ಉತ್ತರ ಪ್ರದೇಶ

ಮುಂದಿನ ನಮ್ಮ ಗುರಿ ಮಥುರಾ ಪಡೆಯುವುದು: ಮೋಹನ್‌ ಭಾಗವತ್‌

ಲಖನೌ: ಹಿಂದೂ ಧರ್ಮದಿಂದ ಅನ್ಯ ಧರ್ಮಗಳಿಗೆ ಮತಾಂತರ ಆಗಿರುವವರನ್ನು ಪುನಃ ಹಿಂದೂ ಧರ್ಮಕ್ಕೆ ಕರೆತರಲು (ಘರ್ ವಾಪಸಿ) ಹಿಂದೂಗಳು ಪ್ರತಿಜ್ಞೆ ಮಾಡಬೇಕು, ಜಾತೀಯತೆ ಮತ್ತು ಇತರ ಸಾಮಾಜಿಕ ಪಿಡುಗುಗಳನ್ನು ಹೋಗಲಾಡಿಸಬೇಕಾದ ಅಗತ್ಯವಿದೆ ಎಂದು ಪ್ರತಿಪಾದಿಸಿದರು. ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಸರಸಂಘಚಾಲಕ ಮೋಹನ್‌ ಭಾಗವತ್‌ ಕರೆ ನೀಡಿದರು.

ಚಿತ್ರಕೂಟದಲ್ಲಿ ನಡೆಯುತ್ತಿರುವ ‘ಹಿಂದೂ ಮಹಾಕುಂಭ’ದಲ್ಲಿ ಅವರು ಬುಧವಾರ ಮಾತನಾಡಿದರು.ಮಹಾಕುಂಭದಲ್ಲಿ ಪಾಲ್ಗೊಂಡಿರುವ ಸ್ವಾಮೀಜಿಗಳು ಮತ್ತು ದಾರ್ಶನಿಕರು ‘ಲವ್‌ ಜಿಹಾದ್‌, ಮತಾಂತರ’ಕ್ಕೆ ಸಂಬಂಧಿಸಿದಂತೆ ಕಳವಳ ವ್ಯಕ್ತಪಡಿಸಿ, ಹಿಂದೂ ಸಂಸ್ಕೃತಿ ಮತ್ತು ಸಂಪ್ರದಾಯವನ್ನು ರಕ್ಷಿಸುವಂತೆ ಅವರು ಆಗ್ರಹಿಸಿದರು.

ಸ್ವಾಮೀಜಿಗಳನ್ನು ಉದ್ದೇಶಿಸಿ ಮಾತನಾಡಿದ ಭಾಗವತ್‌, ಹಿಂದೂಗಳಲ್ಲಿ ಏಕತೆ ತರಬೇಕಾದ ಅಗತ್ಯವಿದ್ದು,’ಮತಾಂತರ ಆಗಿರುವವರನ್ನು ಮರಳಿ ಹಿಂದೂ ಧರ್ಮಕ್ಕೆ ಕರೆತರಲು ಎಲ್ಲರೂ ಪ್ರತಿಜ್ಞೆ ಮಾಡಬೇಕಿದೆ. ಜತೆಗೆ ಹಿಂದೂಗಳು ಮತಾಂತರ ಆಗದಂತೆಯೂ ನೋಡಿಕೊಳ್ಳಬೇಕಿದೆ. ಹಿಂದೂ ಸಹೋದರಿಯರ ಘನತೆಯನ್ನು ಕಾಪಾಡುವ ಪ್ರತಿಜ್ಞೆಯನ್ನು ನಾವೆಲ್ಲರೂ ಮಾಡಬೇಕಿದೆ’ ಎಂದರು.

ಮಥುರಾದ ಶ್ರೀಕೃಷ್ಣ ಜನ್ಮಭೂಮಿಯನ್ನು ಹಿಂದೂಗಳಿಗೆ ಮರಳಿ ನೀಡಬೇಕು ಎಂದು ಆಗ್ರಹಿಸಿದ ರಾಮಭದ್ರಾಚಾರ್ಯರು, ‘ನಾವು ಈಗಾಗಲೇ ಎ (ಅಯೋಧ್ಯೆ) ಮತ್ತು ಕೆ (ಕಾಶಿ) ಹೊಂದಿದ್ದೇವೆ. ಈಗ ನಮಗೆ ಎಂ (ಮಥುರಾ) ಬೇಕು’ ಎಂದು ಅವರು ಹೇಳಿದರು

Swathi MG

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

5 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

5 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

6 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

6 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

6 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

6 hours ago