mins ago

ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ : ಬಿಜೆಪಿ ಮಾಜಿ ಸರಪಂಚ್ ಸಾವು

ಜಮ್ಮು-ಕಾಶ್ಮೀರದಲ್ಲಿ ಇನ್ನು ಎರಡು ದಿನಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು, ಅದಕ್ಕೂ ಮುನ್ನ ನಿನ್ನೆ ಶನಿವಾರ ತಡರಾತ್ರಿ ಜಮ್ಮು ಮತ್ತು ಕಾಶ್ಮೀರದ…

20 mins ago

ವಿಮಾನ ಇಂಜಿನ್‌ನಲ್ಲಿ ಬೆಂಕಿ : ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ

ಬೆಂಗಳೂರಿನಿಂದ ಕೊಚ್ಚಿಗೆ ಪ್ರಯಾಣಿಸುತ್ತಿದ್ದ ಏರ್‌ ಇಂಡಿಯಾ ಎಕ್ಸಪ್ರೆಸ್‌ ವಿಮಾನವು ಶನಿವಾರ ತಡರಾತ್ರಿ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್‌ ಮಾಡಿದೆ.…

27 mins ago

ಸಿಂಗಾಪುರದಲ್ಲಿ ಹೆಚ್ಚುತ್ತಿರುವ ಕೊರೊನಾ ಅಲೆ ಭೀತಿ : ಮಾಸ್ಕ್‌ ಧರಿಸುವಂತೆ ಆದೇಶ

ಸಿಂಗಾಪುರದಲ್ಲಿ ಕೊರೊನಾ ಸೋಂಕಿನ ಹೊಸ ಅಲೆ ಭೀತಿ ಎದುರಾಗಿದ್ದು, ದಿನದಿಂದ ದಿನಕ್ಕೆ ಕೊರೊನಾ ಸೋಂಕಿತ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಜನರಿಗೆ ಮಾಸ್ಕ್‌…

29 mins ago

ಸುರತ್ಕಲ್: ಶಬರಿಮಲೆ ಹದಿನೆಂಟು ಮೆಟ್ಟಿಲು ಹತ್ತುವ ವೇಳೆ ಹೃದಯಾಘಾತ !

ಮಗನ ಹೆಸರಲ್ಲಿ ಹೇಳಿಕೊಂಡಿದ್ದ ಹರಕೆ ತೀರಿಸಲು ಶಬರಿಮಲೆಗೆ ತೆರಳಿದ್ದ ಸುರತ್ಕಲ್ ಕಾಟಿಪಳ್ಳ ನಿವಾಸಿ ಸಂದೀಪ್‌ ಶೆಟ್ಟಿ (37) ಅವರು ಹೃದಯಾಘಾತದಿಂದ…

41 mins ago

ಸಿಎಂ ಸಿದ್ದು ತವರು ಕ್ಷೇತ್ರದಲ್ಲಿ ವಾಂತಿ-ಬೇದಿಯಿಂದ ತತ್ತರಿಸಿದ ಗ್ರಾಮಸ್ಥರು ..!

ಬಿಸಿಲಿನ ಬೇಗೆಯಿಂದ ತತ್ತರಿಸುತ್ತಿರುವ ಜನರಿಗೆ ತಂಪೆರೆಯುವ ಸಲುವಾಗಿ ಕಳೆದ ಒಂದು ವಾರಗಳಿಂದ ಮಳೆಯು ಧಾರಾಕಾರವಾಗಿ ಸುರಿಯುತ್ತಿದೆ ಇಂತಹ ಸಂದರ್ಭದಲ್ಲಿ ರಾಜ್ಯದ…

50 mins ago