News Karnataka Kannada
Saturday, April 27 2024
ಉತ್ತರ ಪ್ರದೇಶ

ಸಹೋದರನ ಎದುರೇ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ

Mass Rape 15 7 21
Photo Credit :

ಲಕ್ನೋ : ಸಹೋದರನ ಎದುರೇ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಹೀನಾಯವಾದ ಘಟನೆ ಉತ್ತರ ಪ್ರದೇಶದ ಮುಜಾಫರ್​​ನಗರದಲ್ಲಿ ನಡೆದಿದೆ. ಈ ಘಟನೆಯ ಸಂಬಂಧ ಮೂವರು ದುಷ್ಕರ್ಮಿಗಳನ್ನು ಬಂಧಿಸಲಾಗಿದೆ.
ಬಾಲಕಿ ಪೋಷಕರು ಕಾರ್ಯಕ್ರಮ ನಿಮಿತ್ತ ಬೇರೆ ಹಳ್ಳಿಗೆ ಹೀಗಿದ್ದಾಗ ಈ ಘಟನೆ ನಡೆದಿದೆ.
ಆರೋಪಿಯು ಬಾಲಕಿಗೆ ಕೋವಿಯನ್ನು ತೋರಿಸಿ ತನ್ನ ಮೂವರು ಸ್ನೇಹಿತರೊಂದಿಗೆ ಮನೆ ಒಳಗೆ ನುಗ್ಗಿದ್ದಾನೆ. ನಂತರ ಆರೋಪಿಗಳು ಬಾಲಕಿಯ 12 ವರ್ಷದ ಸಹೋದರನ ಎದುರೇ ಅತ್ಯಾಚಾರ ಎಸಗಿದ್ದಾರೆ. ಅಲ್ಲದೇ ಕೃತ್ಯದ ವಿಡಿಯೋವನ್ನು ಸಹ ಚಿತ್ರೀಕರಿಸಿದ್ದು, ಪೊಲೀಸರಿಗೆ ದೂರು ನೀಡಿದರೆ ಅದನ್ನು ವೈರಲ್ ಮಾಡುವುದಾಗಿ ಬಾಲಕಿಗೆ ಬೆದರಿಕೆ ಹಾಕಿದ್ದಾರೆ. ಬಾಲಕಿಯ ವೈದ್ಯಕೀಯ ವರದಿಯಲ್ಲಿ ಅತ್ಯಾಚಾರ ಎಸಗಿರುವುದು ದೃಢಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಾಲಕಿ ನೀಡಿದ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ. ಸಾಮೂಹಿಕ ಅತ್ಯಾಚಾರ, ಮನೆ ಅತಿಕ್ರಮಣ, ಕೊಲೆ ಬೆದರಿಕೆ ಮತ್ತು ಪೊಕ್ಸೊ ಕಾಯ್ದೆಯಡಿ ಬಂಧಿತ ಮೂವರ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು