ಮೋದಿಯವರ ಪ್ರಯತ್ನದಿಂದ ಕೋವಿಡ್ ಅವಧಿಯಲ್ಲಿಯೂ ಪ್ರತಿ ಮನೆಯ ಆರ್ಥಿಕ ಸ್ಥಿತಿ ಉತ್ತಮವಾಗಿದೆ; ಅಮಿತ್ ಶಾ

ಲಕ್ನೋ : ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಪ್ರಯತ್ನದಿಂದಾಗಿ ಕೊವಿಡ್ ಸಾಂಕ್ರಾಮಿಕದ ಎರಡು ವರ್ಷಗಳ ಅವಧಿಯಲ್ಲಿಯೂ ಪ್ರತಿ ಮನೆಯ ಆರ್ಥಿಕ ಸ್ಥಿತಿ ಉತ್ತಮವಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಉತ್ತರ ಪ್ರದೇಶದ ಅಟ್ರೌಲಿಯಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಅಮಿತ್ ಶಾ, ‘ಕಳೆದ ಎರಡು ವರ್ಷಗಳ ಕೊವಿಡ್‌ನಲ್ಲಿ ಲಕ್ಷ್ಮಿ ದೇವಿಯು ಕಮಲದ ಮೇಲೆ ಕುಳಿತು ಪ್ರತಿ ಮನೆಗೆ ಬಂದಳು. ಇದಕ್ಕೆ ಪ್ರಧಾನಿ ಮೋದಿಯವರೇ ಕಾರಣ’ ಎಂದು ಅಮಿತ್‌ ಶಾ ಬಣ್ಣಿಸಿದ್ದಾರೆ.

ಸಮಾಜವಾದಿ ಪಕ್ಷ ಮತ್ತು ಬಹುಜನ ಸಮಾಜ ಪಕ್ಷದವರು ಎಂದಿಗೂ ಬಡವರ ಬಗ್ಗೆ ಯೋಚಿಸುವುದಿಲ್ಲ ಮತ್ತು ಅಭಿವೃದ್ಧಿಗೆ ಏನನ್ನೂ ಮಾಡುವುದಿಲ್ಲ. ಕೇವಲ ನಮ್ಮ ಸರ್ಕಾರವನ್ನು ಟೀಕಿಸುವುದರಲ್ಲೇ ಆ ಪಕ್ಷಗಳ ನಾಯಕರು ಕಾಲ ಕಳೆಯುತ್ತಿದ್ದಾರೆ. ಈ ಬುವಾ-ಭಟಿಜಾ ಏನು ಮಾಡಿದ್ದಾರೆ? ಎಂದು ನಾನು ನಿಮ್ಮನ್ನು ಕೇಳುತ್ತೇನೆ. ಗ್ಯಾಸ್, ಶೌಚಾಲಯ, ವಿದ್ಯುತ್, ಮನೆ ಇದನ್ನೆಲ್ಲ ಪ್ರಧಾನಿ ನರೇಂದ್ರ ಮೋದಿ ಮಾಡಿದ್ದಾರೆ ಎಂದು ಅಮಿತ್ ಶಾ ಹೇಳಿದ್ದಾರೆ.

ನೀವೆಲ್ಲ ಕೊರೊನಾ ಲಸಿಕೆ ಹಾಕಿಸಿಕೊಂಡಿದ್ದೀಯಾ ಅಲ್ವಾ? ಅಖಿಲೇಶ್ ಯಾದವ್ ಇದು ಬಿಜೆಪಿಯ ಲಸಿಕೆ ಎಂದು ಹೇಳುತ್ತಿದ್ದರು. ಕೊನೆಗೆ ಅವರು ಕೂಡ ಕೊವಿಡ್ ಲಸಿಕೆ ಹಾಕಿಸಿಕೊಂಡರು ಎಂದು ಅಮಿತ್ ಶಾ ಲೇವಡಿ ಮಾಡಿದ್ದಾರೆ.

ಇಂದು ಉತ್ತರಪ್ರದೇಶದಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿರುವ ಗೃಹ ಸಚಿವ ಅಮಿತ್ ಶಾ ಕಾಂಗ್ರೆಸ್ ಮತ್ತು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಿರುದ್ಧವೂ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ 10 ವರ್ಷಗಳ ಕಾಲ ಅಧಿಕಾರದಲ್ಲಿದ್ದಾಗ ಪಾಕಿಸ್ತಾನವು ನಮ್ಮ ದೇಶದ ಮೇಲೆ ದಾಳಿ ಮಾಡಿ ನಮ್ಮ ಜವಾನರ ಶಿರಚ್ಛೇದ ಮಾಡಿತು. ಆಗ ಪ್ರಧಾನಿ ಮನಮೋಹನ್ ಸಿಂಗ್ ಏನನ್ನೂ ಮಾಡಲಿಲ್ಲ. ಆದರೆ, ಉರಿ ಮತ್ತು ಪುಲ್ವಾಮಾ ದಾಳಿಯ ನಂತರ ಪ್ರಧಾನಿ ನರೇಂದ್ರ ಮೋದಿ 10 ದಿನಗಳಲ್ಲಿ ಸರ್ಜಿಕಲ್ ಸ್ಟ್ರೈಕ್ ಮೂಲಕ ಪಾಕಿಸ್ತಾನದಲ್ಲಿ ಭಯೋತ್ಪಾದಕರನ್ನು ಹೊಡೆದುರುಳಿಸಿದರು ಎಂದು ಅಮಿತ್ ಶಾ ಹೇಳಿದ್ದಾರೆ.

ಉತ್ತರ ಪ್ರದೇಶದ 403 ವಿಧಾನಸಭಾ ಕ್ಷೇತ್ರಗಳಿಗೆ ಫೆಬ್ರವರಿ 10 ರಿಂದ ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಉತ್ತರ ಪ್ರದೇಶದಲ್ಲಿ ಫೆಬ್ರವರಿ 10, 14, 20, 23, 27, ಮಾರ್ಚ್ 3 ಮತ್ತು 7ರಂದು ಮತದಾನ ನಡೆಯಲಿದೆ. ಮಾರ್ಚ್ 10ರಂದು ಮತ ಎಣಿಕೆ ನಡೆಯಲಿದೆ.

Gayathri SG

Recent Posts

ರಾಜಸ್ಥಾನ್‌ ರಾಯಲ್ಸ್‌ನಿಂದ ನಟ ಕಿಚ್ಚ ಸುದೀಪ್‌ಗೆ ಜೆರ್ಸಿ ಉಡುಗೊರೆ

ರಾಜಸ್ಥಾನ್‌ ರಾಯಲ್ಸ್‌ ತಂಡವು ನಟ ಕಿಚ್ಚ ಸುದೀಪ್‌ ಅವರಿಗೆ ರಾಜಸ್ಥಾನ್‌ ತಂಡದ ಜೆರ್ಸಿಯನ್ನು ಉಡುಗೊರೆಯಾಗಿ ಕಳುಹಿಸಿಕೊಟ್ಟಿದೆ.

14 mins ago

ನೋಡ ನೋಡುತ್ತಿದ್ದಂತೆಯೇ ಶಿವಸೇನೆ ಉಪನಾಯಕಿ ತೆರಳಬೇಕಿದ್ದ ಹೆಲಿಕಾಪ್ಟರ್​ ಪತನ

ಶಿವಸೇನೆ ಉಪನಾಯಕಿ ಸುಷ್ಮಾ ಅಂಧಾರೆ ತೆರಳಬೇಕಿದ್ದ ಹೆಲಿಕಾಪ್ಟರ್​ ಪತನಗೊಂಡ ದೃಶ್ಯ ಸಮೇತ ಘಟನೆ ಮಹಾದ್​ನಲ್ಲಿ ಬೆಳಕಿಗೆ ಬಂದಿದೆ. ಅದೃಷ್ಟವಶಾತ್​​ ಯಾವುದೇ…

16 mins ago

ಕೆರೆ ಮೀನು ತಿಂದು ಇಬ್ಬರು ಮೃತ್ಯು: 15ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ಮೀನು ತಿಂದು ಇಬ್ಬರು ಸಾವನ್ನಪ್ಪಿ ಹಲವು ಮಂದಿ ಅಸ್ವಸ್ಥರಾದ ಘಟನೆ ಅರಕಲಗೂಡು ತಾಲೂಕಿನ ಬಸವಹಳ್ಳಿ ಗ್ರಾಮದಲ್ಲಿ ನಡೆದಿದೆ.

33 mins ago

ವಿಶ್ವ ಪತ್ರಿಕಾ ಸ್ವಾತಂತ್ರ್ಯ ದಿನ; ದೇಶದಲ್ಲಿ ಪತ್ರಕರ್ತರ ಭದ್ರತೆಗಿಲ್ಲ ಗ್ಯಾರಂಟಿ!

ಮಾಧ್ಯಮವನ್ನು ಸಂವಿಧಾನದ 4ನೇ ಆಯಾಮ ಎಂದು ಕರೆಯಲಾಗುತ್ತದೆ. ಜಗತ್ತಿನಲ್ಲಿ ನಡೆಯುವ ವಿಚಾರಗಳನ್ನು ಸಮಾಜಕ್ಕೆ ತಿಳಿಸುವ ಕಾರ್ಯವನ್ನು ಮಾಧ್ಯಮಗಳನ್ನು ಮಾಡುತ್ತವೆ. ಸತ್ಯವನ್ನು…

39 mins ago

ʼಯಾವ ದೇಶದಲ್ಲಿ ಇದ್ದರೂ ಪ್ರಜ್ವಲ್ ರೇವಣ್ಣನನ್ನು ಹಿಡಿದು ತರುತ್ತೇವೆʼ

ಪ್ರಜ್ವಲ್ ರೇವಣ್ಣ ಯಾವುದೇ ದೇಶದಲ್ಲಿ ಇದ್ದರೂ ಹಿಡಿದು ತರುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು. ಕೇಂದ್ರ ಸರ್ಕಾರ ಪ್ರಜ್ವಲ್ ರಕ್ಷಣೆ…

46 mins ago

ಹಾಸನದ ಫಾರ್ಮ್‌ಹೌಸ್‌ಗೆ ಎಸ್ಐಟಿ ತಂಡ ಭೇಟಿ; ವಿಡಿಯೋ ಕೇಸ್‌ಗೆ ಹೊಸ ಟ್ವಿಸ್ಟ್

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್ಐಟಿ ತನಿಖೆ ಚುರುಕಾಗಿದೆ. ಇಂದು ಬೆಳ್ಳಂಬೆಳಗ್ಗೆ ಎಸ್‌ಐಟಿ ಅಧಿಕಾರಿಗಳ ತಂಡ ಹಾಸನ…

1 hour ago