News Karnataka Kannada
Wednesday, May 01 2024
ಉತ್ತರ ಪ್ರದೇಶ

ರೈತ ನಾಯಕ ರಾಕೇಶ್‌ ಟಿಕಾಯತ್‌ಗೆ ಅಪರಿಚಿತ ವ್ಯಕ್ತಿಗಳಿಂದ ಕೊಲೆ ಬೆದರಿಕೆ

Rajesth Tikayath
Photo Credit :

ಮುಜಾಫರ್‌ನಗರ (ಉತ್ತರ ಪ್ರದೇಶ) : ಭಾರತೀಯ ಕಿಸಾನ್ ಯೂನಿಯನ್‌ ಮುಖ್ಯಸ್ಥ ರಾಕೇಶ್ ಟಿಕಾಯತ್‌ಗೆ ಅಪರಿಚಿತ ವ್ಯಕ್ತಿಗಳಿಂದ ಕೊಲೆ ಬೆದರಿಕೆ ಕರೆ ಬಂದಿದೆ. ಈ ಸಂಬಂಧ ದೂರು ದಾಖಲಿಸಿಕೊಳ್ಳಲಾಗಿದೆ ಎಂದು ಉತ್ತರ ಪ್ರದೇಶ ಪೊಲೀಸರು ಸೋಮವಾರ ಮಾಹಿತಿ ನೀಡಿದ್ದಾರೆ.

ಟಿಕಾಯತ್‌ ಅವರ ಕಾರು ಚಾಲಕ ಪ್ರಜ್ವಲ್‌ ತ್ಯಾಗಿ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ದೂರಿನ ಆಧಾರದ ಮೇಲೆ ಪೊಲೀಸರು ತನಿಖೆ ಆರಂಭಿಸಿದ್ದಾರೆ ಎಂದು ಮುಜಾಫರ್‌ನಗರದ ಹಿರಿಯ ಪೊಲೀಸ್ ಅಧೀಕ್ಷಕ ಅಭಿಷೇಕ್ ಯಾದವ್ ಹೇಳಿದ್ದಾರೆ.

ಹಿರಿಯ ಸಬ್ ಇನ್ಸ್‌ಪೆಕ್ಟರ್ ರಾಕೇಶ್ ಶರ್ಮಾ ನೇತೃತ್ವದ ಪೊಲೀಸ್ ತಂಡವು ಟಿಕಾಯತ್ ಅವರ ನಿವಾಸಕ್ಕೆ ಭೇಟಿ ನೀಡಿ ಅವರಿಂದ ಮಾಹಿತಿ ಕಲೆ ಹಾಕಿದೆ ಎಂದೂ ಪೊಲೀಸರು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು