News Karnataka Kannada
Sunday, May 12 2024
ಉತ್ತರ ಪ್ರದೇಶ

ವಾರಣಾಸಿಯಲ್ಲಿ ನಾಳೆ ಅಖಿಲ ಭಾರತ ಮೇಯರ್‌ಗಳ ಸಮ್ಮೇಳನಕ್ಕೆ ಪ್ರಧಾನಿಯಿಂದ ಚಾಲನೆ

New Delhi: Prime Minister Narendra Modi calls for intensification of 'Har Ghar Tiranga' movement
Photo Credit :

ಹೊಸದಿಲ್ಲಿ : ಉತ್ತರ ಪ್ರದೇಶದ ನಗರಾಭಿವೃದ್ಧಿ ಇಲಾಖೆಯು ವಾರಣಾಸಿಯಲ್ಲಿ ಆಯೋಜಿಸಿರುವ ಅಖಿಲ ಭಾರತ ಮೇಯರ್‌ಗಳ ಸಮ್ಮೇಳನವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನಾಳೆ (ಡಿ. 17ರಂದು) ಬೆಳಗ್ಗೆ 10.30ಕ್ಕೆ ಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ಘಾಟಿಸಿ, ಮಾತನಾಡಲಿದ್ದಾರೆ. ದೇಶದ ವಿವಿಧ ರಾಜ್ಯಗಳ ಮೇಯರ್‌ಗಳು ನವ ನಗರ ಭಾರತ ವಿಷಯದಲ್ಲಿ ನಡೆಯುವ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ.

ನಾಗರಿಕರು ನಗರ ಪ್ರದೇಶಗಳಲ್ಲಿ ವಾಸಿಸಲು ಅನುಕೂಲವಾಗುವಂತೆ ನೋಡಿಕೊಳ್ಳುವುದು ಪ್ರಧಾನ ಮಂತ್ರಿಯವರ ನಿರಂತರ ಪ್ರಯತ್ನವಾಗಿದೆ. ಶಿಥಿಲಗೊಂಡಿರುವ ನಗರ ಮೂಲಸೌಕರ್ಯ ಮತ್ತು ಸೌಕರ್ಯಗಳ ಕೊರತೆಯ ಸಮಸ್ಯೆಗಳನ್ನು ಪರಿಹರಿಸಲು ಸರಕಾರವು ಅನೇಕ ಯೋಜನೆಗಳು ಮತ್ತು ಉಪಕ್ರಮಗಳನ್ನು ಪ್ರಾರಂಭಿಸಿದೆ.

ನಗರಾಭಿವೃದ್ಧಿ ಕ್ಷೇತ್ರದಲ್ಲಿ ಭಾರತ ಸರಕಾರ ಮತ್ತು ಉತ್ತರ ಪ್ರದೇಶ ಸರಕಾರದ ಪ್ರಮುಖ ಸಾಧನೆಗಳನ್ನು ಪ್ರದರ್ಶಿಸಲು ಡಿ. 17ರಿಂದ 19ರವರೆಗೆ ಪ್ರದರ್ಶನವನ್ನು ಆಯೋಜಿಸಲಾಗಿದೆ. ಈ ಸಂದರ್ಭದಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಮತ್ತು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವರು ಭಾಗವಹಿಸಲಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು